Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೋವಿಡ್ ಸೋಂಕಿಗೊಳಗಾಗಿ ಗುಣಮುಖರಾದವರ...

ಕೋವಿಡ್ ಸೋಂಕಿಗೊಳಗಾಗಿ ಗುಣಮುಖರಾದವರ ಮೇಲೆ ನಿಗಾ: ಆರೋಗ್ಯ ಸಚಿವ ಡಾ.ಸುಧಾಕರ್

‘ಪ್ರತಿ ಜಿಲ್ಲಾಸ್ಪತ್ರೆಗಳಲ್ಲಿ ಪೋಸ್ಟ್ ಕೋವಿಡ್ ಮತ್ತು ಪುನರ್‍ವಸತಿ ಕೇಂದ್ರ’

ವಾರ್ತಾಭಾರತಿವಾರ್ತಾಭಾರತಿ5 Nov 2020 9:22 PM IST
share
ಕೋವಿಡ್ ಸೋಂಕಿಗೊಳಗಾಗಿ ಗುಣಮುಖರಾದವರ ಮೇಲೆ ನಿಗಾ: ಆರೋಗ್ಯ ಸಚಿವ ಡಾ.ಸುಧಾಕರ್

ಬೆಂಗಳೂರು, ನ.5: ಕೋವಿಡ್ ಸೋಂಕಿಗೊಳಗಾಗಿ ಗುಣಮುಖರಾದರೂ, ನಾನಾ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರಿಗಾಗಿ ಪ್ರತಿ ಜಿಲ್ಲಾಸ್ಪತ್ರೆಗಳಲ್ಲಿ ಪೋಸ್ಟ್ ಕೋವಿಡ್ ಕೇಂದ್ರ ಮತ್ತು ಪುನರ್ವಸತಿ ಕೇಂದ್ರ (ರಿಹ್ಯಾಬಿಲಿಟೇಶನ್ ಸೆಂಟರ್) ಆರಂಭಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಚಳಿಗಾಲ ಮತ್ತು ಹಬ್ಬಗಳ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ತಾಂತ್ರಿಕ ಸಲಹಾ ಸಮಿತಿ ಹಾಗೂ ತಜ್ಞರೊಂದಿಗೆ ನಡೆಸಿದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಸೋಂಕಿನಿಂದ ತೀವ್ರ ಸಮಸ್ಯೆಗೊಳಗಾದವರು ಗುಣಮುಖರಾದ ಬಳಿಕವೂ ನಿಗಾ ಇರಿಸಬೇಕಾಗುತ್ತದೆ ಎಂದರು.

ಬೆಂಗಳೂರಿನಲ್ಲಿ ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆ, ವಿಕ್ಟೋರಿಯಾ, ಬೌರಿಂಗ್, ಕೆ.ಸಿ.ಜನರಲ್ ಆಸ್ಪತ್ರೆಗಳಲ್ಲಿ ಪೋಸ್ಟ್ ಕೋವಿಡ್ ಕೇಂದ್ರ ಮತ್ತು ಪುನರ್‍ವಸತಿ ಕೇಂದ್ರಗಳನ್ನು ಆರಂಭಿಸಲಾಗುವುದು. ಹಾಗೆಯೇ ಪ್ರತಿ ಜಿಲ್ಲಾಸ್ಪತ್ರೆಗಳಲ್ಲಿ ಈ ರೀತಿಯ ಕೇಂದ್ರಗಳನ್ನು ಆರಂಭಿಸಲಾಗುವುದು. ಕೇಂದ್ರಕ್ಕೆ ಬೇಕಾದ ಸೌಲಭ್ಯ, ಸಿಬ್ಬಂದಿ ಮೊದಲಾದವುಗಳ ಬಗ್ಗೆ ತಜ್ಞರು ವರದಿ ಸಲ್ಲಿಸಿದ್ದಾರೆ ಎಂದು ಅವರು ತಿಳಿಸಿದರು.

ಕೆಲ ಖಾಸಗಿ ಆಸ್ಪತ್ರೆಗಳು ಈ ಬಗೆಯ ಕೇಂದ್ರಗಳನ್ನು ಆರಂಭಿಸಿವೆ. 100 ಕ್ಕಿಂತ ಹೆಚ್ಚು ಹಾಸಿಗೆ ಇರುವ ಖಾಸಗಿ ಆಸ್ಪತ್ರೆಗಳಲ್ಲಿ ಈ ರೀತಿಯ ಕೇಂದ್ರ ಆರಂಭಿಸಬೇಕು ಎಂದು ಸೂಚಿಸಲಾಗಿದೆ. ಶೇ.5ರಷ್ಟು ಜನರಲ್ಲಿ ಮತ್ತೆ ಸೋಂಕು ಬರುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿದ್ದಾರೆ. ಮೊದಲ ಬಾರಿ ಹೆಚ್ಚು ಲಕ್ಷಣಗಳೊಂದಿಗೆ ಸೋಂಕು ಹೊಂದಿದವರಿಗೆ ಎರಡನೇ ಬಾರಿ ಸೋಂಕು ಬಂದಾಗ ತೀವ್ರತೆ ಇರುವುದಿಲ್ಲ. ಅದೇ ರೀತಿ, ಮೊದಲ ಬಾರಿ ಲಕ್ಷಣ ಇಲ್ಲದೆ ಸೋಂಕಿತರಾದವರಿಗೆ ಎರಡನೇ ಬಾರಿ ಸೋಂಕು ಬಂದಾಗ ಹೆಚ್ಚು ಸಮಸ್ಯೆ ಉಂಟಾಗುತ್ತದೆ. ಆದುದರಿಂದ, ಗುಣಮುಖರಾದವರು ಕೋವಿಡ್ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸುಧಾಕರ್ ಸಲಹೆ ನೀಡಿದರು.

ಕೆಲವರು ಅನಾರೋಗ್ಯದ ಲಕ್ಷಣ ಕಾಣಿಸಿಕೊಂಡಾಗ ನೋವು ನಿವಾರಕ ಮಾತ್ರೆಗಳನ್ನು ಸೇವಿಸಿ ಮನೆಯಲ್ಲೇ ಉಳಿಯುತ್ತಿದ್ದಾರೆ. ಆದರೆ ಅನಾರೋಗ್ಯ ಬಂದಾಗ ಆಸ್ಪತ್ರೆಗೆ ಹೋಗಿ ಪ್ರಾಮಾಣಿಕವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಬೇರೆ ರೋಗ ಲಕ್ಷಣ ಕಾಣಿಸಿಕೊಂಡಾಗಲೂ ಕೆಲವರು ಭಯದಿಂದ ಆಸ್ಪತ್ರೆಗೆ ಹೋಗುತ್ತಿಲ್ಲ. ಹಲ್ಲು ನೋವು ಇದ್ದವರು ಕೂಡ ದಂತ ಆಸ್ಪತ್ರೆಗಳಿಗೆ ಹೋಗುತ್ತಿಲ್ಲ. ಸರಕಾರಿ ಆಸ್ಪತ್ರೆಗಳಲ್ಲಿ ಬೇರೆ ರೋಗಗಳ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಇದೆ. ಅಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಭಯದಿಂದ ಚಿಕಿತ್ಸೆಯಿಂದ ದೂರ ಉಳಿಯಬಾರದು ಎಂದು ಅವರು ಕಿವಿಮಾತು ಹೇಳಿದರು.

ಅಧ್ಯಯನಕ್ಕೆ ಸೂಚನೆ: ಕೋವಿಡ್‍ನಿಂದಾದ ಸಾವಿನ ಕುರಿತು ಅಧ್ಯಯನ ಮಾಡಿ ವಿವರವಾದ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ. ಎರಡನೇ ಬಾರಿಗೆ ಸೋಂಕು ಬರುವ ಬಗ್ಗೆಯೂ ಅಧ್ಯಯನ ನಡೆಸುವಂತೆ ಸೂಚಿಸಲಾಗಿದೆ. ಈ ಎರಡು ವರದಿಗಳು ಶೀಘ್ರದಲ್ಲೇ ಸಲ್ಲಿಕೆಯಾಗಲಿದೆ ಎಂದು ಸುಧಾಕರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X