Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯುವಜನರು ಯಾವ ಭರವಸೆ ಇಟ್ಟುಕೊಂಡು...

ಯುವಜನರು ಯಾವ ಭರವಸೆ ಇಟ್ಟುಕೊಂಡು ಬಿಜೆಪಿಗೆ ಮತ ನೀಡಬೇಕು?: ಡಾ.ಎಲ್.ಹನುಮಂತಯ್ಯ

ವಾರ್ತಾಭಾರತಿವಾರ್ತಾಭಾರತಿ31 Oct 2020 11:06 PM IST
share
ಯುವಜನರು ಯಾವ ಭರವಸೆ ಇಟ್ಟುಕೊಂಡು ಬಿಜೆಪಿಗೆ ಮತ ನೀಡಬೇಕು?: ಡಾ.ಎಲ್.ಹನುಮಂತಯ್ಯ

ತುಮಕೂರು.ಅ.31: ದೇಶದ ಯುವಜನರು ದೊಡ್ಡ ಪ್ರಮಾಣದ ಉದ್ಯೋಗದ ಸಮಸ್ಯೆ ಎದುರಿಸುತ್ತಿದ್ದು, ಯುವಜನರು ಯಾವ ಭರವಸೆ ಇಟ್ಟುಕೊಂಡು ಬಿಜೆಪಿಗೆ ಮತ ನೀಡಬೇಕು ಎಂದು ರಾಜ್ಯಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ ಪ್ರಶ್ನಿಸಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಎಸ್ಟಿ ಮತ್ತು ನೋಟು ಅಮಾನ್ಯೀಕರಣದ ಪರಿಣಾಮವಾಗಿ ಯುವಜನರಿಗೆ ಹೆಚ್ಚು ಉದ್ಯೋಗ ಒದಗಿಸುತ್ತಿದ್ದ ಮದ್ಯಮ ಮತ್ತು ಸಣ್ಣ ಕೈಗಾರಿಕೆಗಳು ಮುಚ್ಚಿ ಹೋದ ಪರಿಣಾಮ ಲಕ್ಷಾಂತರ ಜನರು ಉದ್ಯೋಗ ಕಳೆದುಕೊಂಡು ಬೀದಿಗೆ ಬೀಳುವಂತಾಯಿತು. ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರಕಾರ ಕಳೆದ ಆರು ವರ್ಷಗಳನ್ನು ಅದನ್ನು ಈಡೇರಿಸಿದೆಯೇ? ಇದನ್ನು ಪ್ರತಿಯೊಬ್ಬ ಯುವ ಮತದಾರರು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ ಎಂದರು.

ಕೇಂದ್ರ ಮತ್ತು ರಾಜ್ಯ ಸರಕಾರ ಜಾರಿಗೆ ತಂದಿರುವ ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಇದುವರೆಗೂ ಇದ್ದ ಭೂ ಹಿಡುವಳಿ ಸಣ್ಣ ಮತ್ತು ಅತಿ ಸಣ್ಣ ಹಿಡುವಳಿ ಕೈತಪ್ಪಿ ಕಂಪನಿ ಕೃಷಿಕರ ಪಾಲಾಗಲಿದೆ. ಇದರ ಪರಿಣಾಮ ರೈತರ ಮಕ್ಕಳು ದೊಡ್ಡ ದೊಡ್ಡ ಕೃಷಿ ಕಂಪನಿಗಳ ಮುಂದೆ ಕೂಲಿಯಾಳಾಗಿ ದುಡಿಯುವ ಪರಿಸ್ಥಿತಿಯನ್ನು ಬಿಜೆಪಿ ತಂದೊಡ್ಡಿದೆ. ಆದ್ದರಿಂದ ರೈತರು ಬಿಜೆಪಿಯಿಂದ ಅಂತರ ಕಾಯ್ದುಕೊಳ್ಳಬೇಕು ಎಂದು ಡಾ.ಎಲ್.ಹನುಮಂತಯ್ಯ ತಿಳಿಸಿದರು.

ಜಿಎಸ್ಟಿ ಅವೈಜ್ಞಾನಿಕ ಜಾರಿ ಹಾಗೂ ನೋಟು ಅಮಾನೀಕರಣದಿಂದ ಹಲವಾರು ಕಾರ್ಖಾನೆಗಳು ಮುಚ್ಚಿದ್ದು, ಅತಿಯಾದ ಜಿಎಸ್ಟಿ ತೆರಿಗೆಯಿಂದ ಸುಮಾರು 12 ಲಕ್ಷಕ್ಕೂ ಅಧಿಕ ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ದಿಮೆಗಳು ಮುಚ್ಚಿದ ಪರಿಣಾಮ ಅಲ್ಲಿ ದುಡಿಯುತ್ತಿದ್ದ ಕಾರ್ಮಿಕರು ಮತ್ತು ಕಾರ್ಮಿಕರ ಕುಟುಂಬ ಬೀದಿಗೆ ಬಿದ್ದಿವೆ. ಹಾಗಾಗಿ ಶಿರಾ ಮತ್ತು ಆರ್.ಆರ್.ನಗರ ಉಪ ಚುನಾವಣೆಯಲ್ಲಿ ಮತ ಹಾಕುವಾಗ ಬಿಜೆಪಿಯನ್ನು ತಿರಸ್ಕರಿಸುವಂತೆ ಕರೆ ನೀಡಿದ ಅವರು, ಶಿರಾ ಮತ್ತು ಆರ್.ಆರ್.ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಕಾರ್ಮಿಕರು, ಯುವಕರು, ರೈತರು ಮತ ಚಲಾಯಿಸುವಂತೆ ಮನವಿ ಮಾಡಿದರು.

ಮಾಜಿ ಸಚಿವ ಹೆಚ್.ಅಂಜನೇಯ ಮಾತನಾಡಿ, ಶಿರಾ ಕ್ಷೇತ್ರದ ಅಭಿವೃದ್ದಿ ವಿಚಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಎಂದಿಗೂ ರಾಜಿ ಮಾಡಿಕೊಂಡಿಲ್ಲ. ಕ್ಷೇತ್ರದಲ್ಲಿ ರಸ್ತೆ, ನೀರಾವರಿ, ಕುಡಿಯುವ ನೀರು ಸೇರಿದಂತೆ ಎಲ್ಲಾ ವಿಭಾಗಗಳಲ್ಲಿಯೂ ಕೆಲಸ ಮಾಡಿದ್ದಾರೆ. ನಾನು ಸಮಾಜ ಕಲ್ಯಾಣ ಸಚಿವನಾಗಿದ್ದ ವೇಳೆ 7ಕ್ಕೂ ಹೆಚ್ಚು ವಸತಿ ಶಾಲೆಗಳನ್ನು ಅವರ ಕ್ಷೇತ್ರಕ್ಕೆ ಮಂಜೂರು ಮಾಡಿಕೊಟ್ಟಿದ್ದೇನೆ. ಅಭಿವೃದ್ದಿಯೇ ಮೂಲ ಮಂತ್ರವಾಗಿಸಿಕೊಂಡಿರುವ ಟಿ.ಬಿ.ಜಯಚಂದ್ರ ಅವರಿಗೆ ಮತ ನೀಡುವ ಮೂಲಕ ಶಿರಾ ಕ್ಷೇತ್ರದ ಸಮಗ್ರ ಅಭಿವೃದ್ದಿಗೆ ಅವಕಾಶ ಕಲ್ಪಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಕೆಂಚಮಾರಯ್ಯ, ವಕೀಲರಾದ ಮರಿಚನ್ನಮ್ಮ, ಉದ್ಯಮಿ ವೆಂಕಟೇಶ್,ಮಾಜಿ ಉಪಮೇಯರ್ ರೂಪಶ್ರೀ, ಶಿವಾಜಿ, ಗೀತಮ್ಮ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X