Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವ್ಯಕ್ತಿಯ ಹತ್ಯೆ ಪ್ರಕರಣ: ಪತ್ನಿ, ಆಕೆಯ...

ವ್ಯಕ್ತಿಯ ಹತ್ಯೆ ಪ್ರಕರಣ: ಪತ್ನಿ, ಆಕೆಯ ಅಣ್ಣನಿಗೆ ಶಿಕ್ಷೆ ಕಾಯಂಗೊಳಿಸಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ1 Nov 2020 8:28 PM IST
share
ವ್ಯಕ್ತಿಯ ಹತ್ಯೆ ಪ್ರಕರಣ: ಪತ್ನಿ, ಆಕೆಯ ಅಣ್ಣನಿಗೆ ಶಿಕ್ಷೆ ಕಾಯಂಗೊಳಿಸಿದ ಹೈಕೋರ್ಟ್

ಬೆಂಗಳೂರು, ನ.1: ಪತಿಯನ್ನು ಹತ್ಯೆ ಮಾಡಿ ಬಳಿಕ ಆತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಬಿಂಬಿಸಲು ಪ್ರಯತ್ನಿಸಿದ್ದ ಅಣ್ಣ-ತಂಗಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯನ್ನು ಹೈಕೋರ್ಟ್ ಖಾಯಂಗೊಳಿಸಿ ಆದೇಶಿಸಿದೆ.

ಪತಿ ನಾಗಮಹದೇವನನ್ನು ಕೊಲೆ ಮಾಡಿದ ಪ್ರಕರಣದಲ್ಲಿ ನಗರದ 52 ನೆ ಸಿಸಿಎಚ್ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ರದ್ದಪಡಿಸುವಂತೆ ಕೋರಿ ಮಾಲತಿ ಹಾಗೂ ಆಕೆಯ ಅಣ್ಣ ಗಿರೀಶ್ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದ ವಿಭಾಗೀಯ ಪೀಠ ಆರೋಪಿಗಳ ಮನವಿಯನ್ನು ವಜಾಗೊಳಿಸಿದೆ. ಅಲ್ಲದೇ, ತಂಗಿಗೆ ವಿಧಿಸಿದ್ದ ಶಿಕ್ಷೆಯನ್ನು ಕಾಯಂಗೊಳಿಸಿರುವ ಪೀಠ, 1 ಲಕ್ಷ ದಂಡವನ್ನು ವಿಧಿಸಿದೆ.

ಇದೇ ವೇಳೆ ಕೊಲೆಗೆ ಸಹಕಾರ ನೀಡಿದ ಆರೋಪದಡಿ ಮಾಲತಿ ಅಣ್ಣ ಗಿರೀಶನಿಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು 9 ವರ್ಷಗಳಿಗೆ ಇಳಿಸಿದೆ. ಹಾಗೆಯೇ 25 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. ಕೊಲೆ ಪ್ರಕರಣದಲ್ಲಿ ಪೊಲೀಸರು ಆರಂಭದಲ್ಲಿ ಯುಡಿಆರ್ ದಾಖಲಿಸಿ ಕೈತೊಳೆದುಕೊಂಡಿದ್ದಾರೆ. ಆರೋಪಿಗಳು ಸಾಕ್ಷ್ಯ ನಾಶಪಡಿಸಿದ್ದರೂ, ಪ್ರತ್ಯಕ್ಷದರ್ಶಿಯ ಸಾಕ್ಷ್ಯವಿರುವುದರಿಂದ ಶಿಕ್ಷೆ ವಿಧಿಸಿರುವುದು ಸರಿಯಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಆರೋಪಿಗಳು ಘಟನೆ ನಡೆದ 51 ದಿನಗಳ ಬಳಿಕ ದೂರು ನೀಡಲಾಗಿದೆ. ಇಂತಹ ಹೇಳಿಕೆ ಆಧರಿಸಿ ಶಿಕ್ಷೆ ನೀಡಿರುವುದು ಸರಿಯಲ್ಲ. ಹೀಗಾಗಿ, ಆರೋಪಿಗಳಿಗೆ ವಿಧಿಸಿರುವ ಜೀವಾವಧಿ ಶಿಕ್ಷೆಯನ್ನು ರದ್ದುಪಡಿಸಬೇಕು ಎಂದು ಆರೋಪಿಗಳ ಪರ ವಕೀಲರು ಮನವಿ ಮಾಡಿದ್ದರು. ಆದರೆ, ಈ ವಾದವನ್ನು ಹೈಕೋರ್ಟ್ ತಿರಸ್ಕರಿಸಿದೆ.

ಪ್ರಕರಣವೇನು: ಜೆಪಿ ನಗರದಲ್ಲಿ ವಾಸವಿದ್ದ ನಾಗಮಹದೇವ ಹಾಗೂ ಮಾಲತಿ ದಂಪತಿ ನಡುವೆ ಅಕ್ರಮ ಸಂಬಂಧದ ವಿಚಾರವಾಗಿ ಪದೇ ಪದೇ ಗಲಾಟೆಯಾಗುತ್ತಿತ್ತು. ಪತ್ನಿ ಮಾಲತಿಯು ಸರ್ವೇಶ್ ಎಂಬಾತನ ಜತೆ ಸಂಬಂಧ ಹೊಂದಿದ್ದಾಳೆ ಎಂದು ಪತಿ ಜಗಳ ತೆಗೆಯುತ್ತಿದ್ದ. ಇದೇ ವಿಚಾರವಾಗಿ 2005ರ ಮೇ 17ರಂದು ದಂಪತಿ ನಡುವೆ ಜಗಳವಾಗಿ ಮಾಲತಿ ಪತಿ ನಾಗಮಹದೇವನ ಮರ್ಮಾಂಗಕ್ಕೆ ಒದ್ದಿದ್ದಳು. ಈ ವೇಳೆ ಪತಿ ಕುಸಿದು ಬಿದ್ದಿದ್ದ. ಗಲಾಟೆ ಕೇಳಿ ಪಕ್ಕದ ಮನೆಯಲ್ಲಿದ್ದ ಅಣ್ಣ ಗಿರೀಶ್ ಮನೆಗೆ ಬರುತ್ತಲೇ ಮಾಲತಿ ಕುಸಿದು ಬಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಳು.

ಇದಕ್ಕೆ ಗಿರೀಶನೂ ಸಹಾಯ ನೀಡಿದ್ದ. ನಾಗಮಹದೇವ ಸಾವನ್ನಪ್ಪಿದ ಬಳಿಕ ಆತನ ಮೃತ ದೇಹವನ್ನು ಫ್ಯಾನ್ ಗೆ ನೇತು ಹಾಕಿ ಆತ್ಮಹತ್ಯೆ ಎಂದು ಬಿಂಬಿಸಿದ್ದರು. ಈ ಎಲ್ಲ ಘಟನೆಯನ್ನು ಮನೆಯಲ್ಲಿದ್ದ ಸಂಬಂಧಿ ರಶ್ಮಿ ನೋಡಿದ್ದರೂ, ಆಕೆಗೆ ಬೆದರಿಸಿ ವಿಷಯ ಮುಚ್ಚಿಟ್ಟಿದ್ದರು. ಅಂತ್ಯಸಂಸ್ಕಾರದ ವೇಳೆ ಮೃತನ ಸಹೋದರನಿಗೆ ಸಂಶಯ ಬಂದು ಪೊಲೀಸರಿಗೆ ದೂರು ನೀಡಿದ್ದ. ಪೊಲೀಸರು ಮರಣೋತ್ತರ ಪರೀಕ್ಷೆ ನಡೆಸಿ ಪ್ರಕರಣವನ್ನು ಅಲ್ಲಿಗೇ ಕೈಬಿಟ್ಟಿದ್ದರು.

ಮಾಲತಿ ಅಣ್ಣ ಗಿರೀಶ ಪೊಲೀಸ್ ಪೇದೆಯಾಗಿದ್ದರಿಂದ ಹಾಗೂ ಏನೂ ನಡೆದೇ ಇಲ್ಲ ಎಂಬಂತೆ ಅಣ್ಣ ತಂಗಿ ವರ್ತಿಸಿದ್ದರಿಂದ ಪೊಲೀಸರಿಗೂ ಅನುಮಾನ ಬಂದಿರಲಿಲ್ಲ. ಆದರೆ, ಕೊಲೆ ನಡೆದು 51 ದಿನಗಳಾದ ಬಳಿಕ ಪ್ರಕರಣದ ಪ್ರತ್ಯಕ್ಷ ಸಾಕ್ಷ್ಯಿ ರಶ್ಮಿ ಪೊಲೀಸರಿಗೆ ದೂರು ನೀಡಿ, ಘಟನೆಯನ್ನು ವಿವರಿಸಿದಾಗ ಆರೋಪಿಗಳು ಸಿಕ್ಕಿಬಿದ್ದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X