Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು ಗ್ರಾಮೀಣ ಭಾಗದ 8 ವಿಧಾನಸಭಾ...

ಮೈಸೂರು ಗ್ರಾಮೀಣ ಭಾಗದ 8 ವಿಧಾನಸಭಾ ಕ್ಷೇತ್ರದಲ್ಲೂ ಅದಾಲತ್ : ಸಚಿವ ಎಸ್ ಟಿ ಎಸ್

ವಾರ್ತಾಭಾರತಿವಾರ್ತಾಭಾರತಿ5 Nov 2020 3:37 PM IST
share

ಮೈಸೂರು : ಮೈಸೂರಿನ ಗ್ರಾಮೀಣ ಭಾಗದ 8 ವಿಧಾನಸಭಾ ಕ್ಷೇತ್ರದಲ್ಲಿಯೂ ಕಂದಾಯ ಸೇರಿದಂತೆ ವಿವಿಧ ಇಲಾಖೆಗಳ ಅದಾಲತ್ ಮಾಡಲಾ ಗುವುದು. ಇದಕ್ಕಾಗಿ 15 ದಿನಗಳ ಮುಂಚೆ ಮನೆ ಮನೆಗೆ ಪಾಂಪ್ಲೆಟ್ ಕೊಟ್ಟು ಸಮಸ್ಯೆಗಳ ಬಗ್ಗೆ ಗಮನಹರಿಸಲಾಗುವುದು. ಈ ಮೂಲಕ ಅದಾಲತ್ ನಡೆಸಿ ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದು ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್‌.ಟಿ. ಸೋಮಶೇಖರ್ ಹೇಳಿದರು.

ನಮ್ಮನ್ನು ಗೆಲ್ಲಿಸುವುದು ಕಾರ್ಯಕರ್ತರು, ಈಗ ಅಂತಹ ನಿಮ್ಮಗಳ ಚುನಾವಣೆ ಬಂದಿದೆ. ಹೀಗಾಗಿ ನಿಮ್ಮ ಋಣ ತೀರಿಸುವ ಸಂದರ್ಭ ನಮಗೆ ಈಗ ಬಂದಿದೆ. ನಾವು ನಿಮ್ಮ ಚುನಾವಣೆಗೆ ಶ್ರಮಿಸುತ್ತೇವೆ ಎಂದು ಸಚಿವರು ತಿಳಿಸಿದರು.

ನಾನೀಗ ಎರಡನೇ ಬಾರಿಗೆ ಜಿಲ್ಲಾ ಪ್ರವಾಸ ಮಾಡಿದ್ದೇನೆ. ಈ ಮೊದಲು 10 ವರ್ಷಕ್ಕೆ ಇದ್ದ ಮೀಸಲಾತಿಯನ್ನು 5 ವರ್ಷಕ್ಕೆ ಇಳಿಸಲಾಗಿದೆ. ಹೈಕೋರ್ಟ್ ತೀರ್ಪು ಪ್ರಕಟವಾದ ನಾಲ್ಕು , ಐದು ದಿನಗಳೊಳಗೆ ಸ್ಥಳೀಯ ಸಂಸ್ಥೆ ಚುನಾವಣೆ ಘೋಷಣೆಯಾಗಬಹುದು. ಹೀಗಾಗಿ ನಾವು ಅದಕ್ಕೆ ಸಿದ್ಧವಾಗಬೇಕಿದೆ ಎಂದು ಸಚಿವರಾದ ಸೋಮಶೇಖರ್ ಹೇಳಿದರು.

ನಾನು ಕಾರ್ಯಕರ್ತರ ಸಭೆ ನಡೆಸಿದಾಗ, ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ. ಗೌರವವನ್ನು ಕೊಡುತ್ತಿಲ್ಲ. ಕೆಲಸ ಮಾಡಿಕೊಡುವುದಿಲ್ಲ ಎಂಬ ದೂರುಗಳು ಬಂದಿವೆ. ಆ ಬಳಿಕ ಕಾರ್ಯಕರ್ತರ ಕೆಲಸ ನ್ಯಾಯಯುತವಾಗಿದ್ದರೆ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿ ದ್ದಾಗಿ ಸಚಿವರು ತಿಳಿಸಿದರು.

ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಟಿ.ನರಸೀಪುರ ವಿಧಾನಸಭಾ ಕ್ಷೇತ್ರದ ಶಂಭುದೇವನಹಳ್ಳಿಯಲ್ಲಿ ಶಕ್ತಿ ಕೇಂದ್ರ ಹಾಗೂ ಮಹಾ ಶಕ್ತಿ ಕೇಂದ್ರದ ಪ್ರಮುಖರುಗಳ ಜೊತೆ ಪೂರ್ವಭಾವಿ ಸಭೆ ನಡೆಸಿ ಸಚಿವರು ಮಾತನಾಡಿದರು.

ಮೈಸೂರು ಬಿಜೆಪಿ ಗ್ರಾಮೀಣ ಘಟಕದ ಜಿಲ್ಲಾಧ್ಯಕ್ಷರಾದ ಮಂಗಳಾ ಸೋಮಶೇಖರ್ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ಈ ಭಾಗದಲ್ಲಿ ಬಿಜೆಪಿ ಶಾಸಕರು ಆಯ್ಕೆಯಾಗಬೇಕಾದಲ್ಲಿ, ಈಗ ಬರುತ್ತಿರುವ ಗ್ರಾಮ ಪಂಚಾಯಿತಿ ಚುನಾವಣೆಯನ್ನು ನಾವು ಪ್ರತಿಷ್ಠೆಯಾಗಿ ತೆಗೆದುಕೊಂಡು ಗೆಲ್ಲಬೇಕು. ನಮ್ಮ ಎಲ್ಲ ಪ್ರಯತ್ನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಸೋಮಶೇಖರ್ ಅವರು ಸಾಥ್ ಕೊಡುತ್ತಿದ್ದು, ಬೆಂಬಲ ನೀಡುತ್ತಿದ್ದಾರೆ. ಅವರ ಈ ಸಹಕಾರ ನಮ್ಮ ಪುಣ್ಯ ಎಂದು ತಿಳಿಸಿದರು.

ಬಿಜೆಪಿ ಮುಖಂಡರು ಹಾಗೂ ಮಾಜಿ ಶಾಸಕರಾದ ಸಿ. ರಮೇಶ್ ಮಾತನಾಡಿ, 15 ರಿಂದ 20 ವರ್ಷಗಳ ಇತಿಹಾಸದಲ್ಲಿ ಇಂತಹ ಸಭೆ ನಡೆಯುತ್ತಿರುವುದು ಇದೇ ಮೊದಲು. ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್‌.ಟಿ.ಸೋಮಶೇಖರ್ ಅವರ ಪರಿಶ್ರಮ ತುಂಬಾ ಇದೆ. ಅವರು ಜಿಲ್ಲೆಯ ಎಲ್ಲ ತಾಲೂಕುಗಳಿಗೂ ಭೇಟಿ ಕೊಡುತ್ತಿದ್ದಾರೆ. ಪಕ್ಷದ ಸಂಘಟನೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ತಿಳಿಸಿದರು.

ಸಚಿವರಾದ ಸೋಮಶೇಖರ್ ಅವರ ನಾಯಕತ್ವದಲ್ಲಿ ನಾವು ಈ ಬಾರಿ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಗೆಲ್ಲಿಸಿ ಕೊಡುತ್ತೇವೆ ಎಂದು ಸಚಿವರಿಗೆ ಈ ಮೂಲಕ ಮಾತುಕೊಡುತ್ತಿದ್ದೇವೆ ಎಂದು ಹೇಳಿದರು.

ನಮ್ಮ ಕಾರ್ಯಕರ್ತರಿಗೆ ಸರ್ಕಾರದ ವತಿಯಿಂದ ಏನೆಲ್ಲ ಸೌಕರ್ಯ ಮಾಡಬಹುದೋ ಅದನ್ನು ನಾವುಗಳು ಈಡೇರಿಸಿಕೊಡುತ್ತೇವೆ. ನನಗೆ ಎಲ್ಲ ಪಂಚಾಯಿತಿಗಳಲ್ಲೂ ಸಭೆ ಮಾಡಬೇಕೆಂಬುದಿತ್ತು.ಆದರೆ, ಸಮಯದ ಅಭಾವ ಹಾಗೂ ಕೊರೋನಾ ಭೀತಿ ಹಿನ್ನೆಲೆ ಈ ರೀತಿಯಾಗಿ ಎರಡು ಮೂರು ಪಂಚಾಯಿತಿಗಳನ್ನು ಸೇರಿಸಿ ಪಕ್ಷದ ಸಭೆ ನಡೆಸುತ್ತಿದ್ದೇನೆ ಎಂದರು.

ಪಕ್ಷದ ಮುಖಂಡರಾದ ಮಹದೇವಯ್ಯ ಮಾತನಾಡಿ, ಪಕ್ಷದ ಕಾರ್ಯಕರ್ತರನ್ನು ಬೇರುಮಟ್ಟದಿಂದಲೇ ಗೆಲ್ಲಿಸಬೇಕು. ಗ್ರಾಮ ಪಂಚಾಯಿತಿಯಲ್ಲಿ ಗೆದ್ದರೆ, ತಾಲೂಕು, ಜಿಲ್ಲಸ ಪಂಚಾಯಿತಿಗಳಲ್ಲೂ ಗೆಲುವು ಸಾಧಿಸಲು ಅನುಕೂಲವಾಗಲಿದೆ. ಹೀಗಾಗಿ ಚುನಾವಣೆ ಘೋಷಣೆಗೆ ಮುನ್ನವೇ ಉಸ್ತುವಾರಿ ಸಚಿವರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅವರ ಶ್ರಮಕ್ಕೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ತಿಳಿಸಿದರು.

ಟಿ.ನರಸೀಪುರ ತಾಲೂಕು ಬಿಜೆಪಿ ಘಟಕದ ಅಧ್ಯಕ್ಷರಾದ ಕೆ.ಸಿ.ಲೋಕೇಶ್, ಮಾಜಿ ಶಾಸಕರಾದ ಬಾರ್ತಿಶಂಕರ್, ಮೂಗೂರು ಕ್ಷೇತ್ರ ತಾಪಂ ಅಧ್ಯಕ್ಷ ಚಂದ್ರಶೇಖರ್ ಸೇರಿದಂತೆ ಇತರರು ಇದ್ದರು.

ಮುಡುಕನಪುರದಲ್ಲಿ ಶಕ್ತಿಕೇಂದ್ರ ಹಾಗೂ ಮಹಾಶಕ್ತಿ ಕೇಂದ್ರದ ಸಭೆ

ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಮುಡುಕನಪುರದಲ್ಲಿ ಬಿಜೆಪಿ ಶಕ್ತಿಕೇಂದ್ರ ಹಾಗೂ ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳು ಹಾಗೂ ಮುಖಂಡರ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಸೋಮಶೇಖರ್ ಅವರು, ಪಕ್ಷದ ಕಾರ್ಯಕರ್ತರಿಗೆ ಚುನಾವಣೆ ಉದ್ದೇಶ ಹಾಗೂ ಗೆಲುವಿನ ಮಹತ್ವದ ಬಗ್ಗೆ ವಿವರಿಸಿದರು. ಕಾರ್ಯಕರ್ತರ ಚುನಾವಣೆಗೆ ನಾಯಕರಾದವರು ಬೆಂಬಲಿಸುವುದು ಕರ್ತವ್ಯ. ಈ ನಿಟ್ಟಿನಲ್ಲಿ ನಮ್ಮೆಲ್ಲರ ಬೆಂಬಲವಿದೆ. ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಗೆಲ್ಲಬೇಕು ಎಂದು ಕರೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X