Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸರಕಾರಿ ಉದ್ಯೋಗಗಳ ಆಮಿಷವೊಡ್ಡಿ 27,000...

ಸರಕಾರಿ ಉದ್ಯೋಗಗಳ ಆಮಿಷವೊಡ್ಡಿ 27,000 ಕ್ಕೂ ಅಧಿಕ ಮಂದಿಗೆ ವಂಚಿಸಿದ್ದ ಐವರ ಸೆರೆ

ವಾರ್ತಾಭಾರತಿವಾರ್ತಾಭಾರತಿ5 Nov 2020 8:07 PM IST
share
ಸರಕಾರಿ ಉದ್ಯೋಗಗಳ ಆಮಿಷವೊಡ್ಡಿ 27,000 ಕ್ಕೂ ಅಧಿಕ ಮಂದಿಗೆ ವಂಚಿಸಿದ್ದ ಐವರ ಸೆರೆ

ಹೊಸದಿಲ್ಲಿ,ನ.5: ನಕಲಿ ಜಾಲತಾಣದ ಮೂಲಕ ಸರಕಾರಿ ಉದ್ಯೋಗಗಳ ಆಮಿಷವನ್ನೊಡ್ಡಿ 27,000ಕ್ಕೂ ಅಧಿಕ ಜನರಿಗೆ ಒಟ್ಟು 1.09 ಕೋ.ರೂ.ಗಳನ್ನು ವಂಚಿಸಿದ್ದ ಜಾಲದ ಐವರನ್ನು ದಿಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 49 ಲ.ರೂ.ಹಣ,ಏಳು ಮೊಬೈಲ್ ಫೋನ್‌ಗಳು ಮತ್ತು ಮೂರು ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ವಿಷ್ಣು ಶರ್ಮಾ ಮತ್ತು ರಾಮಧಾರಿ ಎನ್ನುವವರ ನೇತೃತ್ವದಲ್ಲಿ ಹರ್ಯಾಣದ ಹಿಸ್ಸಾರ್‌ನಿಂದ ಈ ಜಾಲವು ಕಾರ್ಯಾಚರಿಸುತ್ತಿತ್ತು. ರಾಮಧಾರಿ,ಸಂದೀಪ,ಸುರೇಂದ್ರ ಸಿಂಗ್ ಮತ್ತು ಜೋಗಿಂದರ್ ಸಿಂಗ್ ಅವರನ್ನು ಹರ್ಯಾಣ ಮತ್ತು ದಿಲ್ಲಿಯ ವಿವಿಧೆಡೆಗಳಿಂದ ಬಂಧಿಸಿರುವ ಪೊಲೀಸರು ತಲೆಮರೆಸಿಕೊಂಡಿರುವ ವಿಷ್ಣು ಶರ್ಮಾನ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.

ಜಾಲದ ಇನ್ನೋರ್ವ ಸದಸ್ಯ ಅಮನದೀಪ್ ಎಂಬಾತನನ್ನು ಈ ಮೊದಲೇ ಹಿಸ್ಸಾರ್‌ನ ಎಟಿಎಂ ಒಂದರಿಂದ ಹಣವನ್ನು ತೆಗೆಯುತ್ತಿದ್ದಾಗಲೇ ಬಂಧಿಸಲಾಗಿತ್ತು. ಆತ ನೀಡಿದ ಮಾಹಿತಿಗಳ ಆಧಾರದಲ್ಲಿ ಪೊಲೀಸರು ಇತರರನ್ನು ಬಂಧಿಸಿದ್ದಾರೆ.

 ಆರೋಪಿಗಳು ಸ್ವಾಸ್ಥ ಏವಂ ಜನಕಲ್ಯಾಣ ಸಂಸ್ಥಾನ ಹೆಸರಿನಲ್ಲಿ ನಕಲಿ ಜಾಲತಾಣವನ್ನು ಸೃಷ್ಟಿಸಿ 13,000 ನಕಲಿ ಸರಕಾರಿ ಹುದ್ದೆಗಳ ಕೊಡುಗೆಯನ್ನು ಅಮಾಯಕ ಉದ್ಯೋಗಾಕಾಂಕ್ಷಿಗಳ ಮುಂದಿರಿಸಿದ್ದರು. ಸಂಸ್ಥೆಯು ಕೇಂದ್ರ ಕುಟುಂಬ ಆರೋಗ್ಯ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತದೆ ಎಂದು ಅವರು ಹೇಳಿಕೊಂಡಿದ್ದರು. ನೋಂದಾವಣೆಗಾಗಿ ಉದ್ಯೋಗಾಕಾಂಕ್ಷಿಗಳಿಗೆ ನಕಲಿ ವೆಬ್‌ಸೈಟ್‌ನ ಲಿಂಕ್‌ನೊಂದಿಗೆ 15 ಲಕ್ಷಕ್ಕೂ ಅಧಿಕ ಎಸ್‌ಎಂಎಸ್‌ಗಳನ್ನು ರವಾನಿಸಲಾಗಿತ್ತು ಎಂದು ಪೊಲೀಸರು ತಿಳಿಸಿದರು.

ಆರೋಪಿಗಳಿಂದ ವಂಚನೆಗೊಳಗಾದವರು ದಿಲ್ಲಿ ಪೊಲೀಸ್‌ನ ಸೈಬರ್ ಘಟಕಕ್ಕೆ ದೂರು ಸಲ್ಲಿಸಿದ ಬಳಿಕ ಮೋಸ ಬೆಳಕಿಗೆ ಬಂದಿತ್ತು.

ಸಾಫ್ಟ್‌ವೇರ್ ವೃತ್ತಿಪರರಾದ ಜೋಗಿಂದರ್ ಮತ್ತು ಸಂದೀಪ ನಕಲಿ ಜಾಲತಾಣವನ್ನು ವಿನ್ಯಾಸಗೊಳಿಸಿದ್ದರು. ಸುರೇಂದ್ರ ಮಾಲಿಕತ್ವದಡಿ ಸ್ವಾಸ್ಥ ಸಂಸ್ಥಾನದ ಹೆಸರಿನಲ್ಲಿ ಬ್ಯಾಂಕ್ ಖಾತೆಯನ್ನೂ ತೆರೆಯಲಾಗಿತ್ತು. ವಿವಿಧ ಎಟಿಎಮ್‌ಗಳಿಂದ ಹಣವನ್ನು ತೆಗೆಯುವ ಕೆಲಸವನ್ನು ಅಮನದೀಪ್‌ಗೆ ವಹಿಸಲಾಗಿತ್ತು ಮತ್ತು ಆರೋಪಿಗಳು ಪ್ರತಿದಿನ ಈ ಹಣವನ್ನು ಹಂಚಿಕೊಳ್ಳುತ್ತಿದ್ದರು.

ವಿಷ್ಣು ಶರ್ಮಾ ಮತ್ತು ರಾಮಧಾರಿ ಆನ್‌ಲೈನ್ ಪರೀಕ್ಷಾ ಕೇಂದ್ರವೊಂದನ್ನು ನಡೆಸುತ್ತಿದ್ದು,ಸರಕಾರಿ ನೇಮಕಾತಿಗಳನ್ನು ಮಾಡಲು ಹೊರಗುತ್ತಿಗೆಯನ್ನು ಪಡೆದುಕೊಂಡಿದ್ದರು ಮತ್ತು ತಮ್ಮ ಪರೀಕ್ಷಾ ಕೇಂದ್ರದಲ್ಲಿ ಹಾಜರಾಗುತ್ತಿದ್ದ ಉದ್ಯೋಗಾಕಾಂಕ್ಷಿಗಳ ದತ್ತಾಂಶಗಳನ್ನು ದುರ್ಬಳಕೆ ಮಾಡಿಕೊಂಡಿದ್ದರು ಎಂದೂ ಪೊಲೀಸರು ತಿಳಿಸಿದರು.

ನಕಲಿ ಜಾಲತಾಣವೆಂದು ಗೊತ್ತಾಗದೆ ಅದರಲ್ಲಿಯ ಖಾಲಿ ಹುದ್ದೆಗಳ ಮಾಹಿತಿಗಳನ್ನು ಮುಖ್ಯವಾಹಿನಿ ಪತ್ರಿಕೆಗಳೂ ಪ್ರಕಟಿಸಿದ್ದು,ಇದು ಹೆಚ್ಚು ಜನರು ವಂಚನೆಗೆ ಗುರಿಯಾಗಲು ಕಾರಣವಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X