ಬಂಟ್ವಾಳದ ಜಯಲಕ್ಷ್ಮಿ ಜಿ.ಗೆ ಕ್ರೀಡಾರತ್ನ ಪ್ರಶಸ್ತಿ

ಬಂಟ್ವಾಳ, ನ.1: ಬಂಟ್ವಾಳ ತಾಲೂಕಿನ ಕಡೇಶ್ವಾಲ್ಯ ಗ್ರಾಮದ ನಿವಾಸಿ ಜಯಲಕ್ಷೀ ಜಿ. ಅವರು 2017ನೇ ಸಾಲಿನ ಕ್ರೀಡಾರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಮೂಡಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಪಡೆದಿರುವ ಅವರು ಪ್ರಸಕ್ತ ಅದೇ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಬಾಲ್ ಬಾಡ್ಮಿಂಟನ್ ಕೋಚಿಂಗ್ ನೀಡುತ್ತಿದ್ದಾರೆ.
ಕಡೇಶ್ವಾಲ್ಯ ಪೆರ್ಲಾಪು ಗಾಣದಕೊಟ್ಯ ನಿವಾಸಿ ದಿ. ವಿಶ್ವನಾಥ ಸಪಲ್ಯ ಮತ್ತು ರೇವತಿ ದಂಪತಿಯ ಪುತ್ರಿಯಾಗಿರುವ ಅವರು ಕಡೇಶ್ವಾಲ್ಯ ಸರಕಾರಿ ಪ್ರೌಢಶಾಲೆಯಲ್ಲಿ ಎಸೆಸೆಲ್ಸಿ ಪೂರ್ಣಗೊಳಿಸಿ, ಬಳಿಕ ಆಳ್ವಾಸ್‌ನಲ್ಲಿ ಪಿಯು ಉಚಿತ ಶಿಕ್ಷಣ ಪಡೆದಿರುತ್ತಾರೆ. ಅದೇ ಕಾಲೇಜಿನಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿಯನ್ನೂ ಪೂರ್ಣಗೊಳಿಸಿರುತ್ತಾರೆ.
ತನ್ನ ಕೋಚ್ ಪ್ರವೀಣ್ ಕುಮಾರ್ ಅವರಿಂದ ಬಾಲ್ ಬ್ಯಾಡ್ಮಿಂಟನ್ ಕಲಿತು ರಾಷ್ಟçಮಟ್ಟದ ಕ್ರೀಡಾಪಟುವಾಗಿ ಕರ್ನಾಟಕ ತಂಡದ ನಾಯಕಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ. ರಾಷ್ಟçಮಟ್ಟದಲ್ಲಿ ನಾಲ್ಕು ಬಾರಿ ಸ್ಟಾರ್ ಆಫ್ ಇಂಡಿಯಾ ಪ್ರಶಸ್ತಿಯನ್ನೂ ಪಡೆದಿದ್ದಾರೆ.
Next Story





