Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೇಂದ್ರದಿಂದ ಪರಿಹಾರ ಕೇಳಲು ಭಯವೇ?:...

ಕೇಂದ್ರದಿಂದ ಪರಿಹಾರ ಕೇಳಲು ಭಯವೇ?: ಬಿಎಸ್‍ವೈ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

"ಪ್ರವಾಹ ಸಂತ್ರಸ್ತರ ಪರಿಹಾರದ ಹಣ ಸಿಎಂ, ಸಚಿವರ ಜೇಬಿಗೆ ಹೋಯಿತಾ?"

ವಾರ್ತಾಭಾರತಿವಾರ್ತಾಭಾರತಿ2 Nov 2020 3:45 PM IST
share
ಕೇಂದ್ರದಿಂದ ಪರಿಹಾರ ಕೇಳಲು ಭಯವೇ?: ಬಿಎಸ್‍ವೈ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು, ನ. 2: 'ಪ್ರವಾಹ ಪೀಡಿತ ರೈತರಿಗೆ ಪರಿಹಾರ ನೀಡಲೂ ದುಡ್ಡಿಲ್ಲ. ಕೊರೋನ ಚಿಕಿತ್ಸೆಗೆ ಹಣವಿಲ್ಲ, ಬೊಕ್ಕಸ ಮಾತ್ರ ಖಾಲಿಯಾಗಿದೆ ಎಂದು ರಾಜ್ಯ ಸರಕಾರ 90 ಸಾವಿರ ಕೋಟಿ ರೂ. ಸಾಲ ಮಾಡಲು ಹೊರಟಿದೆ. ಹಾಗಿದ್ದರೆ ದುಡ್ಡೆಲ್ಲಿ ಹೋಯಿತು? ಮುಖ್ಯಮಂತ್ರಿಗಳು ಮತ್ತು ಸಚಿವರ ಜೇಬಿಗೆ ಹೋಯಿತಾ? ಬಿಎಸ್‍ವೈ ಉತ್ತರ ಕೊಡಿ' ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸೋಮವಾರ ಸರಣಿ ಟ್ವೀಟ್ ಮಾಡಿರುವ ಅವರು, `ಕಳೆದ ವರ್ಷ ಸರಕಾರ ನಡೆಸಿದ್ದ ಸಮೀಕ್ಷೆಯಂತೆ ನೆರೆಯಿಂದಾಗಿ ಹಾನಿಗೀಡಾದ ಮನೆಗಳು 2.24 ಲಕ್ಷ. ಪರಿಹಾರ ನೀಡಿರುವುದು ಮಾತ್ರ 1.24 ಲಕ್ಷ ಮನೆಗಳಿಗೆ ಎಂದು ಕೇಂದ್ರಕ್ಕೆ ವರದಿ ಕಳುಹಿಸಲಾಗಿದೆ. ಇನ್ನು ಈ ವರ್ಷದ ಮಳೆಗೆ ಹಾನಿಗೀಡಾಗಿರುವ ಮನೆಗಳಿಗೆ ಪರಿಹಾರ ಈ ಸರಕಾರ ನೀಡುವುದು ಹೇಗೆ ಸಾಧ್ಯ?' ಎಂದು ಕೇಳಿದ್ದಾರೆ.

`ಕಳೆದ ವರ್ಷದ ಬೆಳೆ-ಮನೆ ಕಳೆದುಕೊಂಡವರಿಗೆ ಇನ್ನೂ ಸರಿಯಾಗಿ ಪರಿಹಾರ ಕೊಟ್ಟಿಲ್ಲ, ಈ ವರ್ಷ ಸಮೀಕ್ಷೆಯನ್ನೇ ಮಾಡಿಲ್ಲ. ಮುಖ್ಯಮಂತ್ರಿ, ಸಚಿವರು ಚುನಾವಣಾ ಪ್ರಚಾರದಲ್ಲಿ ತಲ್ಲೀನರಾಗಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲೆಯ ಅಧಿಕಾರಿಗಳು ಮನೆಯಲ್ಲಿ ಹಾಯಾಗಿದ್ದಾರೆ, ಸಂತ್ರಸ್ತರು ಬೀದಿಯಲ್ಲಿದ್ದಾರೆ' ಎಂದು ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

`ಕಳೆದ ವರ್ಷದ ಅತಿವೃಷ್ಟಿ ಹಾನಿಗೆ ರಾಜ್ಯ ಸರಕಾರ ಕೇಂದ್ರದಿಂದ ಕೇಳಿದ್ದು 35 ಸಾವಿರ ಕೋಟಿ ರೂ.ಪರಿಹಾರ ಅವರು ನೀಡಿದ್ದು 1,654 ಕೋಟಿ ರೂ., ಈ ಬಾರಿ ರಾಜ್ಯ ಸರಕಾರ ಈ ವರೆಗೆ ಕೇಳಿದ್ದು 4 ಸಾವಿರ ಕೋಟಿ ರೂ. ಕೇಂದ್ರದಿಂದ ಪರಿಹಾರ ಕೇಳಲೂ ಭಯನಾ? ಮುಖ್ಯಮಂತ್ರಿ ಯಡಿಯೂರಪ್ಪನವರೇ ಉತ್ತರಕೊಡಿ' ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

`ಆಗಸ್ಟ್ ನಿಂದ ಮೂರು ತಿಂಗಳು ಸುರಿದ ಮಳೆಯಿಂದಾಗಿ 23 ಜಿಲ್ಲೆಗಳ 130 ತಾಲೂಕುಗಳು ಬಾಧಿತವಾಗಿವೆ. ಕಳೆದ ವರ್ಷ ಹತ್ತು ಲಕ್ಷ ಹೆಕ್ಟೇರ್ ಕೃಷಿಭೂಮಿ ಹಾನಿಗೀಡಾಗಿದ್ದರೆ, ಈ ವರ್ಷ 11 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ರೈತರು ಬೆಳೆ ಕಳೆದುಕೊಂಡಿದ್ದಾರೆ. ಈ ದುಪ್ಪಟ್ಟು ನಷ್ಟದಿಂದ ರೈತರು ನೆಲಹಿಡಿದಿದ್ದಾರೆ' ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರಕಾರದ ಗಮನ ಸೆಳೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X