ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾಪಂ ಸದಸ್ಯನ ಬರ್ಬರ ಹತ್ಯೆ

ಕಲಬುರಗಿ, ನ.3: ಗ್ರಾಮ ಪಂಚಾಯತ್ ಸದಸ್ಯರೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ನಗರದಲ್ಲಿ ಕಳೆದ ರಾತ್ರಿ 11 ಗಂಟೆ ಸುಮಾರಿಗೆ ನಡೆದಿದೆ.
ಆಳಂದ ತಾಲೂಕಿನ ಕಡಗಂಚಿ ಗ್ರಾಮದ ಶಿವಲಿಂಗಪ್ಪ ಭೋಗಶೆಟ್ಟಿ (55) ಕೊಲೆಯಾದ ಗ್ರಾಪಂ ಸದಸ್ಯ.
ಕಲಬುರಗಿ ನಗರದ ಕೈಲಾಶ್ ನಗರದಲ್ಲಿ ಈ ಹತ್ಯೆ ನಡೆದಿದೆ. ಶಿವಲಿಂಗಪ್ಪರ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಜಮೀನು ವಿವಾದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಆರ್.ಜಿ. ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
Next Story





