Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿಬಿಐ ರಾಜಕೀಯ ಒತ್ತಡಕ್ಕೆ ಮಣಿಯಬಾರದು:...

ಸಿಬಿಐ ರಾಜಕೀಯ ಒತ್ತಡಕ್ಕೆ ಮಣಿಯಬಾರದು: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ5 Nov 2020 5:12 PM IST
share
ಸಿಬಿಐ ರಾಜಕೀಯ ಒತ್ತಡಕ್ಕೆ ಮಣಿಯಬಾರದು: ಡಿ.ಕೆ.ಶಿವಕುಮಾರ್

ಬೆಂಗಳೂರು, ನ. 5: `ಬಿಜೆಪಿ ರಾಜಕೀಯ ಕುತಂತ್ರ ಮಾಡುತ್ತಿದೆ. ಸಿಬಿಐ ಅಧಿಕಾರಿಗಳು ಒತ್ತಡಕ್ಕೆ ಮಣಿಯದೆ, ಕಾನೂನು ಚೌಕಟ್ಟಿನಲ್ಲಿ ವಿಚಾರಣೆ ನಡೆಸಲಿ. ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಯಾವುದೇ ತಪ್ಪು ಮಾಡಿಲ್ಲ, ಅವರ ಬೆನ್ನಿಗೆ ನಾವು ನಿಲ್ಲುತ್ತೇವೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಗುರುವಾರ ಇಲ್ಲಿನ ಸದಾಶಿವನಗರದಲ್ಲಿರುವ ತನ್ನ ನಿವಾಸದ ಬಳಿ ಮಾಧ್ಯಮಗಳ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, `ನಾನು ಈಗಾಗಲೇ ನಮ್ಮ ಪಕ್ಷದ ಮುಖಂಡ ವಿನಯ್ ಕುಲಕರ್ಣಿ ಅವರ ಜತೆ ಈ ವಿಚಾರವಾಗಿ ಮಾತನಾಡಿದ್ದೇನೆ. ಅವರ ಪ್ರಕರಣವನ್ನು ರಾಜ್ಯ ಪೊಲೀಸರು ತನಿಖೆ ಮಾಡಿ ವರದಿ ಸಲ್ಲಿಸಿದ್ದಾರೆ. ಆದರೆ, ಆ ಭಾಗದ ಬಿಜೆಪಿ ನಾಯಕರು ಅವರನ್ನು ರಾಜಕೀಯವಾಗಿ ಮುಗಿಸಲು ಈ ಪ್ರಯತ್ನ ಮಾಡಿ, ಯಶಸ್ಸಾಗಿದ್ದಾರೆ. ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರ ಕಡೆಯವರನ್ನು ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದ್ದಾರೆ. ನಾನು ಆ ಭಾಗಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ತಮಗಾದ ತೊಂದರೆ ಹೇಳಿಕೊಂಡಿದ್ದಾರೆ ಎಂದರು.

ಸಿಬಿಐ ಅಧಿಕಾರಿಗಳು ತಮ್ಮ ಮೇಲೆ ಎಷ್ಟೇ ಒತ್ತಡ ಬಿದ್ದರೂ ಕಾನೂನಿನ ವ್ಯಾಪ್ತಿಯಲ್ಲೇ ಕೆಲಸ ಮಾಡಬೇಕಿದೆ. ವಿಚಾರಣೆ ಮಾಡಿ. ಒಂದು ಬಾರಿ ಸಾಲದಿದ್ದರೆ ಹತ್ತು ಬಾರಿ ಕರೆದು ವಿಚಾರಣೆ ಮಾಡಲಿ. ಆದರೆ, ರಾಜಕೀಯ ಒತ್ತಡಕ್ಕೆ ತಲೆ ಬಾಗಬೇಡಿ. ಇದು ಯಾವುದು ಶಾಶ್ವತವಲ್ಲ. ನಮ್ಮ ಪಕ್ಷದ ನಾಯಕ ಕೆ.ಜೆ.ಜಾರ್ಜ್ ಅವರಿಗೆ ಎಷ್ಟು ಕಿರುಕುಳ ನೀಡಿದರು. ಕೊನೆಗೆ ಅವರು ರಾಜೀನಾಮೆ ಕೊಟ್ಟರು. ಆದರೆ, ಇವತ್ತು ಅವರಿಗೆ ನ್ಯಾಯಾಲಯದಲ್ಲಿ ಕ್ಲೀನ್‍ಚಿಟ್ ಸಿಕ್ಕಿದೆ. ಇಂತಹ ಅನೇಕ ಘಟನೆಗಳಿವೆ ಎಂದು ವಿವರಿಸಿದರು.

ರಾಜಕೀಯದಲ್ಲಿ ಕಾಲಚಕ್ರ ತಿರುಗುತ್ತಿರುತ್ತದೆ. ಹೀಗಾಗಿ ಕಾನೂನು ವ್ಯಾಪ್ತಿಯಲ್ಲಿ ಕೆಲಸ ಮಾಡಿ, ಒತ್ತಡಕ್ಕೆ ಮಣಿಯಬೇಡಿ ಎಂದು ಸಿಬಿಐ ಅಧಿಕಾರಿಗಳಿಗೆ ಮನವಿ ಮಾಡುತ್ತೇನೆ. ನಿಮ್ಮ ಕಚೇರಿ ರಾಜಕೀಯ ಅಸ್ತ್ರವಾಗಬಾರದು. ಕೆಲವು ಬಿಜೆಪಿ ನಾಯಕರು ಈ ಬೆಳವಣಿಗೆಯನ್ನು ಆನಂದಿಸುತ್ತಿದ್ದಾರೆ. ಇದು ಹೆಚ್ಚು ದಿನ ಉಳಿಯಲ್ಲ. ಈ ದೇಶದ ಕಾನೂನು, ಸಂವಿಧಾನ ವ್ಯವಸ್ಥೆ ಬಗ್ಗೆ ನಮಗೆ ಗೌರವವಿದೆ. ನಮ್ಮ ನಾಯಕರು ಹಾಗೂ ಕಾರ್ಯಕರ್ತರು ಯಾವುದೇ ರೀತಿಯ ತಪ್ಪು ಮಾಡಿಲ್ಲ. ಅವರಿಗೆ ಕಾನೂನಿನ ರಕ್ಷಣೆ ಸಿಗುತ್ತದೆ. ಚುನಾವಣೆ ಮುನ್ನ ಹಾಗೂ ನಂತರ ಈ ರೀತಿ ಬೆದರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಶಿವಕುಮಾರ್ ಟೀಕಿಸಿದರು.

ಸರಕಾರದ ಸಚಿವರೇ ಆಮಿಷ ತೋರಿಸಿ ನಮ್ಮ ನಾಯಕರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅವರ ಪ್ರಕರಣದಲ್ಲೇ ಪ್ರಧಾನಿ ಭಾಷಣ ಮಾಡಿದರೂ ಕ್ರಮ ಯಾಕೆ ತೆಗೆದುಕೊಳ್ಳಲಿಲ್ಲ? ಬೇರೆ ಪಕ್ಷದಲ್ಲಿ ಕೆಟ್ಟವರಾಗಿದ್ದವರು ಅವರ ಪಕ್ಷಕ್ಕೆ ಸೇರಿದ ನಂತರ ಗಂಗಾ ಜಲದಂತೆ ಪವಿತ್ರರಾಗುತ್ತಾರಾ? ನಿಮ್ಮ ಪ್ರಧಾನಿ ಭಾಷಣ ಮಾಡಿದ್ದು, ನಿಜವೋ, ಸುಳ್ಳೋ ಎಂಬುದನ್ನು ಬಿಜೆಪಿ ನಾಯಕರು ಉತ್ತರಿಸಲಿ ಎಂದು ಶಿವಕುಮಾರ್ ತಿರುಗೇಟು ನೀಡಿದರು.

ಈ ಪ್ರಕರಣದ ತನಿಖೆ ಮುಗಿಯಲಿ, ನಂತರ ನಾವು ಮಾತನಾಡುತ್ತೇವೆ. ಪ್ರತಿಯೊಬ್ಬ ಬಿಜೆಪಿ ನಾಯಕರ ಹೇಳಿಕೆಯೂ ರಾಜಕೀಯ ಉದ್ದೇಶಿತವೇ. ಅವರು ಈ ವ್ಯವಸ್ಥೆ ತಮ್ಮ ಮನೆ ಸ್ವತ್ತು ಎಂದು ತಿಳಿದುಕೊಂಡಿದ್ದಾರೆ. ಇಂತಹ ಒತ್ತಡಗಳಿಗೆ ನಾವು ಮಣಿಯುವುದಿಲ್ಲ. ತಪ್ಪು ಮಾಡದ ನಮ್ಮ ನಾಯಕರನ್ನು ನಾವು ರಕ್ಷಿಸುತ್ತೇವೆ. ಈ ದೇಶದಲ್ಲಿ ಎಲ್ಲೆಲ್ಲಿ ಯಾವ ರೀತಿ ಕಾನೂನು ಇದೆ. ಪೊಲೀಸರು ಯಾವ ರೀತಿ ನಡೆದುಕೊಳ್ಳುತ್ತಿದ್ದಾರೆಂಬುದನ್ನು ಗಮನಿಸುತ್ತಿದ್ದೇವೆ. ಹೀಗಾಗಿ ಅರ್ನಾಬ್ ಗೋಸ್ವಾಮಿ ಬಂಧನದ ಕುರಿತು ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ನಿರಾಕರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X