ನಟಿ, ಮಾಜಿ ಸಚಿವೆ ಉಮಾಶ್ರೀ ಮನೆಯಲ್ಲಿ ಕಳವು
![ನಟಿ, ಮಾಜಿ ಸಚಿವೆ ಉಮಾಶ್ರೀ ಮನೆಯಲ್ಲಿ ಕಳವು ನಟಿ, ಮಾಜಿ ಸಚಿವೆ ಉಮಾಶ್ರೀ ಮನೆಯಲ್ಲಿ ಕಳವು](https://www.varthabharati.in/sites/default/files/images/articles/2020/11/2/265773-1604320744.jpg)
ಬಾಗಲಕೋಟೆ, ನ. 2: ಹಿರಿಯ ಸಿನೆಮಾ ನಟಿ, ಮಾಜಿ ಸಚಿವೆ ಉಮಾಶ್ರೀ ಅವರ ಮನೆಯಲ್ಲಿ ಕಳ್ಳತನ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬನಹಟ್ಟಿ ತಾಲೂಕಿನ ರಬಕವಿಯ ವಿದ್ಯಾನಗರದಲ್ಲಿರುವ ಉಮಾಶ್ರೀ ಅವರ ಮನೆಯಲ್ಲಿ ಕಳ್ಳತನವಾಗಿದ್ದು, ಮನೆಯ ಬಾಗಿಲು ಮುರಿದಿರುವ ದುಷ್ಕರ್ಮಿಗಳು ನಗದು, ಚಿನ್ನಾಭರಣ ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನಲ್ಲಿ ಉಮಾಶ್ರೀ ವಾಸ ಮಾಡುತ್ತಿರುವುದನ್ನೇ ಗುರಿಯಾಗಿಸಿಕೊಂಡು ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ ಎಂದು ಹೇಳಲಾಗುತ್ತಿದ್ದು, ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು, ಪರಿಶೀಲನೆ ನಡೆಸಿದರು.
Next Story