ನ.4ರಂದು ಮುಖ್ಯಮಂತ್ರಿ ಯಡಿಯೂರಪ್ಪ ಮಂಗಳೂರಿಗೆ

ಮಂಗಳೂರು, ನ.3: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನ.4ರಂದು ಮಂಗಳೂರು ನಗರಕ್ಕೆ ಭೇಟಿ ನೀಡಲಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಂಜೆ 6 ಗಂಟೆ ಹೊರಡುವ ಮುಖ್ಯಮಂತ್ರಿ ಸಂಜೆ 7 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಮಂಗಳೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ.
ಮರುದಿನ (ನ.5) ಬೆಳಗ್ಗೆ 10 ಗಂಟೆಗೆ ನಗರದ ನವಭಾರತ ಸರ್ಕಲ್ ಸಮೀಪದ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ನಡೆಯುವ ಭಾರತೀಯ ಜನತಾ ಪಕ್ಷದ ರಾಜ್ಯ ವಿಶೇಷ ಸಭೆಯನ್ನು ಉದ್ಘಾಟಿಸಲಿದ್ದಾರೆ. ಬಳಿಕ ನಗರದ ಓಶಿಯನ್ ಪರ್ಲ ಹೊಟೇಲ್‌ನಲ್ಲಿ ಬೆಳಗ್ಗೆ 11:30ರಿಂದ ನಡೆಯುವ ಬಿಜೆಪಿಯ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 2:30ಕ್ಕೆ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ಬಿಜೆಪಿಯ ರಾಜ್ಯ ವಿಶೇಷ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ 7:35ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಲಿದ್ದು, ಅಲ್ಲಿಂದ ಕೇಂದ್ರ ಸ್ಥಾನ ತಲುಪಲಿದ್ದಾರೆ.
ಕೋವಿಡ್-19ರ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಸಚಿವರು, ಶಾಸಕರು, ಸಂಸತ್ ಸದಸ್ಯರು ಕಡ್ಡಾಯವಾಗಿ ಮಾಸ್ಕ್‌ಗಳನ್ನು ಧರಿಸಿ, ಸುರಕ್ಷಿತ ಅಂತರ ಕಾಯ್ದುಕೊಳ್ಳುವಂತೆ ಪ್ರಕಟನೆ ತಿಳಿಸಿದೆ.





