Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜನೌಷಧಿಯಲ್ಲಿ ಶೀಘ್ರ ಆಯುರ್ವೇದಿಕ್ ಔಷಧ :...

ಜನೌಷಧಿಯಲ್ಲಿ ಶೀಘ್ರ ಆಯುರ್ವೇದಿಕ್ ಔಷಧ : ಡಿ.ವಿ.ಸದಾನಂದಗೌಡ

ವಾರ್ತಾಭಾರತಿವಾರ್ತಾಭಾರತಿ6 Nov 2020 4:20 PM IST
share
ಜನೌಷಧಿಯಲ್ಲಿ ಶೀಘ್ರ ಆಯುರ್ವೇದಿಕ್ ಔಷಧ : ಡಿ.ವಿ.ಸದಾನಂದಗೌಡ

ಬೆಂಗಳೂರು: ಜನೌಷಧ ಕೇಂದ್ರಗಳಲ್ಲಿ ಬ್ರಾಂಡೆಡ್ ಔಷಧ ಮಾರಾಟಕ್ಕೆ ಅವಕಾಶ ಕೊಡುವುದಿಲ್ಲ. ಆದರೆ, ಮುಂದಿನ ದಿನಗಳಲ್ಲಿ ಕಡಿಮೆ ದರದಲ್ಲಿ ಆಯುರ್ವೇದಿಕ್ ಔಷಧ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದು ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವರಾದ ಡಿ.ವಿ.ಸದಾನಂದಗೌಡ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಪ್ರಧಾನಮಂತ್ರಿ ಜನೌಷಧಿ ಕೇಂದ್ರದ ಪ್ರಾಂತೀಯ ಕಚೇರಿಯನ್ನು ಬೆಂಗಳೂರಿನಲ್ಲಿ ಡಿ.ವಿ.ಸದಾನಂದಗೌಡ ಅವರು ವರ್ಚುವಲ್ ಮೂಲಕ ಉದ್ಘಾಟಿಸಿ ಸಚಿವರು ಮಾತನಾಡಿ, 

ಜನರಿಗೆ ಅಗ್ಗದ ದರದಲ್ಲಿ ಗುಣಮಟ್ಟದ ಔಷಧಗಳನ್ನು ಕೊಡುವ ಕೆಲಸವನ್ನು ಇಂದು ಕೇಂದ್ರ ಸರ್ಕಾರ ಮಾಡಿದ್ದು, ಜನೌಷಧಿ ಮೂಲಕ ಜನರಿಗೆ ಶೇ.10ರಿಂದ ಶೇ.90ರವರೆಗೆ ರಿಯಾಯಿತಿ ದರದಲ್ಲಿ ಕೊಡಲಾಗುತ್ತದೆ ಎಂದು ತಿಳಿಸಿದರು.

ಜನರಿಕ್ ಮೆಡಿಸಿನ್ ಆ್ಯಪ್ ನಮ್ಮಲ್ಲಿದ್ದು, ನಿಮ್ಮ ಸಮೀಪದಲ್ಲಿ ಎಲ್ಲಿ ಜನರಿಕ್ ಔಷಧ ಮಳಿಗೆ ಇದೆ ಎಂದು ತಿಳಿಸುತ್ತದೆ. ಜೊತೆಗೆ ನಿಮಗೆ ಬೇಕಿರುವ ಔಷಧದ ಹೆಸರನ್ನು ಹಾಕಿದರೆ, ಆ ಔಷಧದ ಫಾರ್ಮೂಲಾ ಹೊಂದಿರುವ ಇತರೆ ಬ್ರಾಂಡ್ ನ ಯಾವ ಔಷಧ ಮಳಿಗೆಯಲ್ಲಿದೆ ಎಂಬುದನ್ನು ಆ್ಯಪ್ ತೋರಿಸುತ್ತದೆ. ಹೀಗಾಗಿ ರಾಜ್ಯದ ವಿವಿಧೆಡೆ ಶೀಘ್ರದಲ್ಲಿ 1000 ಜನರಿಕ್ ಔಷಧ ಮಳಿಗೆಗಳನ್ನು ತೆರೆಯುವ ಗುರಿಹಾಕಿಕೊಳ್ಳಲಾಗಿದೆ ಎಂದು ಕೇಂದ್ರ ಸಚಿವರು ತಿಳಿಸಿದರು.

ಸಾಮಾನ್ಯ ಕಾಯಿಲೆಯಾದ ಬಿಪಿ, ಶುಗರ್ ಇದ್ದರೆ ಬ್ರಾಂಡೆಡ್ ಔಷಧಕ್ಕೆ ಸುಮಾರು 2 ಸಾವಿರದಿಂದ ಎರಡೂವರೆ ಸಾವಿರ ರೂಪಾಯಿ ಕೊಡಬೇಕು. ಆದರೆ, ಜನೌಷಧ ಮೂಲಕ ಕೇವಲ 400 ರೂಪಾಯಿಯಿಂದ 500 ರೂಪಾಯಿಗಳಷ್ಟು ಖರ್ಚಾಗುತ್ತಿದೆ ಎಂದು ತಿಳಿಸಿದರು.

ಈಗ ಸರ್ಕಾರಿ ಆಸ್ಪತ್ರೆಗಳಲ್ಲಿ, ಮೆಡಿಕಲ್ ಆಸ್ಪತ್ರೆಗಳಲ್ಲಿ ಜನೌಷಧಿಗಳನ್ನೇ ಬರೆಯುವ ಬಗ್ಗೆ ಸೂಚನೆ ನೀಡಲಾಗುತ್ತಿದೆ. ಈ ಬಗ್ಗೆ ಆರೋಗ್ಯ ಸಚಿವರಾದ ಡಾ.ಸುಧಾಕರ್ ಅವರ ಜೊತೆಗೂ ಚರ್ಚಿಸಲಾಗಿದೆ. ಒಮ್ಮೆ ಸರ್ಕಾರಿ ಆಸ್ಪತ್ರೆಗಳಲ್ಲಿ ಇದಕ್ಕೆ ಚಾಲನೆ ಸಿಕ್ಕರೆ ನಿಧಾನವಾಗಿ ಜನರಲ್ಲಿ ಪ್ರಚಾರ ಉಂಟಾಗುತ್ತದೆ ಎಂದು ಸಚಿವರಾದ ಸದಾನಂದ ಗೌಡ ಅವರು ತಿಳಿಸಿದರು.

ಜನೌಷಧ ಬಗ್ಗೆ ಪ್ರಶಂಸೆಯ ಪತ್ರ

ತಂದೆಯ ಔಷಧಕ್ಕಾಗಿ ಪ್ರತಿ ತಿಂಗಳಿಗೆ 3 ಸಾವಿರ ಖರ್ಚಾಗುತ್ತಿತ್ತು. ಆದರೆ, ಜನೌಷಧ ಮಳಿಗೆಯಲ್ಲಿ ಕೇವಲ 210 ರೂಪಾಯಿಗಳು ಖರ್ಚಾಗುತ್ತಿದೆ ಎಂದು ನಾಗರಿಕರೊಬ್ಬರು ಬರೆದ ಪತ್ರವನ್ನು ಸಚಿವರಾದ ಸದಾನಂದ ಗೌಡ ಅವರು ಓದಿ ಹೇಳಿದರು. 

ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಮಾತನಾಡಿ, ಸಹಕಾರ ಇಲಾಖೆಗೆ ವಹಿಸಿದ ಜವಾಬ್ದಾರಿಯನ್ನು ಸಮರ್ಪಕವಾಗಿ ಅನುಷ್ಠಾನ ಗೊಳಿಸುವ ಕೆಲಸವನ್ನು ಸಹಕಾರ ಇಲಾಖೆ ಮೂಲಕ ನಾವು ಮಾಡುತ್ತೇವೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ಜನೌಷಧ ಸೇರಿದಂತೆ ಹಲವು ಕಾರ್ಯಕ್ರಮವನ್ನು ಜನರಿಗೆ ಮುಟ್ಟಿಸುವಂತಹ ಕಾರ್ಯಕ್ರಮಕ್ಕೆ ಸಹಕಾರವನ್ನು ನಮ್ಮ ಸಹಕಾರ ಇಲಾಖೆ ಮಾಡುತ್ತಿದೆ. ಸಹಕಾರ ಇಲಾಖೆ ನಾಡಿನ ಮೂಲೆಮೂಲೆಗಳಲ್ಲಿ ಜನಸಂಪರ್ಕವನ್ನು ಹೊಂದಿರುವುದೇ ಇದಕ್ಕೆ ಕಾರಣ. ಸಹಕಾರಿಗಳು ಯೋಜನೆಗಳ ಅನುಷ್ಠಾನಕ್ಕೆ ಶ್ರಮವಹಿಸಬೇಕು ಎಂದು ಕರೆ ನೀಡಿದರು.

ಸಹಕಾರ ಇಲಾಖೆಯ ಚುನಾವಣೆ ಶೀಘ್ರ ಬರುತ್ತಿದೆ. ಕೆಲವು ಕಡೆ ಜನರಲ್ ಬಾಡಿ ನಡೆದಿಲ್ಲ. ಅಂತಹ ಕಡೆಗಳಲ್ಲಿ ಜನರಲ್ ಬಾಡಿಗೆ ಈ ಯೋಜನೆಯ ಬಗ್ಗೆ ಅಜೆಂಡಾದಲ್ಲಿ ಸೇರಿಸಿಕೊಳ್ಳಬಹುದು. ಈ ಮೂಲಕ ಯೋಜನೆಗಳನ್ನು ಜನರಿಗೆ ತಲುಪಿಸಿ ಎಂದು ಸಚಿವರು ತಿಳಿಸಿದರು.

ಸಣ್ಣ ಮಟ್ಟದ ಸಹಕಾರ ಕ್ಷೇತ್ರದಿಂದ ಇಂದು ಕೇಂದ್ರ ಸಚಿವರಾಗಿ ಅನೇಕ ಜನಪರ ಕೆಲಸಗಳನ್ನು ಡಿ.ವಿ.ಸದಾನಂದ ಗೌಡ ಅವರು ಮಾಡುತ್ತಿದ್ದಾರೆ. ರಾಜ್ಯದಲ್ಲೂ ಸಹ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ಸಹಕಾರ ನೀಡಿದ್ದಾರೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X