ಬ್ರಹ್ಮಗಿರಿ ಜಂಕ್ಷನ್- ಬನ್ನಂಜೆ ರಸ್ತೆಗೆ ‘ನಾಡೋಜ ಡಾ.ಜಿ.ಶಂಕರ್ ರಸ್ತೆ’ ನಾಮಕರಣ

ಉಡುಪಿ, ನ.1: ರಾಜ್ಯ ಸರಕಾರದ ಆದೇಶದಂತೆ ‘ನಾಡೋಜ ಡಾ.ಜಿ. ಶಂಕರ್ ರಸ್ತೆ’ ಎಂದು ನಾಮಕರಣ ಮಾಡಲಾದ ಉಡುಪಿ ನಗರಸಭೆ ವ್ಯಾಪ್ತಿಯ ಬ್ರಹ್ಮಗಿರಿ ಜಂಕ್ಷನ್‌ನಿಂದ ಬನ್ನಂಜೆ ನಾರಾಯಣಗುರು ಮಂದಿರದ ವರೆಗಿನ ರಸ್ತೆಯನ್ನು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ರವಿವಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್, ಜಿಪಂ ಅಧ್ಯಕ್ಷ ದಿನಕರ ಬಾಬು, ಸಿಇಓ ಡಾ.ನವೀನ್ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಎಸ್ಪಿ ವಿಷ್ಣುವರ್ಧನ್, ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ಪಾಲ್ ಸುವರ್ಣ, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್, ಪೌರಾಯುಕ್ತ ಆನಂದ ಕಲ್ಲೋಳಿಕರ್, ತಹಶೀಲ್ದಾರ್ ಪ್ರದೀಪ್ ಕುರ್ಡೆಕರ್, ಜಿ.ಶಂಕರ್ ಪುತ್ರಿ ಶ್ಯಾಮಿಲಿ ನವೀನ್, ನವೀನ್, ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಕೋಟ್ಯಾನ್, ಮೊಗವೀರ ಯುವ ಸಂಘಟನೆಯ ಜಿಲ್ಲಾಧ್ಯಕ್ಷ ಶಿವರಾಮ್ ಮೊದಲಾದವರು ಉಪಸ್ಥಿತರಿದ್ದರು.

Next Story





