Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋವಿಡ್ ನಿಯಂತ್ರಣದಲ್ಲಿ ರಾಜ್ಯದ...

ಕೋವಿಡ್ ನಿಯಂತ್ರಣದಲ್ಲಿ ರಾಜ್ಯದ ಕ್ರಮಕ್ಕೆ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಮೆಚ್ಚುಗೆ

ಕೋವಿಡ್ ಸ್ಥಿತಿಗತಿ, ವ್ಯಾಕ್ಸಿನ್ ವಿತರಣೆ ಸಿದ್ಧತೆ ಬಗ್ಗೆ ವಿಡಿಯೋ ಸಂವಾದ

ವಾರ್ತಾಭಾರತಿವಾರ್ತಾಭಾರತಿ4 Nov 2020 8:40 PM IST
share
ಕೋವಿಡ್ ನಿಯಂತ್ರಣದಲ್ಲಿ ರಾಜ್ಯದ ಕ್ರಮಕ್ಕೆ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಮೆಚ್ಚುಗೆ

ಬೆಂಗಳೂರು, ನ.4: ಕೋವಿಡ್ ನಿಯಂತ್ರಣ ವಿಷಯದಲ್ಲಿ ರಾಜ್ಯ ಸರಕಾರ ಕೈಗೊಂಡಿರುವ ಕ್ರಮಗಳು ಸಮಾಧಾನಕರವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಲಾಕ್ ಡೌನ್ ಸಡಿಲಿಕೆ ಬಳಿಕ ಹೆಚ್ಚಳವಾಗಿದ್ದ ಸೋಂಕು ಮತ್ತು ಸಾವಿನ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದು ಸಮಾಧಾನಕರ ಸಂಗತಿ. ಮುಂದಿನ ದಿನಗಳಲ್ಲಿ ಇನ್ನಷ್ಟು ಸುಧಾರಣಾ ಕ್ರಮಗಳ ಮೂಲಕ ಸಂಪೂರ್ಣ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ರಾಜ್ಯದಲ್ಲಿನ ಕೋವಿಡ್ ಸ್ಥಿತಿಗತಿ ಹಾಗೂ ವ್ಯಾಕ್ಸಿನ್ ವಿತರಣೆಗೆ ಮಾಡಿಕೊಂಡಿರುವ ಸಿದ್ಧತೆಗಳ ಬಗ್ಗೆ ಬುಧವಾರ ವಿಡಿಯೋ ಸಂವಾದ ನಡೆಸಿದ ಅವರು, ಮುಂಬರುವ ಚಳಿಗಾಲ ಮತ್ತು ಹಬ್ಬಗಳನ್ನು ಗಮನದಲ್ಲಿಟ್ಟುಕೊಂಡು ಎಚ್ಚರಿಕೆಯಿಂದ ಕಾರ್ಯತಂತ್ರ ರೂಪಿಸಬೇಕು ಎಂದರು.

ಅಂತರ್‍ರಾಷ್ಟ್ರೀಯ ಮತ್ತು ಅಂತರ್‍ರಾಜ್ಯ ಪ್ರಯಾಣಿಕರ ಮೇಲೆ ನಿಗಾವಹಿಸಬೇಕು. ಹಾಗೆಯೇ ಐಎಲ್‍ಐ ಮತ್ತು ಸಾರಿ ಪ್ರಕರಣಗಳನ್ನು ಪತ್ತೆಹಚ್ಚಿ ಟೆಸ್ಟ್‍ಗೆ ಒಳಪಡಿಸಿ ಸೋಂಕಿನ ಹರಡುವಿಕೆ ನಿಯಂತ್ರಿಸಬೇಕು. ವ್ಯಾಕ್ಸಿನ್ ವಿಷಯದಲ್ಲಿ ಈಗಾಗಲೇ ಕೆಲ ಸೂಚನೆ ನೀಡಲಾಗಿದೆ. ಆ ಬಗ್ಗೆಯೂ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.

ರಾಜ್ಯ ಸರಕಾರ ಮುಖ್ಯಮಂತ್ರಿ ಯಡಿಯೂರಪ್ಪ ನಾಯಕತ್ವದಲ್ಲಿ ಕೈಗೊಂಡಿರುವ ಕ್ರಮಗಳನ್ನು ವಿವರಿಸಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕೋವಿಡ್ ವಿರುದ್ಧದ ಹೋರಾಟದಲ್ಲಿ ಕೇಂದ್ರ ನೀಡಿರುವ ಸಹಕಾರಕ್ಕೆ ಕೃತಜ್ಞತೆಗಳನ್ನು ತಿಳಿಸಿದರು.

ಲಾಕ್ ಡೌನ್‍ಗೆ ಮುಂಚೆ ಉತ್ತಮವಾಗಿ ನಿಯಂತ್ರಣದಲ್ಲಿದ್ದ ಕೋವಿಡ್ ಬಳಿಕ ಅಂತರ್‍ರಾಷ್ಟ್ರೀಯ ಮತ್ತು ಅಂತರ್‍ರಾಜ್ಯ ಪ್ರಯಾಣಿಕರು ಮತ್ತು ನೆರೆಯ ಐದು ರಾಜ್ಯಗಳ ಸಂಚಾರ ಸಂಪರ್ಕದಿಂದ ಹೆಚ್ಚಳವಾಯಿತು. ಆದರೂ ಕಟ್ಟುನಿಟ್ಟಿನ ಕ್ರಮ ಮತ್ತು ಟೆಸ್ಟ್ ಸಂಖ್ಯೆ ಹೆಚ್ಚಳದ ಮೂಲಕ ಇದೀಗ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತಿದೆ. ಮರಣದ ಪ್ರಮಾಣವನ್ನು ಶೇಕಡಾ ಒಂದಕ್ಕಿಂತ ಕಡಿಮೆ ಮಾಡುವುದು ನಮ್ಮ ಗುರಿಯಾಗಿದೆ ಎಂದು ಅವರು ಹೇಳಿದರು.

ಮುಂದಿನ ಚಳಿಗಾಲ ಮತ್ತು ಹಬ್ಬದ ದಿನಗಳಲ್ಲಿ ನಮ್ಮ ಕಾರ್ಯತಂತ್ರದಲ್ಲಿ ರಾಜಿ ಮಾಡಿಕೊಳ್ಳದೆ ಎಚ್ಚರಿಕೆಯಿಂದ ಮುಂದುವರಿಯಲಾಗುವುದು. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಮಹತ್ವದ ಸಂಗತಿಯಾಗಿದೆ. ಆ ನಿಟ್ಟಿನಲ್ಲಿ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ ಕಾರ್ಯತಂತ್ರ ರೂಪಿಸಲಾಗುತ್ತಿದೆ ಎಂದು ಸುಧಾಕರ್ ಹೇಳಿದರು.

ನಾನಾ ಪ್ರತಿಷ್ಠಿತ ಸಂಸ್ಥೆಗಳ ಸಹಯೋಗದಲ್ಲಿ ನಡೆಸಿರುವ ಸೇರೋ ಸಮೀಕ್ಷೆ ಕೂಡ ನಮಗೆ ಮುಂದೆ ಅಳವಡಿಸಿಕೊಳ್ಳಬೇಕಿರುವ ಕ್ರಮಗಳ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇದೇ ದಿನ ಅದನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಲಾಗಿದೆ. ದಸರಾ ಮಹೋತ್ಸವ ಸಂದರ್ಭದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿತ್ತು. ಮುಂದೆ ದೀಪಾವಳಿ ಹಬ್ಬದ ಸಂದರ್ಭದಲ್ಲಿಯೂ ನಿರ್ಬಂಧಗಳನ್ನು ಸಡಿಲಿಸುವುದಿಲ್ಲ ಎಂದು ಸುಧಾಕರ್ ಸ್ಪಷ್ಟಪಡಿಸಿದರು.

ರಾಜ್ಯದಲ್ಲಿರುವ ಕೇಂದ್ರದ ಕೆಲ ಲ್ಯಾಬ್‍ಗಳಲ್ಲಿ ಟೆಸ್ಟ್‍ಗಳ ಸಂಖ್ಯೆ ಹೆಚ್ಚಿಸಲು ಸೂಚನೆ ನೀಡಬೇಕು, ಆರ್‍ಟಿಪಿಸಿಆರ್ ಕಿಟ್‍ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಪೂರೈಸಬೇಕು ಮತ್ತು ಆಕ್ಸಿಜನ್ ಪ್ಲಾಂಟ್‍ಗಳನ್ನು ಸ್ಥಾಪಿಸಲು ಕೇಂದ್ರ ಸರಕಾರ ನೆರವು ನೀಡಬೇಕು ಎಂದು ಅವರು ಮನವಿ ಮಾಡಿದರು.

ಕೇಂದ್ರ ಸಚಿವರು ಕೆಲ ಜಿಲ್ಲೆಗಳ ಅಧಿಕಾರಿಗಳ ಜತೆಯೂ ಇದೇ ವೇಳೆ ಸಂವಾದ ನಡೆಸಿದರು. ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ, ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ಈ ಸಂದರ್ಭದಲ್ಲಿ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X