ಸಿನಿಮಾಟೋಗ್ರಫಿ, ಸೌಂಡ್ ರೆಕಾರ್ಡಿಂಗ್ ಆ್ಯಂಡ್ ಇಂಜಿನಿಯರಿಂಗ್ ಕೋರ್ಸ್‍ಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಬೆಂಗಳೂರು, ನ. 6: ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಸರಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯು ಚಲನಚಿತ್ರ ಮತ್ತು ಮಾಧ್ಯಮ ಕ್ಷೇತ್ರಗಳಿಗೆ ಸಂಬಂಧಿಸಿದ ಸಿನಿಮಾಟೋಗ್ರಫಿ ಮತ್ತು ಸೌಂಡ್ ರೆಕಾರ್ಡಿಂಗ್ ಆ್ಯಂಡ್ ಇಂಜಿನಿಯರಿಂಗ್, ಡಿಪ್ಲೋಮಾ ಕೋರ್ಸುಗಳಿಗೆ ಅರ್ಜಿ ಸಲ್ಲಿಸಲು ನ.14ರ ವರೆಗೆ ಅವಧಿ ವಿಸ್ತರಿಸಿದೆ.
2020-21ನೆ ಶೈಕ್ಷಣಿಕ ಸಾಲಿಗೆ ಖಾಲಿ ಉಳಿದಿರುವ ಪ್ರಥಮ ಸೆಮಿಸ್ಟರ್ ಮತ್ತು ತೃತೀಯ ಸೆಮಿಸ್ಟರ್ ಡಿಪ್ಲೋಮಾ ಸೀಟುಗಳಿಗೆ ಎಸೆಸೆಲ್ಸಿ/ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ ವಿದ್ಯಾರ್ಥಿಗಳಿಂದ ಪ್ರಥಮ ವರ್ಷದ ಡಿಪ್ಲೋಮಾ ಕೋರ್ಸುಗಳಿಗೆ ಮತ್ತು ದ್ವಿತೀಯ ಪಿಯುಸಿ-ವಿಜ್ಞಾನ ವಿಷಯದಲ್ಲಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳಿಗೆ ತೃತೀಯ ಸೆಮಿಸ್ಟರ್ ಗೆ (ಲ್ಯಾಟರಲ್ ಎಂಟ್ರಿ) ಪ್ರವೇಶವನ್ನು ಪಡೆಯಲು ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಸಾಮಾನ್ಯ ವರ್ಗದಡಿ ಆನ್‍ಲೈನ್ ಮೂಲಕ ಭರ್ತಿ ಮಾಡಿ, ಅರ್ಹ ಅಭ್ಯರ್ಥಿಗಳು ಖುದ್ದು ಸಂಸ್ಥೆಗೆ ಭೇಟಿ ನೀಡಿ ನೇರ ಪ್ರವೇಶವನ್ನು ಪಡೆಯಬಹುದಾಗಿದೆ.
ಹೆಚ್ಚಿನ ವಿವರಗಳಿಗಾಗಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ವೆಬ್‍ಸೈಟ್ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‍ಸೈಟ್ ಹಾಗೂ ದೂರವಾಣಿ 96867 54592, 98442 88324, 89701 01477 ಅನ್ನು ಸಂಪರ್ಕಿಸಲು ಅಧಿಕೃತ ಪ್ರಕಟಣೆ ತಿಳಿಸಿದೆ.





