ದ.ಕ.: * 70 ಮಂದಿಗೆ ಕೊರೋನ ಸೋಂಕು, ಕೋವಿಡ್‌ಗೆ ವ್ಯಕ್ತಿ ಬಲಿ
ಮಂಗಳೂರು, ನ.4: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಈ ನಡುವೆ ಹೊಸದಾಗಿ 70 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 414 ಮಂದಿ ಗುಣಮುಖರಾಗಿದ್ದಾರೆ.
30,585 ಮಂದಿ ಸೋಂಕಿತರ ಪೈಕಿ 28,560 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್‌ಗೆ ಜಿಲ್ಲೆಯಲ್ಲಿ ಇಲ್ಲಿಯವರೆಗೆ 681 ಮಂದಿ ಮೃತಪಟ್ಟಿ ದ್ದಾರೆ. ಜಿಲ್ಲೆಯಲ್ಲಿ 1,344 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ 11,120 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, 12,19,552 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.
Next Story





