Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರಧಾನಿ ಮೋದಿ ನಿರ್ಧಾರದಿಂದ ಕೊರೋನ...

ಪ್ರಧಾನಿ ಮೋದಿ ನಿರ್ಧಾರದಿಂದ ಕೊರೋನ ನಿಯಂತ್ರಣ: ಸದಾನಂದ ಗೌಡ

ವಾರ್ತಾಭಾರತಿವಾರ್ತಾಭಾರತಿ5 Nov 2020 5:53 PM IST
share
ಪ್ರಧಾನಿ ಮೋದಿ ನಿರ್ಧಾರದಿಂದ ಕೊರೋನ ನಿಯಂತ್ರಣ: ಸದಾನಂದ ಗೌಡ

ಮಂಗಳೂರು, ನ.5: ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಂಡ ದಿಟ್ಟ ನಿರ್ಧಾರದಿಂದ ದೇಶದಲ್ಲಿ ಕೊರೋನ ನಿಯಂತ್ರಣಕ್ಕೆ ಬರುತ್ತಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದರು.

ನಗರದಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ವಿಶೇಷ ಸಭೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಂಕಷ್ಟ ಸಮಯದಲ್ಲಿ ಒಬ್ಬ ನಾಯಕ ನಡೆದುಕೊಳ್ಳುವ ರೀತಿ ಆತನ ಸಾಮರ್ಥ್ಯವನ್ನು ತಿಳಿಸುತ್ತದೆ. ಕೊರೋನ ಬಳಿಕ ಎದುರಾದ ಸವಾಲುಗಳನ್ನು ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರಗಳು ಯಶಸ್ವಿಯಾಗಿ ನಿಭಾಯಿಸಿವೆ. ಪ್ರಧಾನಿ ಮೋದಿ ಮತ್ತು ಯಡಿಯೂರಪ್ಪ ಅವರಿಬ್ಬರೂ ಉತ್ತಮ ಆಡಳಿತ ನೀಡಿಕೆಗೆ ಉದಾಹರಣೆಯಾಗಿ ನಮ್ಮ ಮುಂದಿದ್ದಾರೆ ಎಂದರು.

130 ಕೋಟಿ ಜನಸಂಖ್ಯೆ ಇರುವ ದೇಶದಲ್ಲಿ ಕೊರೋನ ನಿಯಂತ್ರಣ ಸುಲಭವಲ್ಲ. ಆದರೆ, ಮೋದಿ ಸರಕಾರ ಸವಾಲು ಸ್ವೀಕರಿಸಿ ಯಶಸ್ವಿಯಾಗಿದೆ. ವಿಶ್ವಬ್ಯಾಂಕ್ ಅಂಕಿಅಂಶ ಪ್ರಕಾರ ಭಾರತದಲ್ಲಿ 10 ಲಕ್ಷ ಜನರ ಪೈಕಿ 5500 ಸಾವಿರ ಮಂದಿಗೆ ಕೊರೋನಾ ಬಾಧಿಸಿದೆ. ಆದರೆ, ಅಮೆರಿಕಾ, ಬ್ರೆಝಿಲ್‌ನಂತಹ ದೇಶದಲ್ಲಿ 10 ಲಕ್ಷ ಜನರ ಪೈಕಿ 25000 ಮಂದಿ ಕೊರೋನಾ ಸೋಂಕಿಗೆ ಒಳಗಾಗಿದ್ದರು. ಭಾರತದಲ್ಲಿ ಕೊರೋನ ಸಾವಿನ ದರ 10 ಲಕ್ಷ ಜನರಿಗೆ 83 ಆಗಿದೆ. ಬ್ರಿಟನ್, ಸ್ಪೈನ್, ಅಮೆರಿಕದಲ್ಲಿ ಈ ದರ 490ರಿಂದ 620ರಷ್ಟಿದೆ. ಈ ಅಂಕಿ ಅಂಶ ಭಾರತದಲ್ಲಿ ಕೊರೋನ ಹತೋಟಿಯಲ್ಲಿದೆ ಎಂಬುದರ ಸೂಚಕವಾಗಿದೆ. ಭಾರತದಂತಹ ಅಭಿವೃದ್ಧಿ ಹೊಂದುತ್ತಿರುವ ದೇಶದಲ್ಲಿ ಕೊರೋನ ನಿಯಂತ್ರಣಕ್ಕೆ ಮೋದಿ ಸರಕಾರದ ದಿಟ್ಟ ನಿರ್ಧಾರ ಕಾರಣ ಎಂದು ಡಿವಿಎಸ್ ಹೇಳಿದರು.

ದೇಶದಲ್ಲಿ ಇಂದು ಕೊರೋನ ಪೀಡಿತರಿಗೆ 90 ಲಕ್ಷ ಬೆಡ್‌ಗಳು, 12 ಸಾವಿರ ಕ್ವಾರಂಟೈನ್ ಸೆಂಟರ್‌ಗಳು, ಲ್ಯಾಬ್‌ಗಳು ಇಲ್ಲದಿದ್ದ ನಮ್ಮ ದೇಶದಲ್ಲಿ ಈಗ ಎರಡು ಸಾವಿರ ಲ್ಯಾಬ್‌ಗಳು ಸಿದ್ಧಗೊಂಡಿವೆ. 10 ಕೋಟಿ ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಆತ್ಮನಿರ್ಭರ್ ಭಾರತ ಪರಿಕಲ್ಪನೆಯಲ್ಲಿ ಪಿಪಿಇ ಕಿಟ್ ತಯಾರಿಕೆಯಲ್ಲಿ ಭಾರತ ಇಂದು ವಿಶ್ವದಲ್ಲೇ ಎರಡನೇ ಸ್ಥಾನದಲ್ಲಿದೆ. ಪ್ರತಿದಿನ 5 ಲಕ್ಷ ಪಿಪಿಇ ಕಿಟ್, 3 ಲಕ್ಷ ಎನ್95 ಮಾಸ್ಕ್ ತಯಾರಾಗುತ್ತಿದೆ. ವೆಂಟಿಲೇಟರ್‌ಗಳೂ ಸಿದ್ದಗೊಳ್ಳುತ್ತಿವೆ. ವಿಶ್ವಬ್ಯಾಂಕ್ ಪ್ರಕಾರ ಮುಂದಿನ ವರ್ಷ ದೇಶದ ಜಿಡಿಪಿ ದರ 8.5 ಆಗಲಿದೆ ಎಂದು ಸದಾನಂದ ಗೌಡ ಹೇಳಿದರು.

ದೇಶದಲ್ಲಿ ನಿರುದ್ಯೋಗ ಪ್ರಮಾಣ ಕಳೆದ ವರ್ಷ 2019ರಲ್ಲಿ 7.19 ಇದ್ದರೆ, ಈ ವರ್ಷ ಇಳಿಕೆಗೊಂಡು 6.67 ಆಗಿದೆ. ರೈಲ್ವೆ ಬೋಗಿ ಉತ್ಪಾದನೆ ಹೆಚ್ಚಿದೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಲ್ಲಿ 80 ಕೋಟಿ ಜನರಿಗೆ ಅಕ್ಕಿ, ಗೋಧಿ ವಿತರಣೆ ಆಗುತ್ತಿದೆ. ಜನ್‌ಧನ್ ಯೋಜನೆಯಲ್ಲಿ ಮಹಿಳೆಯರ ಖಾತೆಗೆ 20.6 ಕೋಟಿ ರೂ. ನೀಡಲಾಗಿದೆ. ಮುದ್ರಾ ಯೋಜನೆ, ಪಿಎಂ ಕಿಸಾನ್ ಯೋಜನೆ, ನಿರ್ಮಾಣ ಕಾಮಗಾರಿ ಕಾರ್ಮಿಕ ರಿಗೆ ನೆರವು, ಕೋವಿಡ್ ಎದುರಿಸಲು ರಾಜ್ಯಗಳಿಗೆ ಹನ್ನೊಂದು ಸಾವಿರದ ಎರಡು ಕೋಟಿ ರೂ. ನೆರವು, ಜಿಎಸ್‌ಟಿ ನೆರವು ಕೊರೋನ ಸಂದರ್ಭದ ಸಂಕಷ್ಟ ದೂರ ಮಾಡಲು ಕೇಂದ್ರ ಸರಕಾರ ಕೈಗೊಂಡ ಕ್ರಮಗಳಾಗಿವೆ ಎಂದವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X