ಬಸ್ ನಿಲ್ದಾಣದ ಬಳಿ ಯುವಕನ ಮೃತದೇಹ ಪತ್ತೆ

ಮೈಸೂರು,ನ.4: ನಂಜನಗೂಡು ನಗರದ ಖಾಸಗಿ ಬಸ್ ನಿಲ್ದಾಣದ ಬಳಿಯ ಸೇತುವೆ ಪಕ್ಕದಲ್ಲಿ ಯುವಕನೋರ್ವನ ಮೃತದೇಹ ಪತ್ತೆಯಾಗಿದೆ.
ಶವವಾಗಿ ಪತ್ತೆಯಾದ ಯುವಕನನ್ನು ಪ್ರದೀಪ್ (21) ಎಂದು ಗುರುತಿಸಲಾಗಿದ್ದು, ಈತ ನಂಜನಗೂಡು ಪಟ್ಟಣದ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ನಿನ್ನೆ ಬೇಕರಿ ಮಾಲಕನಿಂದ ರಜೆ ಪಡೆದು ಮೈಸೂರಿಗೆ ಸ್ನೇಹಿತರ ಜೊತೆ ಹೋಗಿದ್ದ ಎನ್ನಲಾಗುತ್ತಿದೆ.
ನಂಜನಗೂಡು ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಗದ್ದೆಗೆ ನೀರು ಹರಿಯುವ ಸೇತುವೆ ಪಕ್ಕದಲ್ಲಿ ವಾಹನ ಸಮೇತ ಯುವಕನ ಮೃತದೇಹ ಪತ್ತೆಯಾಗಿದ್ದು, ಸ್ಥಳಕ್ಕೆ ನಂಜನಗೂಡು ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ನಂಜನಗೂಡು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





