Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಯಡಿಯೂರಪ್ಪ ಕೊಟ್ಟ ಮಾತು ತಪ್ಪಲ್ಲ,...

ಯಡಿಯೂರಪ್ಪ ಕೊಟ್ಟ ಮಾತು ತಪ್ಪಲ್ಲ, ಮಂತ್ರಿ ಮಾಡ್ತರೆ: ಬಿಜೆಪಿ ಅಭ್ಯರ್ಥಿ ಮುನಿರತ್ನ

ವಾರ್ತಾಭಾರತಿವಾರ್ತಾಭಾರತಿ4 Nov 2020 6:00 PM IST
share
ಯಡಿಯೂರಪ್ಪ ಕೊಟ್ಟ ಮಾತು ತಪ್ಪಲ್ಲ, ಮಂತ್ರಿ ಮಾಡ್ತರೆ: ಬಿಜೆಪಿ ಅಭ್ಯರ್ಥಿ ಮುನಿರತ್ನ

ಬೆಂಗಳೂರು, ನ.4: ಮುಖ್ಯಮಂತ್ರಿ ಯಡಿಯೂರಪ್ಪ ಕೊಟ್ಟ ಮಾತು ತಪ್ಪಲ್ಲ. ಕೊಟ್ಟ ಮಾತಿನಂತೆ ಈಗಾಗಲೇ ಎಲ್ಲರನ್ನೂ ಸಚಿವರನ್ನಾಗಿ ಮಾಡಿದ್ದಾರೆ. ನನ್ನನ್ನೂ ಸಚಿವರನ್ನಾಗಿ ಮಾಡಲಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಮುನಿರತ್ನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬುಧವಾರ ನಗರದ ವೈಯಾಲಿಕಾವಲ್ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊರೋನ ಸಮಯದಲ್ಲಿ ಶೇ.45 ಮತದಾನವಾಗಿರುವುದು ಒಳ್ಳೆಯ ಮತದಾನ ಪ್ರಮಾಣವಾಗಿದೆ. ಕಳೆದ ಬಾರಿಗಿಂತ ಶೇ.7ರಷ್ಟು ಮತದಾನ ಕಡಿಮೆಯಾಗಿದೆ. ಕಡಿಮೆ ಮತದಾನವಾಗಿ ಯಾರಿಗೆ ಲಾಭ ಎನ್ನುವ ಚರ್ಚೆ ನಡೆಯುತ್ತಲೇ ಇರುತ್ತದೆ ಎಂದು ಹೇಳಿದರು.

ಕಳೆದ 134 ವರ್ಷಗಳಿಂದ ಅದನ್ನೇ ಹೇಳಿಕೊಂಡು ಬರುತ್ತಿದ್ದಾರೆ. ಕಡಿಮೆ ಪರ್ಸೆಂಟೇಜ್ ಆದರೆ ನಮಗೆ ಲಾಭ ಅಂತ ಹೇಳುತ್ತಾ ಬರುತ್ತಿದ್ದಾರೆ. ಆದರೆ ಜನರು ತುಂಬಾ ಬುದ್ಧಿವಂತರಿದ್ದಾರೆ. ಶೇ. 20 ಆಗಲಿ ಶೇ. 30 ಆಗಲಿ ಅಭಿವೃದ್ಧಿ ಮಾಡಿದವರಿಗೆ ಜನರು ಮತ ಹಾಕುತ್ತಾರೆ. ಕಡಿಮೆ ಮತದಾನವಾದರೆ ನಮಗೆ ಲಾಭ ಅಗುತ್ತದೆ ಅನ್ನೋದನ್ನ ಬಿಟ್ಟು ಮುಂದೆ ಜನರ ಜೊತೆ ಯಾವ ರೀತಿ ಬೆರೆಯಬೇಕು ಎಂಬುದು ಚಿಂತೆ ಮಾಡಿದರೆ ಕಾಂಗ್ರೆಸ್ ಉಳಿಯುತ್ತದೆ ಎಂದು ತಿರುಗೇಟು ನೀಡಿದರು.

50 ಸಾವಿರ ಮತಗಳಿಂದ ಮುನಿರತ್ನ ಗೆಲ್ಲುತ್ತಾರೆ ಎಂದು ಸಿಎಂ ಹೇಳಿಕೆ ನೀಡಿದ್ದಾರೆ. ಅದು ಯಡಿಯೂರಪ್ಪ ಹಿರಿತನದ ಆಧಾರದಲ್ಲಿ ಹೇಳಿದ್ದಾರೆ. ನಾನು ಮತದಾರರಲ್ಲಿ ಮತಭಿಕ್ಷೆ ಕೇಳಿದ್ದೇನೆ. ಎಷ್ಟು ಮತಗಳಿಂದ ಗೆಲ್ಲುತ್ತೇನೆ ಅನ್ನೋದನ್ನ ಈಗ ಹೇಳೋದಿಲ್ಲ ಎಂದು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

ಯಡಿಯೂರಪ್ಪ ಕೊಟ್ಟ ಮಾತಿನ ಪ್ರಕಾರ ಈಗಾಗಲೇ ಎಲ್ಲರನ್ನೂ ಸಚಿವರನ್ನಾಗಿ ಮಾಡಿದ್ದಾರೆ. ನನಗೂ ಕೊಟ್ಟ ಮಾತಿನಂತೆ ಮಂತ್ರಿ ಮಾಡುತ್ತೇನೆ ಎಂದಿದ್ದಾರೆ. ಆದರೆ ಸಚಿವ ಸ್ಥಾನ ನೀಡುವ ಬಗ್ಗೆ ನಾನು ಈಗಲೇ ಏನು ಹೇಳುವುದಿಲ್ಲ. ಮುಂದಿನ ಭವಿಷ್ಯ ಏನು ಅನ್ನೋದು ಯಾರಿಗೂ ಗೊತ್ತಿಲ್ಲ. ಅದಕ್ಕೆ ಕಾಲವೇ ಉತ್ತರ ನೀಡಲಿದೆ ಎಂದರು.

ನಾವು ಕಾಂಗ್ರೆಸ್‍ನಿಂದ ಹೋದಾಗ ಕೆಲವರು ಶುಭ ಕೋರಿದರು. ನಿಮಗೆ ಒಳ್ಳೆಯದಾಗಲಿ, ಒಳ್ಳೆಯ ಪೋರ್ಟ್‍ಫೋಲಿಯೋ ಸಿಗಲಿ. ಯಡಿಯೂರಪ್ಪ ಕೊಟ್ಟ ಮಾತಿಗೆ ತಪ್ಪೋದಿಲ್ಲ ಎಂದು ನನಗೆ ಆಶೀರ್ವಾದ ಮಾಡಿ ಕಳಿಸಿದವರು ಬಹಳ ಸ್ಪಷ್ಟವಾಗಿ ಹೇಳಿದ್ದಾರೆ ಎಂದು ತಿಳಿಸಿದರು.

ನಕಲಿ ವೋಟರ್ ಐಡಿ ಆರೋಪ ಕುರಿತು ಮತ್ತೆ ಆಣೆ ಪ್ರಮಾಣದ ಬಗ್ಗೆ ಮಾತನಾಡಿದ ಮುನಿರತ್ನ, ಆರೋಪ ಮಾಡಿರುವವರು ಯಾವ ದೇವರನ್ನ ನಂಬುತ್ತಾರೋ ಅಲ್ಲೇ ಆಣೆ ಮಾಡಲು ಸಿದ್ಧನಿದ್ದೇನೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X