Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗೋಹತ್ಯೆ ತಡೆಗೆ ವಿಶೇಷ ಕಾರ್ಯಪಡೆ ರಚಿಸಲು...

ಗೋಹತ್ಯೆ ತಡೆಗೆ ವಿಶೇಷ ಕಾರ್ಯಪಡೆ ರಚಿಸಲು ಚಿಂತನೆ: ಗೃಹ ಸಚಿವ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ6 Nov 2020 6:36 PM IST
share
ಗೋಹತ್ಯೆ ತಡೆಗೆ ವಿಶೇಷ ಕಾರ್ಯಪಡೆ ರಚಿಸಲು ಚಿಂತನೆ: ಗೃಹ ಸಚಿವ ಬೊಮ್ಮಾಯಿ

ಮಡಿಕೇರಿ, ನ.6: ಗೋಹತ್ಯೆ ಹಾಗೂ ಗೋವು ಕಳ್ಳಸಾಗಾಟ ತಡೆಗಟ್ಟುವ ನಿಟ್ಟಿನಲ್ಲಿ ವಿಶೇಷ ಕಾರ್ಯಪಡೆಯೊಂದನ್ನು ರಚಿಸುವ ಚಿಂತನೆ ಇರುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಹತ್ಯೆ ಹಾಗೂ ಗೋವು ಕಳ್ಳಸಾಗಾಟ ನಿಯಂತ್ರಿಸುವ ನಿಟ್ಟಿನಲ್ಲಿ ಈಗಾಗಲೇ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸರಕಾರೇತರ ಸಂಸ್ಥೆಗಳನ್ನೊಳಗೊಂಡ ಸಮಿತಿಯೊಂದನ್ನು ರಚಿಸಲಾಗಿದ್ದು, ಈ ನಿಟ್ಟಿನಲ್ಲಿ ಸಲಹೆ ಸೂಚನೆಗಳನ್ನು ಪಡೆಯಲಾಗುತ್ತಿದೆ. ಗೋ ಹತ್ಯೆಯ ಜೊತೆಗೆ ಗೋವು ಕಳ್ಳಸಾಗಾಟ ಮಾಡುವವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಈ ನಿಟ್ಟಿನಲ್ಲಿ ಪ್ರತ್ಯೇಕವಾದ ಕಾರ್ಯಪಡೆಯೊಂದನ್ನು ರಚಿಸುವ ಚಿಂತನೆಯೂ ಇದೆ ಎಂದು ಅವರು ನುಡಿದರು.

ಕೊರೋನ ಲಾಕ್‍ಡೌನ್ ಸಂದರ್ಭದಲ್ಲಿ ಅಪರಾಧ ಪ್ರಕರಣಗಳ ಪ್ರಮಾಣ ನಿಯಂತ್ರಣದಲ್ಲಿದ್ದರೂ, ಇದೀಗ ಅಪರಾಧಗಳ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಈಗಾಗಲೇ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದ್ದು, ವಿಶೇಷವಾಗಿ ಕೊಲೆ, ಅತ್ಯಾಚಾರ ಪ್ರಕರಣಗಳ ಬಗ್ಗೆ ನಿಗಾವಹಿಸುವಂತೆ ಹಾಗೂ ದಸ್ತಗಿರಿಯಾದವರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕೆಂದು ಸೂಚಿಸಲಾಗಿದೆ ಎಂದು ಬೊಮ್ಮಾಯಿ ತಿಳಿಸಿದರು.

ಪರಿಹಾರ ಹೆಚ್ಚಳಕ್ಕೆ ಕ್ರಮ
ಕೊಡಗು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ. ಆದರೆ ಜಿಲ್ಲೆಯಲ್ಲಿ ಕಾಡಾನೆ ಹಾವಳಿಯಿಂದಾಗಿ ಬೆಳೆ ಹಾನಿಯೊಂದಿಗೆ ಜೀವ ಹಾನಿಯೂ ಆಗುತ್ತಿದ್ದು, ಇಂತಹ ಪ್ರಕರಣಗಳಲ್ಲಿ ಸರಕಾರ ನೀಡುತ್ತಿರುವ ಪರಿಹಾರವನ್ನು ಹೆಚ್ಚಿಸಬೇಕೆಂಬ ಕೂಗು ಹಿಂದಿನಿಂದಲೂ ಇದೆ. ಇಲ್ಲವಾದಲ್ಲಿ ಇದು ಕಾನೂನು ಸುವ್ಯವಸ್ಥೆಗೆ ಭಂಗ ಉಂಟು ಮಾಡುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಪರಿಹಾರ ಮೊತ್ತವನ್ನು ಹೆಚ್ಚಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಮುಖ್ಯಮಂತ್ರಿಗಳ ಗಮನಸೆಳೆಯಲಾಗುವುದು ಎಂದರು.

ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯನ್ನು ಬಲವರ್ಧನೆಗೊಳಿಸಲು ಗೃಹ ಇಲಾಖೆ ಬದ್ಧವಾಗಿದ್ದು, ಈಗಾಗಲೇ ಇರುವ ಪೊಲೀಸ್ ಅಧೀಕ್ಷಕರ ಕಚೇರಿ ಹಳೆಯದಾಗಿರುವುದರಿಂದ ನೂತನ ಕಚೇರಿ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಲಾಗಿದೆ. ಮುಂದಿನ ಬಜೆಟ್‍ನಲ್ಲಿ ಇದಕ್ಕಾಗಿ 10 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ನುಡಿದರು.

ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ 95 ಸಿವಿಲ್ ಹಾಗೂ 39 ಸಶಸ್ತ್ರ ಪೊಲೀಸ್ ಸಿಬ್ಬಂದಿಗಳ ಕೊರತೆ ಇದ್ದು, ಎರಡು ಹಂತಗಳಲ್ಲಿ ಸಿಬ್ಬಂದಿ ನೇಮಕಾತಿಗೆ ಕ್ರಮ ವಹಿಸಲಾಗುವುದು. ಮೊದಲ ಹಂತದಲ್ಲಿ ಶೇ.70ರಷ್ಟು ಸಿಬ್ಬಂದಿಗಳನ್ನು ಭರ್ತಿ ಮಾಡಲಾಗುತ್ತಿದ್ದು, ಉಳಿದವುಗಳನ್ನು ಎಪ್ರಿಲ್-ಮೇ ತಿಂಗಳಲ್ಲಿ ಭರ್ತಿ ಮಾಡಲಾಗುವುದು ಎಂದು ಅವರು ಹೇಳಿದರು.

ರಾಜ್ಯದಲ್ಲಿ ಮಾದಕ ವಸ್ತು ಮಾರಾಟವನ್ನು ನಿಯಂತ್ರಿಸಲು ರಾಜ್ಯ ಸರಕಾರ ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದು, ರಾಜ್ಯವನ್ನು ಡ್ರಗ್ಸ್ ಮುಕ್ತಗೊಳಿಸಲು ಪ್ರಯತ್ನಿಸಲಾಗುತ್ತಿದೆ. ಈ ನಡುವೆ ಕೆಲವು ಔಷಧಿ ಅಂಗಡಿಗಳಲ್ಲಿ ವೈದ್ಯರ ಶಿಫಾರಸ್ಸು ಇಲ್ಲದೆಯೇ ಮಾದಕ ವಸ್ತುಗಳಿರುವ ನಿಷೇಧಿತ ಔಷಧಿಗಳನ್ನು ಮಾರಾಟ ಮಾಡುತ್ತಿರುವ ಪ್ರಕರಣಗಳು ಗಮನಕ್ಕೆ ಬಂದಿದ್ದು, ಇದನ್ನು ನಿಯಂತ್ರಿಸುವಂತೆ ಡ್ರಗ್ಸ್ ಕಂಟ್ರೋಲರ್ ರವರಿಗೆ ತಿಳಿಸಲಾಗಿದೆ. ಈ ಸಂಬಂಧ ಅವರಿಂದ ಸೂಕ್ತ ಭರವಸೆ ದೊರಕಿದ್ದು, ಇದರೊಂದಿಗೆ ಪೊಲೀಸ್ ಇಲಾಖೆಯೂ ಅಂತಹ ಮಾರಾಟಗಾರರ ವಿರುದ್ಧ ಕ್ರಮ ಕೈಗೊಳ್ಳಲಿದೆ ಬೊಮ್ಮಾಯಿ ತಿಳಿಸಿದರು.

ಅನಧಿಕೃತ ಹೋಂಸ್ಟೇಗಳ ವಿರುದ್ಧ ಕ್ರಮ
ಕೊಡಗು ಜಿಲ್ಲೆಯಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಹೋಂಸ್ಟೇಗಳ ವಿರುದ್ಧ ಮುಂದಿನ ದಿನಗಳಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಅಂತಹ ಹೋಂಸ್ಟೇಗಳ ವಿರುದ್ಧ ಕ್ರಮಕೈಗೊಳ್ಳದ ಅಧಿಕಾರಿಗಳ ವಿರುದ್ಧವೂ ಶಿಸ್ತುಕ್ರಮ ಜರಗಿಸಲಾಗುವುದು ಎಂದು ಎಚ್ಚರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X