Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಲವ್‍ ಜಿಹಾದ್ ಬಗ್ಗೆ ಬಿಜೆಪಿಗರ ಹೇಳಿಕೆ...

ಲವ್‍ ಜಿಹಾದ್ ಬಗ್ಗೆ ಬಿಜೆಪಿಗರ ಹೇಳಿಕೆ ದ್ವೇಷಪೂರಿತ ರಾಜಕೀಯ ಷಡ್ಯಂತ್ರ: ಪಿಎಫ್‍ಐ

ವಾರ್ತಾಭಾರತಿವಾರ್ತಾಭಾರತಿ6 Nov 2020 7:36 PM IST
share
ಲವ್‍ ಜಿಹಾದ್ ಬಗ್ಗೆ ಬಿಜೆಪಿಗರ ಹೇಳಿಕೆ ದ್ವೇಷಪೂರಿತ ರಾಜಕೀಯ ಷಡ್ಯಂತ್ರ: ಪಿಎಫ್‍ಐ

ಬೆಂಗಳೂರು, ನ.6: ದೇಶದಲ್ಲಿ ಲವ್ ಜಿಹಾದ್ ಎಂಬುದು ಅಸ್ತಿತ್ವವೇ ಇಲ್ಲವೆಂದು ಪೊಲೀಸರು, ತನಿಖಾ ಏಜೆನ್ಸಿಗಳು, ಕೇಂದ್ರ ಸರಕಾರವು ಈಗಾಗಲೇ ಸ್ಪಷ್ಟಪಡಿಸಿವೆ. ಆದರೂ ರಾಜ್ಯ ಬಿಜೆಪಿ ನಾಯಕರು ಲವ್ ಜಿಹಾದ್ ಕುರಿತು ನೀಡುತ್ತಿರುವ ಹೇಳಿಕೆಗಳು ಹಾಸ್ಯಾಸ್ಪದ ಹಾಗೂ ದ್ವೇಷಪೂರಿತ ರಾಜಕೀಯ ಷಡ್ಯಂತ್ರವಾಗಿದೆ ಎಂದು ಪಿಎಫ್‍ಐ ರಾಜ್ಯಾಧ್ಯಕ್ಷ ಯಾಸೀರ್ ಹಸನ್ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಲವ್ ಜಿಹಾದ್ ಬಗ್ಗೆ ತನಿಖೆ ನಡೆಸಿರುವ ಕೇರಳ ಹಾಗೂ ಕರ್ನಾಟಕದ ಪೊಲೀಸರು ಇಂತಹ ಆರೋಪ ನಿರಾಧಾರ ಎಂಬ ತೀರ್ಮಾನಕ್ಕೆ ಬಂದಿದ್ದಾರೆ. ಲವ್ ಜಿಹಾದ್ ಎಂಬುದು ಸಮಾಜದಲ್ಲಿ ಧಾರ್ಮಿಕ ಧ್ರುವೀಕರಣ ನಡೆಸಲು ಬಲಪಂಥೀಯ ಹಿಂದುತ್ವ ಶಕ್ತಿಗಳು ಪ್ರಾರಂಭಿಸಿದ ಭೀಕರ ಹಾಗೂ ದುರಾಲೋಚನೆಯ ಪರಿಣಾಮಗಳಿಂದ ನಡೆಸಿದ ಕೆಡುಕಿನ ಅಭಿಯಾನವಾಗಿದೆ ಎಂದು ಎನ್‍ಐಎ ತನಿಖೆ ಧೃಡಪಡಿಸಿದೆ ಎಂದು ತಿಳಿಸಿದ್ದಾರೆ.

ಈ ವರ್ಷದ ಫೆಬ್ರವರಿಯಲ್ಲಿ ಕೇಂದ್ರದ ಬಿಜೆಪಿ ಸರಕಾರ ಲವ್ ಜಿಹಾದ್ ಪ್ರಕರಣಗಳು ವರದಿಯಾಗಿಲ್ಲ ಎಂಬ ಲಿಖಿತ ಉತ್ತರವನ್ನು ಸಂಸತ್ತಿಗೆ ನೀಡಿತ್ತು. ಆದಾಗ್ಯೂ, ರಾಜ್ಯದ ಬಿಜೆಪಿ ನಾಯಕರು ಕಲ್ಪಿತ ಲವ್ ಜಿಹಾದ್‍ಗೆ ಮತ್ತೆ ಜೀವ ತುಂಬಿ ತಮ್ಮ ವಿಭಜನಕಾರಿ ಅಜೆಂಡಾವನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುತ್ತಿರುವುದು ನಾಚಿಕೆಗೇಡಿನ ವಿಚಾರವೆಂದು ಅವರು ಟೀಕಿಸಿದ್ದಾರೆ.

ಮತಾಂತರ ನಿಷೇಧ ಕಾಯ್ದೆ ತರುವ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಇತರೆ ಸಚಿವರು ಹೇಳಿಕೆಗಳನ್ನು ನೀಡುತ್ತಿದ್ದಾರೆ. ವಾಸ್ತವದಲ್ಲಿ ಮತಾಂತರ ನಿಷೇಧ ಕಾಯ್ದೆಯು ಸಂವಿಧಾನವು ನಾಗರಿಕರಿಗೆ ಖಾತರಿಪಡಿಸಿದ ಧಾರ್ಮಿಕ ಸ್ವಾತಂತ್ರ್ಯದ ಮೇಲಿನ ಆಕ್ರಮಣವಾಗಿದೆ. ಇಲ್ಲದ ಲವ್ ಜಿಹಾದ್ ಕುರಿತು ಪ್ರಚೋದನಾಕಾರಿ ಹೇಳಿಕೆ ನೀಡುವ ಮೂಲಕ ಬಿಜೆಪಿ ನಾಯಕರು ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಮಂದಿರ ನಿರ್ಮಾಣ, ಗೋಹತ್ಯೆ, ಘರ್ ವಾಪ್ಸಿಯಂತೆ ಲವ್ ಜಿಹಾದ್ ಕೂಡ ಬಿಜೆಪಿಯ ಭಾವನಾತ್ಮಕ ರಾಜಕೀಯದ ಅಸ್ತ್ರವಾಗಿದೆ. ಸಂಘಪರಿವಾರವು 2009ರಲ್ಲಿ ಚಾಲ್ತಿಗೆ ತಂದ ಕಪೋಲಕಲ್ಪಿತ ಲವ್ ಜಿಹಾದ್, ಧರ್ಮಗಳ ಮಧ್ಯೆ ಪರಸ್ಪರ ಅಪನಂಬಿಕೆ ಸೃಷ್ಟಿಸುವಲ್ಲಿ ಯಶಸ್ವಿಯಾಗಿದೆ. ಬಿಜೆಪಿ-ಸಂಘಪರಿವಾರದ ದ್ವೇಷಪೂರಿತ ಮತ್ತು ಕೋಮು ಧ್ರುವೀಕರಣದ ರಾಜಕೀಯದ ವಿರುದ್ಧ ಜನತೆ ಜಾಗೃತರಾಗಬೇಕೆಂದು ಅವರು ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X