ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ
ಮಂಗಳೂರು, ನ.5 : ಕೋಟೆಕಾರು ಪಟ್ಟಣ ಪಂಚಾಯತ್ ಪ್ರಸ್ತುತ ಸಾಲಿನ ಎಸ್‌ಎಫ್‌ಸಿ ಮತ್ತು ಪಟ್ಟಣ ಪಂಚಾಯತ್ ನಿಧಿಯಡಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಶೇಕಡ ಶೇ.24.10ಕ್ಕೆ ಕಾಯ್ದಿರಿಸಿದ ಮೊತ್ತದಲ್ಲಿ ಆರೋಗ್ಯ ವಿಮಾ ಯೋಜನೆ, ವಿದ್ಯಾರ್ಥಿ ವೇತನ, ಸ್ವ ಉದ್ಯೋಗ ಹಾಗೂ ಮನೆ ದುರಸ್ತಿಗೆ ಸಹಾಯಧನ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಮಾಹಿತಿಗಾಗಿ ಕೋಟೆಕಾರು ಪಟ್ಟಣ ಪಂಚಾಯತ್ (ದೂ.ಸಂ: 0824-2466693)ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.
Next Story





