Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮತಾಂತರದ ವಿರುದ್ಧ ಕಠಿಣ ಕಾನೂನು ಕ್ರಮ...

ಮತಾಂತರದ ವಿರುದ್ಧ ಕಠಿಣ ಕಾನೂನು ಕ್ರಮ ಅಗತ್ಯ: ಸಂಸದ ಪ್ರತಾಪ್ ಸಿಂಹ

ವಾರ್ತಾಭಾರತಿವಾರ್ತಾಭಾರತಿ4 Nov 2020 9:06 PM IST
share
ಮತಾಂತರದ ವಿರುದ್ಧ ಕಠಿಣ ಕಾನೂನು ಕ್ರಮ ಅಗತ್ಯ: ಸಂಸದ ಪ್ರತಾಪ್ ಸಿಂಹ

ಮಡಿಕೇರಿ ನ.4: ಮದುವೆಯಾಗುವ ಮುನ್ನ ಮತಾಂತರ ಕಡ್ಡಾಯ ಎನ್ನುವವರು ಹುಟ್ಟು ಮತಾಂಧರು ಎಂಬುವುದು ಸ್ಪಷ್ಟವಾಗಿದ್ದು, ಇದಕ್ಕೆ ಕಠಿಣ ಕಾನೂನು ತರ ಬೇಕೆನ್ನುವ ಅಭಿಪ್ರಾಯ ಸರಿಯಾಗಿಯೇ ಇದೆ ಎಂದು ಮೈಸೂರು, ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಸಮರ್ಥಿಸಿಕೊಂಡಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ಪ್ರೀತಿಸುವಾಗ ಅಡ್ಡಿ ಬಾರದ ಧರ್ಮ ಮದುವೆಯಾಗುವಾಗ ಏಕೆ ಅಡ್ಡಿ ಬರುತ್ತಿದೆ ಎಂದು ಪ್ರಶ್ನಿಸಿದ ಪ್ರತಾಪ್ ಸಿಂಹ, ಧರ್ಮಾಂಧತೆ ಕೆಲವು ಮನುಷ್ಯರಲ್ಲಿ ರಕ್ತಗತವಾಗಿದೆ. ಇಂತಹ ವ್ಯಕ್ತಿಗಳು ಪ್ರೀತಿಯ ನಾಟಕವಾಡಿ ಧರ್ಮಾಂಧತೆ ಅಥವಾ ಮತಾಂತರದ ಉದ್ದೇಶ ಹೊಂದಿದ್ದು, ಅದನ್ನು ಲವ್ ಜಿಹಾದ್ ಎಂದೂ ಕರೆಯಲಾಗುತ್ತಿದೆ ಎಂದು ಅಭಿಪ್ರಾಯಪಟ್ಟರು. 

ವಿವಾಹವಾಗುವ ಮುನ್ನ ಮತಾಂತರ ಆಗಬೇಕು ಎಂದು ಒತ್ತಡ ಹೇರಿದರೆ ಅಂತಹವರ ವಿರುದ್ಧ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಕಠಿಣ ಕಾನೂನು ತರುವುದಾಗಿ ಹೇಳಿದ್ದಾರೆ. ಕರ್ನಾಟಕ ರಾಜ್ಯದ ಸಚಿವರು ಹಾಗೂ ಪಕ್ಷದ ಕೇಂದ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಸಿ.ಟಿ.ರವಿ ಅವರು ಕೂಡ ಇದನ್ನು ಪುನರುಚ್ಚರಿಸಿದ್ದಾರೆ. ಇದು ಸೂಕ್ತವಾದ ನಿರ್ಧಾರವಾಗಿದೆ ಎಂದು ಪ್ರತಾಪ್ ಸಿಂಹ ಹೇಳಿದರು. 

ಇದೇ ವಿಚಾರವನ್ನು ಕೋರ್ಟ್ ಹೇಳಿರುವಾಗ ಇದಕ್ಕೆ ಕಡಿವಾಣ ಹಾಕುವ ಕಾನೂನು ತರಬೇಕು ಎಂಬುದು ಸೂಕ್ತ ಅಭಿಪ್ರಾಯವಾಗಿದ್ದು, ರಾಜ್ಯದಲ್ಲೂ ಈ ಕಾನೂನು ಜಾರಿಯಾಗಬೇಕು ಎಂದರು. ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅವರು ಅಧಿಕಾರ ವಹಿಸಿಕೊಂಡ ಬಳಿಕ ಟಿಪ್ಪು ಜಯಂತಿಯನ್ನು ರದ್ದು ಮಾಡುವುದಾಗಿ ಹೇಳಿದ್ದು ಅದನ್ನು ಮಾಡಿದ್ದಾರೆ. ಇದೀಗ ಧರ್ಮಾಂಧತೆ ಹಾಗೂ ಲವ್ ಜಿಹಾದ್ ವಿಚಾರದಲ್ಲೂ ಕಠಿಣ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬ ವಿಶ್ವಾಸ ತಮಗಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

ಗೋಣಿಕೊಪ್ಪದ ಯುವಕನೊಬ್ಬ ಪಾಕಿಸ್ತಾನದ ಜೈಲಿನಲ್ಲಿರುವ ವಿಚಾರದ ಕುರಿತು ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪ್ರತಾಪ್ ಸಿಂಹ, ಕಳೆದ 2 ವರ್ಷಗಳಿಂದ ಈ ಬಗ್ಗೆ ಕೆಲವರು ಆ ಯುವಕನ ಫೋಟೋ ಹಿಡಿದುಕೊಂಡು ತಮ್ಮ ಬಳಿ ಬಂದಿದ್ದರು ಎಂದು ಹೇಳಿದರು. ಆತ ಪಾಕಿಸ್ತಾನದಲ್ಲಿರುವ ಬಗ್ಗೆ ಎಲ್ಲಿಯೂ ಖಚಿತ ಮಾಹಿತಿ ಇಲ್ಲ. ಖಚಿತ ಮಾಹಿತಿ ಇದ್ದಲ್ಲಿ ಕೇಂದ್ರ ವಿದೇಶಾಂಗ ಖಾತೆ ಸಚಿವರೊಂದಿಗೆ ವ್ಯವಹರಿಸಿ, ಪಾಕಿಸ್ತಾನದಲ್ಲಿರುವ ಇಂಡಿಯನ್ ಹೈ ಕಮೀಷನರ್ ಗಮನಕ್ಕೆ ತಂದು ಆತನನ್ನು ಭಾರತಕ್ಕೆ ಕರೆ ತರುವ ಪ್ರಯತ್ನ ಮಾಡುತ್ತೇನೆ. ಈ ಬಗ್ಗೆ ಹೆಚ್ಚಿನ ಮಾಹಿತಿಯ ನಿರೀಕ್ಷೆಯಲ್ಲಿದ್ದೇನೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X