Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 'ಸಮೃದ್ಧ ಕರ್ನಾಟಕ’ ಆರೋಗ್ಯ ಕರ್ನಾಟಕವೂ...

'ಸಮೃದ್ಧ ಕರ್ನಾಟಕ’ ಆರೋಗ್ಯ ಕರ್ನಾಟಕವೂ ಆಗಬೇಕಿದೆ: ಡಾ.ಕೆ.ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ5 Nov 2020 8:04 PM IST
share
ಸಮೃದ್ಧ ಕರ್ನಾಟಕ’ ಆರೋಗ್ಯ ಕರ್ನಾಟಕವೂ ಆಗಬೇಕಿದೆ: ಡಾ.ಕೆ.ಸುಧಾಕರ್

ಬೆಂಗಳೂರು, ನ.5: ಮೂರು ಲಕ್ಷ ಅಧಿಕಾರಿ, ಸಿಬ್ಬಂದಿ ಇರುವ ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗಳು 6 ಕೋಟಿ ಕನ್ನಡಿಗರ ಆರೋಗ್ಯ ಕಾಪಾಡುವ ಹೊಣೆಯನ್ನು ಇನ್ನಷ್ಟು ಉತ್ತಮವಾಗಿ ನಿಭಾಯಿಸುವ ಮೂಲಕ, ಸಮೃದ್ಧ ಕರ್ನಾಟಕವನ್ನು ಆರೋಗ್ಯ ಕರ್ನಾಟಕವಾಗಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕಿವಿಮಾತು ಹೇಳಿದರು.

ಗುರುವಾರ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈಗ ಆರೋಗ್ಯ ಇಲಾಖೆಯೊಂದಿಗೆ ವೈದ್ಯಕೀಯ ಶಿಕ್ಷಣ ಇಲಾಖೆ ಜೊತೆಯಾಗಿದೆ. ಆರೋಗ್ಯ ಇಲಾಖೆಯಡಿ, 2.50 ಲಕ್ಷ ಸಿಬ್ಬಂದಿ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯಡಿ 30-40 ಸಾವಿರ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಎರಡೂ ಇಲಾಖೆಗಳು ಸೇರಿ ಒಟ್ಟು 3 ಲಕ್ಷ ಸಿಬ್ಬಂದಿ ರಾಜ್ಯದ 6 ಕೋಟಿ ಜನರ ಆರೋಗ್ಯ ಕಾಪಾಡುವ ಕೆಲಸ ಮಾಡುತ್ತಿದ್ದಾರೆ ಎಂದರು.

ಸರಕಾರಿ ಆಸ್ಪತ್ರೆಯಲ್ಲಿ ಗುಣಮಟ್ಟ ಕಡಿಮೆ, ಖಾಸಗಿ ಆಸ್ಪತ್ರೆಯಲ್ಲಿ ಗುಣಮಟ್ಟ ಹೆಚ್ಚು ಎನ್ನುವ ತಪ್ಪು ಕಲ್ಪನೆ ಇದೆ. ನಾವು ವೈದ್ಯರಾಗಿ ಈ ತಪ್ಪು ಕಲ್ಪನೆಯನ್ನು ದೂರ ಮಾಡಬೇಕು. ಸರಕಾರಿ ಆರೋಗ್ಯ ಕ್ಷೇತ್ರದಲ್ಲಿ ರಾಜ್ಯ ಸರಕಾರವು ಎಲ್ಲ ಬಗೆಯ ಮೂಲಸೌಕರ್ಯ ಹಾಗೂ ವೈದ್ಯರಿಗೆ ಸಿಗಬೇಕಾದ ಗೌರವವನ್ನು ನೀಡಲಿದೆ. ಇದಕ್ಕೆ ಪೂರಕವಾಗಿ ಕಾನೂನು ತಿದ್ದುಪಡಿ, ಹೊಸ ಕಾನೂನು ತರುವ ಉದ್ದೇಶವೂ ಇದೆ ಎಂದು ಅವರು ವಿವರಿಸಿದರು.

ಕನ್ನಡ ರಾಜ್ಯೋತ್ಸವ ಆಚರಣೆ ಒಂದು ದಿನಕ್ಕೆ ಸೀಮಿತವಲ್ಲ. ಇಡೀ ವರ್ಷವೂ ಈ ನಾಡಹಬ್ಬವನ್ನು ಆಚರಿಸಬಹುದು. ಈಗ ಅನೇಕರು ಓದುವುದನ್ನು ಕಡಿಮೆ ಮಾಡಿದ್ದಾರೆ. ಮಾಧ್ಯಮಗಳು, ಸ್ಮಾರ್ಟ್ ಫೋನ್ ಗಳನ್ನು ಬಳಸಿಕೊಂಡು ಹೆಚ್ಚು ಓದಬಹುದು. ಆದರೆ ವ್ಯಕ್ತಿತ್ವ ವಿಕಸನವಾಗಲು ಪುಸ್ತಕಗಳ ಓದು ಬಹಳ ಮುಖ್ಯ. ಈ ಅಭ್ಯಾಸವನ್ನು ಬಾಲ್ಯದಿಂದಲೇ ಆರಂಭಿಸಬೇಕು ಎಂದು ಸುಧಾಕರ್ ಸಲಹೆ ನೀಡಿದರು.

ಸ್ವಾತಂತ್ರ್ಯಪೂರ್ವದಲ್ಲೇ ಕರ್ನಾಟಕ ರಾಜ್ಯ ರಚಿಸುವ ಹೋರಾಟ ಆರಂಭವಾಗಿತ್ತು. ಎಲ್ಲ ಪ್ರಾಂತ್ಯಗಳನ್ನು ಒಟ್ಟುಗೂಡಿಸಲು ಅನೇಕರು ಹೋರಾಟ ಮಾಡಿದ್ದರು. ಆದಿಕವಿ ಪಂಪರಿಂದ ಆರಂಭವಾಗಿ ಈಗಿನ ಸಾಹಿತಿಗಳವರೆಗೆ, ಎಲ್ಲರ ಪ್ರಯತ್ನದಿಂದ ಭಾಷೆ ಸಮೃದ್ಧಿಯಾಗಿದೆ. ಕವಿ ಕುವೆಂಪು, ಇಡೀ ಜಗತ್ತಿಗೆ ಶಾಂತಿಯ ಪಾಠ ಮಾಡಿದರು. ವಿಶ್ವಮಾನವರಾಗಬೇಕು ಎಂಬ ಸಂದೇಶವನ್ನು ಅವರು ನೀಡಿದರು. ಅಂತಹ ಸಾಹಿತಿಗಳ ಆಶಯದಂತೆ ಕರ್ನಾಟಕವನ್ನು ಸಮೃದ್ಧವಾಗಿಸಬೇಕು ಎಂದು ಅವರು ಕರೆ ನೀಡಿದರು.

ಸಮಾರಂಭದಲ್ಲಿ, ಆರೋಗ್ಯ ವಿಜ್ಞಾನಗಳ ಲೇಖಕರನ್ನು ಸನ್ಮಾನಿಸಲಾಯಿತು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ, ವಿವಿ ಕುಲಪತಿ ಡಾ.ಎಸ್.ಸಚ್ಚಿದಾನಂದ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X