ಬಿಹಾರದಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದರೆ ಬಿಎಸ್‌ವೈ ಮೂಲಕ ಅಪರೇಷನ್ ಕಮಲ: ಬಿ.ಕೆ.ಹರಿಪ್ರಸಾದ್ ವ್ಯಂಗ್ಯ

ಶಿವಮೊಗ್ಗ, ನ.06: ಬಿಹಾರದಲ್ಲಿ ಅತಂತ್ರ ವಿಧಾನ ಸಭೆ ನಿರ್ಮಾಣವಾದರೆ ಸಿಎಂ ಬಿ.ಎಸ್.ಯಡಿಯೂರಪ್ಪನವರೇ ಬಿಹಾರಕ್ಕೆ ತೆರಳುವ ನಿರೀಕ್ಷೆ ಇದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ವ್ಯಂಗ್ಯವಾಡಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಬಿಹಾರ ಚುನಾವಣಾ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಬಿಹಾರ ಚುನಾವಣೆಯಲ್ಲಿ ತೇಜಸ್ವಿಯಾದವ್ ಅವರ ನೇತೃತ್ವದ ಮಹಾಘಟಬಂಧನ್ ಅಧಿಕಾರ ಹಿಡಿಯುವುದು ನಿಶ್ಚಿತ. ಒಂದು ವೇಳೆ ತೇಜಸ್ವಿ ಯಾದವ್ ಅವರಿಗೆ ಸ್ಪಷ್ಟ ಬಹುಮತವಿಲ್ಲದಿದ್ದರೆ ಅತಂತ್ರ ವಿಧಾನ ಸಭೆ ನಿರ್ಮಾಣವಾಗಲಿದೆ. ಆಗ ಅಲ್ಲಿಗೆ ಬಿ.ಎಸ್.ಯಡಿಯೂರಪ್ಪನವರು ಹೋಗಲಿದ್ದಾರೆ. ಅಲ್ಲಿಯೂ ಅಪರೇಷನ್ ಕಮಲ ನಡೆಸಿ ಎನ್‌ಡಿಎ ಪಕ್ಷವನ್ನು ಅಧಿಕಾರಕ್ಕೆ ತರಬಹುದು ಎಂದು ವ್ಯಂಗ್ಯವಾಡಿದರು.
ಮಾಜಿ ಶಾಸಕ,ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಬಂಧನ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ಪಕ್ಷಕ್ಕೆ ಯಾರು ಸೇರ್ಪಡೆಯಾಗುವುದಿಲ್ಲವೋ ಅಂತಹ ನಾಯಕರ ಮೇಲೆ ಬಿಜೆಪಿ, ತನ್ನ ಮಂಚೂಣಿ ಘಟಕಗಳಾದ ಐಟಿ, ಈಡಿ, ಸಿಬಿಐ ಸಂಸ್ಥೆಗಳನ್ನು ಬಳಸಿಕೊಂಡು ದಾಳಿ ನಡೆಸುತ್ತದೆ. ಈಗ ಆಗಿರುವುದು ಆದೇ ಎಂದು ಹೇಳಿದರು.





