Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆರ್.ಆರ್.ನಗರದಲ್ಲಿ 42 ಸಾವಿರ ನಕಲಿ...

ಆರ್.ಆರ್.ನಗರದಲ್ಲಿ 42 ಸಾವಿರ ನಕಲಿ ಮತದಾರರು: ಡಿ.ಕೆ.ಶಿವಕುಮಾರ್ ಆರೋಪ

ವಾರ್ತಾಭಾರತಿವಾರ್ತಾಭಾರತಿ2 Nov 2020 7:59 PM IST
share
ಆರ್.ಆರ್.ನಗರದಲ್ಲಿ 42 ಸಾವಿರ ನಕಲಿ ಮತದಾರರು: ಡಿ.ಕೆ.ಶಿವಕುಮಾರ್ ಆರೋಪ

ಬೆಂಗಳೂರು, ನ.2: ನನ್ನ 40 ವರ್ಷದ ರಾಜಕಾರಣದಲ್ಲಿ ಅಚ್ಚರಿಯಾಗುವ ರೀತಿಯಲ್ಲಿ ಆರ್.ಆರ್.ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಯ್ಡು ನಕಲಿ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಿ ಅಕ್ರಮ ಮಾಡಿದ್ದಾರೆ. ನಮ್ಮ ಕಾರ್ಯಕರ್ತರು ಕಳೆದೊಂದು ತಿಂಗಳಿಂದ ಮನೆ ಮನೆಗೂ ಹೋಗಿ ಸಮೀಕ್ಷೆ ನಡೆಸಿದ್ದು, ಇದರಲ್ಲಿ 42 ಸಾವಿರಕ್ಕೂ ಹೆಚ್ಚು ನಕಲಿ ಮತದಾರರ ಹೆಸರನ್ನು ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದರು.

ಸೋಮವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಖಾಲಿ ನಿವೇಶನಗಳ ವಿಳಾಸದಲ್ಲಿ ನಕಲಿ 5 ರಿಂದ 10 ಮತದಾರರ ಹೆಸರು ಸೇರಿಸಲಾಗಿದೆ. ಕೊಟ್ಟಿಗೆಪಾಳ್ಯದ ಡೋಬಿಘಾಟ್ ನ ಖಾಲಿ ಜಾಗದ ಶೆಡ್ ವೊಂದರಲ್ಲೇ  ಬರೋಬ್ಬರಿ 56 ಮಂದಿ ಹೆಸರು ಸೇರಿಸಲಾಗಿದೆ. ಆಂಧ್ರಪ್ರದೇಶದ ಚಿತ್ತೂರು, ತಮಿಳುನಾಡಿನಿಂದ ನಕಲಿ ಮತದಾರರನ್ನು ಕರೆದುಕೊಂಡು ಬಂದು ಇಲ್ಲಿ ಹೆಸರು ಸೇರಿಸಿದ್ದಾರೆ ಎಂದು ದೂರಿದರು.

ಒಂದು ಮನೆಯಲ್ಲಿ ಇಬ್ಬರು ಮೂವರು ಸದಸ್ಯರಿದ್ದರೆ ಅವರಿಗೆ ಗೊತ್ತಿಲ್ಲದೆ ಸುಮಾರು ಐದು, ಹತ್ತು, ಹದಿನೈದು ಜನರ ಹೆಸರನ್ನು ಹೆಚ್ಚುವರಿಯಾಗಿ ಸೇರಿಸಲಾಗಿದೆ. ನಮ್ಮ ಕಾರ್ಯಕರ್ತರು ನಿಮ್ಮ ಮನೆಯಲ್ಲಿ ಎಂಟು ಮತ ಇದೆ ಎಂದು ಕೇಳಿದರೆ, ಮನೆಯವರೇ ಗಾಬರಿ ಬಿದ್ದು, ಇರುವುದು ಬರೀ ಇಬ್ಬರು ಮಾತ್ರ ಎಂದಿದ್ದಾರೆ. ಈ ಎಲ್ಲದರ ಬಗ್ಗೆ ನನ್ನ ಬಳಿ ದಾಖಲೆ ಇದೆ. ಇಲ್ಲಿ ಬಂದು ಸುಮ್ಮನೆ ಆರೋಪ ಮಾಡುತ್ತಿಲ್ಲ. ಸಾಕ್ಷಿ ಸಮೇತ ಹೇಳುತ್ತಿದ್ದೇನೆ ಎಂದು ಶಿವಕುಮಾರ್ ಹೇಳಿದರು.

ರಾಜರಾಜೇಶ್ವರಿ ವಾರ್ಡ್ 160 ಖಾಲಿ ನಿವೇಶನದಲ್ಲಿ, ಬೂತ್ 362 ಮನೆ ಸಂ.14 ರಲ್ಲಿ 15 ನಕಲಿ ಮತಗಳು ಸೃಷ್ಟಿಯಾಗಿವೆ. ಇವು ಕೇವಲ ಉದಾಹರಣೆ. ಇಂತಹ ನಕಲಿ ಮತಗಳು ಎಲ್ಲೆಡೆ ಇವೆ. ಎಲ್ಲಿ ಎಷ್ಟು ಜನ ಇದ್ದಾರೆ, ಯಾವುದು ಖಾಲಿ ನಿವೇಶನ ಅಂತಾ ವಿಡಿಯೋ ಮಾಡಿಸಿದ್ದೇನೆ. ಈ ಅಕ್ರಮದಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ. ಅವರ ನೆರವಿಲ್ಲದೆ ಇದನ್ನು ಮಾಡಲು ಸಾಧ್ಯವೇ ಇಲ್ಲ ಎಂದು ಅವರು ಕಿಡಿಗಾರಿದರು.

ಈ ಎಲ್ಲ ಅಕ್ರಮಗಳ ಹಿನ್ನೆಲೆಯಲ್ಲಿ ಮತದಾರರು ಮತ ಹಾಕಲು ಹೋದಾಗ ಅಲ್ಲಿನ ಮತದಾರರ ಪಟ್ಟಿಯ ನಿಮ್ಮ ವಿಳಾಸದಲ್ಲಿ ಸೇರಿರುವ ನಕಲಿ ಮತಗಳನ್ನು ಅಲ್ಲೇ ತೆಗೆಸಬೇಕು. ನಿಮ್ಮ ಮನೆ ವಿಳಾಸದಲ್ಲಿ, ನಿಮ್ಮ ವೈಯಕ್ತಿಕ ಆಸ್ತಿಯಲ್ಲಿ ಮುನಿರತ್ನ ಬೋಗಸ್ ಮತ ಸೇರಿಸಿ ಈ ಅಕ್ರಮ ಮಾಡುತ್ತಿದ್ದಾರೆ. ನೀವು ನಿಮ್ಮ ಗೌರವ, ಸಾರ್ವಭೌಮತ್ವ ಕಾಪಾಡಿಕೊಳ್ಳಬೇಕು. ನಿಮ್ಮ ವಿಳಾಸದಲ್ಲಿ ಬೇರೆಯವರು ಮತ ಹಾಕಲು ಅವಕಾಶ ನೀಡಬೇಡಿ ಎಂದು ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಮತದಾರರಿಗೆ ಅವರು ಮನವಿ ಮಾಡಿದರು.

ನಾನು ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇನೆ. ಈ ಅಕ್ರಮದಲ್ಲಿ ಸರಕಾರ ಹಾಗೂ ಅಧಿಕಾರಿಗಳು ಕೈ ಜೋಡಿಸಿದ್ದು, ಸಂಬಂಧಪಟ್ಟವರ ಬಂಧನಕ್ಕೆ ಚುನಾವಣಾಧಿಕಾರಿ(ರಿಟನಿರ್ಂಗ್ ಆಫೀಸರ್) ಕ್ರಮ ಕೈಗೊಳ್ಳಬೇಕು ಎಂದು ಶಿವಕುಮಾರ್ ಆಗ್ರಹಿಸಿದರು.

ಮುನಿರತ್ನ ಅವರ ನಕಲಿ ಮತದಾರರ ಗುರುತಿನ ಚೀಟಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮಾತನಾಡಿದ್ದಾರೆ. ಇವರು ಯಾರು ಸಾಕ್ಷಿ ಇಲ್ಲದೆ ಮಾತನಾಡಿಲ್ಲ. ಒಂದೊಮ್ಮೆ ಅವರು ಸುಳ್ಳು ಹೇಳಿದ್ದರೆ ಮುನಿರತ್ನ ಅವರು ಅವರ ವಿರುದ್ಧ ಕೇಸ್ ಹಾಕಬಹುದಿತ್ತು. ಆದರೆ ಕೇಸ್ ಹಾಕದೇ ಅವರ ಆರೋಪಗಳು ನಿಜ ಎಂದು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ ಎಂದು ಶಿವಕುಮಾರ್ ಹೇಳಿದರು.

ಪೊಲೀಸ್ ಇನ್ಸ್ ಪೆಕ್ಟರ್ ಗಳು ಕಾರ್ಯಕರ್ತರಿಗೆ ಕಾಲ್ ಮಾಡಿ ಠಾಣೆಗೆ ಕರೆಸುತ್ತಿದ್ದಾರೆ. ಇಂಥವರ ಪರವಾಗಿ ಕೆಲಸ ಮಾಡಿ ಎಂದು ಹುಕುಂ ಚಲಾಯಿಸುತ್ತಿದ್ದಾರೆ. ಅವರ ಬಗ್ಗೆ  ಆಯೋಗಕ್ಕೆ ದೂರು ನೀಡುತ್ತೇನೆ. ಮತದಾರರು ಜಾಗೃತರಾಗಬೇಕು. ಇವತ್ತು ಹಣ ಹಂಚುತ್ತಿರುವ ಬಗ್ಗೆ ನೂರಾರು ವಿಡಿಯೋಗಳು ಬರುತ್ತಿವೆ. ಮಾಸ್ಕ್ ಒಳಗೆ 1 ಸಾವಿರ ಇಟ್ಟು ಕೊಡುತ್ತಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗ ಗಮನ ಹರಿಸಬೇಕು ಎಂದು ಶಿವಕುಮಾರ್ ಒತ್ತಾಯಿಸಿದರು.

ಒಂದು ಪಕ್ಷದ ಅಧ್ಯಕ್ಷನಾಗಿ ನಾನು ಈ ಚುನಾವಣೆಯಲ್ಲಿ ನಡೆಯುತ್ತಿರುವ ಅಕ್ರಮ, ಕಾನೂನು ಬಾಹಿರ ಚಟುವಟಿಕೆಗಳನ್ನು ಬಹಿರಂಗ ಮಾಡುತ್ತಿದ್ದೇನೆಯೇ ಹೊರತು, ಮತ ಹಾಕಿ ಎಂದು ಹೇಳುತ್ತಿಲ್ಲ. ಪ್ರಚಾರ ಮಾಡುತ್ತಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

'ಆಸ್ತಿ ಹೆಚ್ಚಳದ ಬಗ್ಗೆ ತನಿಖೆ ಯಾಕಿಲ್ಲ?': ಮುನಿರತ್ನ ತಮ್ಮ ಆಸ್ತಿ ಅಫೀಡೇವಿಟ್ ನಲ್ಲಿ 78 ಕೋಟಿ ರುಪಾಯಿ ಘೋಷಣೆ ಮಾಡಿದ್ದು, ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಅವರ ಆಸ್ತಿ 35 ರಿಂದ 40 ಕೋಟಿಯಷ್ಟು ಹೆಚ್ಚಾಗಿದೆ. ಈ ಹಣ ಎಲ್ಲಿಂದ ಬಂತು, ಆಪರೇಷನ್ ಕಮಲದ ಹಣವೇ? ಯಾರು ಕೊಟ್ಟರು ಎಂದು ಐಟಿ, ಈಡಿ ತನಿಖೆ ಮಾಡಬೇಕು. ಯಡಿಯೂರಪ್ಪ ನಮ್ಮ ಮೇಲೆ ತನಿಖೆ ಮಾಡಲು ಅನುಮತಿ ಕೊಟ್ಟರಲ್ಲಾ? ಇವರ ವಿರುದ್ಧ ವಿಚಾರಣೆಗೆ ಅನುಮತಿ ಯಾಕೆ ಕೊಟ್ಟಿಲ್ಲ? ಎಂದು ಶಿವಕುಮಾರ್ ಪ್ರಶ್ನಿಸಿದರು.

ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಾಜಿ ಸಚಿವರಾದ ರಾಮಲಿಂಗಾರೆಡ್ಡಿ, ಎಚ್.ಎಂ.ರೇವಣ್ಣ, ಮಾಜಿ ಸಂಸದರಾದ ವಿ.ಎಸ್.ಉಗ್ರಪ್ಪ, ಧ್ರುವನಾರಾಯಣ, ಕೆಪಿಸಿಸಿ ಮಾಧ್ಯಮ ವಿಭಾಗದ ಸಹ ಅಧ್ಯಕ್ಷ ವಿ.ಆರ್.ಸುದರ್ಶನ್, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಬಿ.ಪುಷ್ಪ ಅಮರನಾಥ್ ಅವರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X