Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ: ಕೃಷಿ ಮಸೂದೆ ವಿರೋಧಿಸಿ...

ಶಿವಮೊಗ್ಗ: ಕೃಷಿ ಮಸೂದೆ ವಿರೋಧಿಸಿ ರೈತರಿಂದ ಹೆದ್ದಾರಿ ಬಂದ್

ವಾರ್ತಾಭಾರತಿವಾರ್ತಾಭಾರತಿ5 Nov 2020 9:44 PM IST
share
ಶಿವಮೊಗ್ಗ: ಕೃಷಿ ಮಸೂದೆ ವಿರೋಧಿಸಿ ರೈತರಿಂದ ಹೆದ್ದಾರಿ ಬಂದ್

ಶಿವಮೊಗ್ಗ (ನ.05): ರೈತ ವಿರೋಧಿಯಾಗಿರುವ ಕೃಷಿ ಮಸೂದೆ, ಕಾರ್ಮಿಕ ಮಸೂದೆ, ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ಸುಗ್ರಿವಾಜ್ಙೆಗಳ ಮೂಲಕ ಜಾರಿಗೆ ತಂದಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಅನ್ನದಾತರು, ಕೂಲಿ ಕಾರ್ಮಿಕರು ಹಾಗೂ ಡಿಎಸ್ಎಸ್ ಸಂಘಟನೆಗಳ ಕಾರ್ಯಕರ್ತರು ಹೆದ್ದಾರಿ ಬಂದ್ ಮಾಡಿ ಹೋರಾಟ ನಡೆಸಿದರು.

ಅಖಿಲ ಭಾರತ ರೈತ ಸಂಘರ್ಷ ಸಮಿತಿ ಕರೆಯ ಮೇರೆಗೆ ರೈತ ಸಂಘಟನೆಗಳು, ಕರ್ನಾಟಕ ಜನಶಕ್ತಿ, ಕರ್ನಾಟಕ ದಲಿತ ಸಂಘರ್ಷ ಸಮಿತಿಗಳು (ಅಂಬೇಡ್ಕರ್ ವಾದ) ಗುರುವಾರ ನಗರದ ಎಂ.ಅರ್ ಎಸ್ ನಲ್ಲಿ ಹೆದ್ದಾರಿ ಬಂದ್ ಮಾಡಿ ಸರ್ಕಾರಗಳ ವಿರುದ್ದ ಅಕ್ಷರಶಃ ರಣಕಹಳೆ ಮೊಳಗಿಸಿದವು.

ಕೊರೋನ ಲಾಕ್ ಡೌನ್ ಸಂದರ್ಭವನ್ನು ಬಳಸಿಕೊಂಡು ರೈತರು ಮನೆಯಿಂದ ಹೊರಗಡೆ ಬರದಂತೆ ನಿರ್ಬಂಧ ಹೇರಿ ಜನರ ಬಾಯಿಗೆ ಬಟ್ಟೆ ಕಟ್ಟಿ, ಚರ್ಚೆಗೆ ಅವಕಾಶ ನೀಡದೇ ಸುಗ್ರಿವಾಜ್ಞೆಗಳ ಮೂಲಕ ಕೃಷಿ,ಕಾರ್ಮಿಕ, ಭೂ ಸುಧಾರಣೆ ಕಾಯ್ದೆಗಳನ್ನು ಜಾರಿಗೆ ತಂದಿದೆ. ಕೃಷಿ ಮಸೂದೆಗಳನ್ನು ವಿರೋಧಿಸಿ ರಾಜ್ಯದಾದ್ಯಂತ ಅನ್ನದಾತರು ಬೀದಿಗಿಳಿದು ಹೋರಾಟ ನಡೆಸಿದರೂ ಸರ್ಕಾರ ರೈತರ ಕೂಗನ್ನೆ ಕೇಳದೆ ಸರ್ಕಾರ ಜಾಣ ಕುರುಡತನ ಪ್ರದರ್ಶನ ಮಾಡಿ, ಅನ್ನ ಕೊಡುವ ರೈತರಿಗಿಂತ ಬಂಡವಾಳ ಶಾಹಿಗಳ ಮಾತಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬೆಲೆ ಕೊಡುತ್ತಿವೆ ಎಂದು ಪ್ರತಿಭಟನಾನಿರತ ರೈತರು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ತಕ್ಷಣವೇ ಮೆಕ್ಕೆಜೋಳ ಖರೀದಿ ಕೇಂದ್ರವನ್ನು ಆರಂಬಿಸಬೇಕು ಹಾಗೂ ಪಂಜಾಬ್ ಸರ್ಕಾರದಂತೆ ರಾಜ್ಯ ಸರ್ಕಾರವು ಕೃಷಿ ಉತ್ಪನ್ನಗಳನ್ನು ಎಂಎಸ್ಪಿ ಬೆಲೆಗಿಂತ ಕಡಿಮೆ ಬೆಲೆಗೆ ಮಾರಾಟ ಮಾಡುವುದು ಅಪರಾಧವೆಂದು ಘೋಷಿಸಬೇಕು. ಜೊತೆಗೆ ಕೇರಳ ಸರ್ಕಾರದಂತೆ ತರಕಾರಿ ಬೆಳೆಗಳಿಗೆ ಬೆಲೆ ನಿಗದಿ ಮಾಡಬೇಕು ಎಂದು ಆಗ್ರಹಿಸಿದರು.

ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಸಣ್ಣ ಮತ್ತು ಮಧ್ಯಮ ವರ್ಗದ ರೈತರು ತಮ್ಮ ಜಮೀನುಗಳನ್ನು ದೊಡ್ಡ ದೊಡ್ಡ ಶ್ರೀಮಂತರು ಹಾಗೂ ಭೂ ಮಾಫಿಯಾದವರು ತೋರಿಸುವ ಹಣದ ಆಸೆಗಾಗಿ ಜಮೀನು ಸಂಪೂರ್ಣವಾಗಿ ಕಳೆದುಕೊಂಡು ನಿರಾಶ್ರಿತರಾಗುತ್ತಾರೆ. ಹಾಗಾಗಿ ಈ ಕಾಯ್ದೆಯನ್ನು ಕೂಡಲೇ ವಾಪಸ್ಸು ಪಡೆಯಬೇಕು ಎಂದು ಒತ್ತಾಯಿಸಿದರು.

ಟ್ರಾಫಿಕ್ ಜಾಮ್: ಸರ್ಕಾರಗಳ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ಹಮ್ಮಿಕೊಂಡಿದ್ದ ಹೆದ್ದಾರಿ ಬಂದ್ ಗೆ ಮುಕ್ಕಾಲು ತಾಸಿಗೂ ಹೆಚ್ಚು ಟ್ರಾಫಿಕ್ ಜಾಮ್ ಆಗಿತ್ತು. ರೈತರು,ಕೃಷಿ ಕೂಲಿ ಕಾರ್ಮಿಕರು  ರಸ್ತೆಗೆ ಅಡ್ಡ ಕುಳಿತಿದ್ದರು. ಇದರಿಂದ ನಾಲ್ಕು ದಿಕ್ಕಿನಿಂದಲೂ ಬರುವ ವಾಹನಗಳು ಒಂದು ಕಿಲೋ ಮೀಟರ್ ವರೆಗೂ ನಿಂತಿದ್ದವು. ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಇದ್ದುದ್ದರಿಂದ ಬಸ್ ಗಳು ಸಂಚರಿಸಲು ತೊಂದರೆಯಾದ ಘಟನೆಯೂ ನಡೆಯಿತು. ಪೊಲೀಸರು ಮಧ್ಯಪ್ರವೇಶಿಸಿ, ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತೆರಳಲು ಅವಕಾಶ ಮಾಡಿಕೊಟ್ಟರು.

ಈ ಸಂದರ್ಭದಲ್ಲಿ ರೈತ ಸಂಘದ ಮುಖಂಡರಾದ ಎಸ್.ಶಿವಮೂರ್ತಿ, ಇ.ಬಿ.ಜಗದೀಶ್, ಟಿ.ಎಂ. ಚಂದ್ರಪ್ಪ, ಕೆ.ರಾಘವೇಂದ್ರ, ಜ್ಞಾನೇಶ್, ಹಿಟ್ಟೂರು ರಾಜು, ನಾಗರಾಜ್ ಪುರದಾಳ್ ಹಾಗೂ ಪ್ರಮುಖರಾದ ಕೆ.ಎಲ್.ಅಶೋಕ್, ಟಿ.ಹೆಚ್.ಹಾಲೇಶಪ್ಪ, ಶಿವಕುಮಾರ್ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X