Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಪ್ಪಿನಂಗಡಿ: ಹೆದ್ದಾರಿ ಅವ್ಯವಸ್ಥೆ...

ಉಪ್ಪಿನಂಗಡಿ: ಹೆದ್ದಾರಿ ಅವ್ಯವಸ್ಥೆ ವಿರೋಧಿಸಿ ಎಸ್ಡಿಪಿಐ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ5 Nov 2020 8:07 PM IST
share
ಉಪ್ಪಿನಂಗಡಿ: ಹೆದ್ದಾರಿ ಅವ್ಯವಸ್ಥೆ ವಿರೋಧಿಸಿ ಎಸ್ಡಿಪಿಐ ಪ್ರತಿಭಟನೆ

ಉಪ್ಪಿನಂಗಡಿ : ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆಯನ್ನು ವಿರೋಧಿಸಿ ಹಾಗೂ ಕೂಡಲೇ ರಾಷ್ಟ್ರೀಯ ಹೆದ್ದಾರಿಯ ದುರಸ್ತಿಗೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಕ್ಷದ ವತಿಯಿಂದ ಉಪ್ಪಿನಂಗಡಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.

ರಾಷ್ಟ್ರೀಯ ಹೆದ್ದಾರಿಯ ಒಂದು ಬದಿಯನ್ನು ತಡೆದ ಪ್ರತಿಭಟನಕಾರರು, ಸರಕಾರ, ಸಂಸದರು, ಶಾಸಕರು ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಕಾರರನ್ನುದ್ದೇಶಿಸಿ ಮಾತನಾಡಿದ ಎಸ್‍ಡಿಪಿಐ ಜಿಲ್ಲಾ ಸಮಿತಿ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ಮಾತನಾಡಿ, ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಸಂಪೂರ್ಣ ಹದಗೆಟ್ಟು ಹೋಗಿದ್ದು, ಸಂಚಾರ ಅಸಾಧ್ಯವಾಗಿದೆ. ಚತುಷ್ಪಥ ಹೆದ್ದಾರಿ ಕಾಮಗಾರಿಯೂ ಅಪೂರ್ಣವಾಗಿದ್ದು, ಈ ಕಾಮಗಾರಿಯ ಗುತ್ತಿಗೆ ವಹಿಸಿ ಕೊಂಡವರು ಮರಗಳನ್ನು ಕಡಿದು, ಗುಡ್ಡಗಳನ್ನು ಜರಿಸುವ ಕೆಲಸ ಮಾತ್ರ ಮಾಡಿಟ್ಟಿದ್ದಾರೆ. ಹೆದ್ದಾರಿಯ ಬಳಿ ಅಲ್ಲಲ್ಲಿ ಅಗೆದಿದ್ದು, ಇದರಿಂದಲೂ ಜನಸಾಮಾನ್ಯರು ತೀವ್ರ ಸಮಸ್ಯೆ ಎದುರಿಸುವಂತಾಗಿದೆ. ಹೆದ್ದಾರಿ ಅವ್ಯವಸ್ಥೆಯು ಹಲವು ಅಪಘಾತಗಳಿಗೆ, ಸಾವು- ನೋವುಗಳಿಗೆ ಕಾರಣವಾಗಿದ್ದರೂ, ಸರಕಾರ ಈ ಬಗ್ಗೆ ಮೌನ ವಹಿಸಿದೆ. ಹಿಂದಿ ಭಾಷೆ ಬಾರದ ನಮ್ಮ ಸಂಸದರು ಇಲ್ಲಿನ ಪರಿಸ್ಥಿತಿಯನ್ನು ಕೇಂದ್ರಕ್ಕೆ ಮುಟ್ಟಿಸು ವಲ್ಲಿ ಸೋತಿದ್ದಾರೆ. ತುರ್ತಾಗಿ ರೋಗಿಗಳನ್ನು, ಗಭೀಣಿಯರನ್ನು ಆಸ್ಪತ್ರೆಗಳಿಗೆ ಸಾಗಿಸಲು ಕೂಡಾ ಹೆದ್ದಾರಿಯಲ್ಲಿರುವ ಹೊಂಡ- ಗುಂಡಿಗಳಿಂದ ಸಮಸ್ಯೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರಲ್ಲದೆ, ಶೀಘ್ರವಾಗಿ ವ್ಯವಸ್ಥಿತವಾಗಿ ಚತುಷ್ಪಥ ಹೆದ್ದಾರಿ ಕಾಮಗಾರಿ ಆರಂಭಿಸದಿದ್ದರೆ, ಹೊಂಡ- ಗುಂಡಿಗಳನ್ನು ಮುಚ್ಚಿ ರಸ್ತೆಯನ್ನು ಸುಸ್ಥಿತಿಯಲ್ಲಿರಿಸಲು ಮುಂದಾಗದಿದ್ದಲ್ಲಿ ಎಸ್‍ಡಿಪಿಐ ವಿವಿಧ ಸಂಘಟನೆ, ನಾಗರಿಕರು ಸಹಕಾರದೊಂದಿಗೆ ಸಂಪೂರ್ಣವಾಗಿ ಹೆದ್ದಾರಿ ತಡೆ ನಡೆಸಿ ಬೃಹತ್ ಹೋರಾಟವನ್ನು ಸಂಘಟಿಸುವುದಾಗಿ ಎಚ್ಚರಿಸಿದರು.

ಎಸ್‍ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಹೈದರ್ ನೀರ್ಸಾಲ್ ಮಾತನಾಡಿ, ಜಿಲ್ಲೆಯ ಸಂಸದರು ಜನರನ್ನು ಉದ್ರೇಕಗೊಳಿಸುವ ಮಾತಿಗೆ ಸೀಮಿತವಾಗದೇ ಅಭಿವೃದ್ಧಿಯ ಕಡೆ ಗಮನಕೊಡಲಿ. ಜಿಲ್ಲೆಯ ಜನರ ಸಮಸ್ಯೆಗಳನ್ನು ಕೇಂದ್ರಕ್ಕೆ ತಲುಪಿಸಿ, ಅದಕ್ಕೊಂದು ಪರಿಹಾರ ಕಲ್ಪಿಸುವ ಕಾರ್ಯ ಮಾಡಲಿ ಎಂದರಲ್ಲದೆ, ರಾಷ್ಟ್ರೀಯ ಹೆದ್ದಾರಿಯು ಸಂಚರಿಸಲಾಗದಷ್ಟು ಹದಗೆಟ್ಟು ಹೋಗಿದ್ದು, ಪ್ರಯಾಣಿಕರೊಂದಿಗೆ ವಾಹನ ಗಳ ಬಿಡಿಭಾಗಗಳು ಹಾನಿಗೆ ಸಿಲುಕಿ ವಾಹನ ಮಾಲಕರು ಸಂಕಷ್ಟ ಪಡುವಂತಾಗಿದೆ. ಒಂದೆಡೆ ಇಂಧನ ಬೆಲೆಯೇರಿಕೆ, ಹದಗೆಟ್ಟ ಹೆದ್ದಾರಿ, ವಾಹನಗಳ ಬಿಡಿಭಾಗಗಳ ಬೆಲೆಯೇರಿಕೆಯಿಂದ ಹೆದ್ದಾರಿಯಲ್ಲಿ ವಾಹನಗಳು ಸಂಚರಿಸದ ಸ್ಥಿತಿ ಎದುರಾಗಿದ್ದು, ಆದ್ದರಿಂದ ಸರಕಾರವು ನಮಗೆ ಓಡಾಟಕ್ಕೆ ಎತ್ತಿನ ಗಾಡಿಗೆ ಅನುಮತಿ ನೀಡಲಿ. ಇಂತಹ ಹದಗೆಟ್ಟ ಹೆದ್ದಾರಿಗೆ ಅದೇ ಸೂಕ್ತ ಎಂದರು.

ರಾಷ್ಟ್ರೀಯ ಹೆದ್ದಾರಿಯ ಒಂದು ಬದಿಯನ್ನು ಮಾತ್ರ ಪ್ರತಿಭಟನಕಾರರು ತಡೆದಿದ್ದರಿಂದ ಇನ್ನೊಂದು ಬದಿಯಲ್ಲಿ ವಾಹನಗಳ ಸಂಚಾರಕ್ಕೆ ಪೊಲೀಸರು ಅನುವು ಮಾಡಿಕೊಟ್ಟರು. ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಕೆ ಹಾಗೂ ಪ್ರೊಬೆಷನರಿ ಐಪಿಎಸ್ ಅಧಿಕಾರಿ ರೋಹನ್ ಮಂಜುನಾಥ್ ನೇತೃತ್ವದಲ್ಲಿ ಪೊಲೀಸರು ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿದರು.

ಪ್ರತಿಭಟನೆಯಲ್ಲಿ ಎಸ್‍ಡಿಪಿಐ ಮುಖಂಡರಾದ ರಫೀಕ್ ನೆಲ್ಯಾಡಿ, ಮುಸ್ತಾಫ ಲತೀಫಿ, ಇಬ್ರಾಹೀಂ ಸಾಗರ್, ಅಕ್ಬರ್ ಬೆಳ್ತಂಗಡಿ, ಮುಹಮ್ಮದ್ ಪಿಬಿಕೆ, ಶಾಕಿರ್ ಅಳಕೆಮಜಲು, ನಿಸಾರ್ ಕುದ್ರಡ್ಕ, ಝಕಾರಿಯಾ ಕೊಡಿಪ್ಪಾಡಿ, ನಿಸಾರ್ ಕುದ್ರಡ್ಕ, ಅಶ್ರಫ್ ಬಾವು, ಸೀಮಾ ಅಬ್ದುಲ್ ರಝಾಕ್, ಶುಕೂರ್ ಕುಪ್ಪೆಟ್ಟಿ, ಇಲ್ಯಾಸ್ ಕರಾಯ, ಹಮೀದ್ ಬಿ.ಕೆ., ರಶೀದ್ ಕೊಡಿಪ್ಪಾಡಿ, ಬಶೀರ್ ಹಲ್ಯಾರ್, ಅಬ್ದುಲ್ಲಾ ಆದರ್ಶನಗರ, ದಲಿತ ಮುಖಂಡ ಸೇಸಪ್ಪ ನೆಕ್ಕಿಲು ಮತ್ತಿತರರು ಇದ್ದರು.

ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಸಿದ್ದೀಕ್ ಕೆ.ಎ. ಸ್ವಾಗತಿಸಿದರು. ಖಜಾಂಚಿ ಇಕ್ಬಾಲ್ ಕೆಂಪಿ ವಂದಿಸಿದರು. ಬಶೀರ್ ಕೂರ್ನಡ್ಕ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X