ಉಡುಪಿ: ಫರ್ನಿಚರ್ ಕ್ಲಸ್ಟರ್‌ಗೆ ಜಾಗ ಗುರುತಿಸಿ, ಕೈಗಾರಿಕಾಭಿವೃದ್ದಿ ಕುರಿತ ಸಭೆಯಲ್ಲಿ ಸಚಿವ ಜಗದೀಶ್ ಶೆಟ್ಟರ್

ಉಡುಪಿ, ನ.6: ಜಿಲ್ಲೆಯಲ್ಲಿ ಮರದ ಸಾಮಾಗ್ರಿಗಳನ್ನು ತಯಾರಿಸುವ ಫರ್ನಿಚರ್ ಕ್ಲಸ್ಟರ್ ಆರಂಭಿಸಲು ಅಗತ್ಯ ಪ್ರಮಾಣದ ಸೂಕ್ತ ಜಾಗವನ್ನು ಗುರು ತಿಸಿದರೆ, ಸರಕಾರದಿಂದ ಎಲ್ಲ ರೀತಿಯ ನೆರವು ಒದಗಿಸಲಾಗುವುದು ಎಂದು ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವ, ಮಾಜಿ ಮುಖ್ಯುಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಉಡುಪಿ ಜಿಲ್ಲೆಯ ಕೈಗಾರಿಕಾಭಿವೃದ್ದಿ ಕುರಿತ ಸಭೆಯ ಅಧ್ಯಕ್ಷತೆ ಹಿಸಿ ಅವರು ಮಾತ ನಾಡುತ್ತಿದ್ದರು.
ರಾಜ್ಯದಲ್ಲಿ ಈಗಾಗಲೇ ಕೈಗಾರಿಕೆ ಅಭಿವೃಧ್ದಿಗಾಗಿ ವಿವಿಧ ಕ್ಲಸ್ಟರ್‌ಗಳನ್ನು ಆರಂಭಿಸಲು ಸೂಚನೆ ನೀಡಲಾಗಿದೆ. ಕೊಪ್ಪಳದಲ್ಲಿ ಆಟಿಕೆ ತಯಾರಿಕಾ ಕ್ಲಸ್ಟರ್ ಮತ್ತು ಯಾದಗಿರಿ-ರಾಯಚೂರಿನಲ್ಲಿ ಫಾರ್ಮಾ ಕ್ಲಸ್ಟರ್ ಆರಂಭಿಸುವ ನಿಟ್ಟಿ ನಲ್ಲಿ ಕಾರ್ಯಗಳು ನಡೆಯುತ್ತಿವೆ ಎಂದರು.
ಉಡುಪಿ ಜಿಲ್ಲೆಯಲ್ಲಿ ಬಂದರು ಇರುವ ಕಾರಣ ವಿದೇಶಗಳಿಂದ ಉತ್ತಮ ಗುಣಮಟ್ಟದ ಮರಗಳನ್ನು ಆಮದು ಮಾಡಿಕೊಳ್ಳಲು ಮತ್ತು ತಯಾರಿ ಸಿದ ಪೀಠೋಪಕರಣಗಳನ್ನು ರಫ್ತು ಮಾಡಲು ಉತ್ತಮ ಅವಕಾಶ ಇರುವುದರಿಂದ ಇಲ್ಲಿ ಫರ್ನಿಚರ್ ಕ್ಲಸ್ಟರ್ ಆರಂಭಿಸಬಹುದಾಗಿದೆ. ಇದರಿಂದ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗವಕಾಶಗಳು ದೊರಯಲಿವೆ. ಆದುದರಿಂದ ಇದಕ್ಕೆ ಅಗತ್ಯ ಪ್ರಮಾಣದ ಭೂಮಿಯನ್ನು ಗುರುತಿಸಿ ಸರಕಾರಕ್ಕೆ ಪ್ರಸ್ತಾಪ ಕಳುಹಿಬೇಕು ಎಂದು ಅವರು ಹೇಳಿದರು.
ನೇವಿ ಏರ್‌ಪೋರ್ಟ್ ನಿರ್ಮಾಣ
ಕಾರವಾರದ 1800 ಎಕರೆ ಜಾಗದಲ್ಲಿ ನೇವಿ ಏರ್‌ಪೋರ್ಟ್ ನಿರ್ಮಾಣಕ್ಕೆ 200ಕೋಟಿ ರೂ. ಅನುದಾನ ಒದಗಿಸಲು ಸಚಿವ ಸಂಪುಟ ಅನು ಮೋದನೆ ನೀಡಿದೆ. ಅಲ್ಲಿನ ಬೇಲೆಕೇರಿ ಬಂದರನ್ನು ದೊಡ್ಡ ಪ್ರಮಾಣದಲ್ಲಿ ಅಭಿವೃಧ್ದಿ ಪಡಿಸಲು ಡಿಪಿಆರ್ ತಯಾರಿಸಲು ನಿರ್ದೇಶನ ನೀಡಲಾ ಗಿದೆ ಎಂದು ಸಚಿವರು ತಿಳಿಸಿದರು.
ರಾಜ್ಯದಲ್ಲಿ ಕೈಗಾರಿಕೆಗಳು ಒಂದೇ ಕಡೆ ಕೇಂದ್ರೀಕೃತವಾಗುವುದನ್ನು ತಪ್ಪಿಸುವ ಉದ್ದೇಶದಿಂದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಹೊರತುಪಡಿಸಿ ಇತರೆ ಟೈರ್ 1 ಮತ್ತು 2 ನಗರಗಳಲ್ಲಿ ಕೈಗಾರಿಕೆಗಳನ್ನು ಆರಂಭಿಸಲು ಅವಕಾಶ ನೀಡಿದ್ದು, ಇದರಿಂದ ಈ ನಗರಗಳಲ್ಲಿ ಉದ್ಯೋಗಾ ವಕಾಶಗಳು ಸೃಷ್ಠಿಯಾಗಲಿವೆ ಎಂದು ಅವರು ಹೇಳಿದರು.
ದೇಶದಲ್ಲಿ ಜನವರಿಯಿಂದ ಜುಲೈಯವರೆಗೆ 2.7ಲಕ್ಷ ಕೋಟಿ ರೂ. ಕೈಗಾರಿಕೆ ಹೂಡಿಕೆಗೆ ಪ್ರಸ್ತಾವ ಸಲ್ಲಿಸಲಾಗಿದ್ದು, ಇದರಲ್ಲಿ ಕರ್ನಾಟಕ ರಾಜ್ಯ 1.16ಲಕ್ಷ ಕೋಟಿ ರೂ. ಹೂಡಿಕೆಯೊಂದಿಗೆ ಉತ್ತಮ ಸಾಧನೆ ಮಾಡಿದೆ. ಹೀಗಾಗಿ ರಾಜ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ಕೈಗಾರಿಕೆಗಳು ಬರಲಿವೆ. ಕೈಗಾರಿಕಾ ನೀತಿಯಲ್ಲಿ ಹಲವು ಬದಲಾವಣೆ ಮಾಡಿ, ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ದಿಗೆ ಪೂರಕ ವಾತಾವರಣ ನಿರ್ಮಿಸಲಾಗುತ್ತದೆ ಎಂದು ಸಚಿವ ಶೆಟ್ಟರ್ ಹೇಳಿದರು.
ಸಭೆಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ರಘುಪತಿ ಭಟ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಕರಾವಳಿ ಅಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಪಂ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜು ನಾಥ್, ಉಡುಪಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯ್ಯಕ್ಷ ರಾಘವೇಂದ್ರ ಕಿಣಿ, ಜಿಲ್ಲಾಧಿಕಾರಿ ಜಿ.ಜಗದೀಶ್, ಕೆಐಎಡಿಬಿಯ ಸಿಇಓ ಶಿವಶಂಕರ್ ಮೊದಲಾದ ವರು ಉಪಸ್ಥಿತರಿದ್ದರು.
ಕೈಗಾರಿಕಾ ಭೂಮಿ ಪರಿಶೀಲನೆಗೆ ತಜ್ಞರ ತಂಡ ರಚನೆ
ಉಡುಪಿ ಜಿಲ್ಲೆಯ ನಂದಿಕೂರಿನಲ್ಲಿರುವ ಸುಝ್ಲನ್ ಕಂಪೆನಿಯು ರೈತರಿಂದ ಕಡಿಮೆ ದರಕ್ಕೆ ಪಡೆದುಕೊಂಡ ಭೂಮಿಯನ್ನು ಈಗ ರಿಯಲ್ ಎಸ್ಟೇಟ್ ಉದ್ದೇಶಕ್ಕೆ ಬಳಕೆ ಮಾಡುತ್ತಿದೆ. ಅದೇ ರೀತಿ ಸುಝ್ಲಿನ್ ಮತ್ತು ಯುಪಿಸಿಎಲ್ ಸ್ಥಳೀಯರಿಗೆ ಉದ್ಯೋಗಾವಕಾಶ ನೀಡುತ್ತಿಲ್ಲ. ಇದ್ದವರನ್ನು ಕೂಡ ಕೆಲಸದಿಂದ ತೆಗೆದುಹಾಕುತ್ತಿವೆ ಎಂದು ಶಾಸಕ ಕೆ.ರಘುಪತಿ ಭಟ್ ಹಾಗೂ ಕರಾವಳಿ ಅಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಆರೋಪಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಯುಪಿಸಿಎಲ್‌ನ ಕಿಶೋರ್ ಆಳ್ವ, ನಮ್ಮಲ್ಲಿ ಶೇ.69 ರಷ್ಟು ಸ್ಥಳೀಯರಿಗೆ ಉದ್ಯೋಗ ನೀಡಿದ್ದೇವೆ ಎಂದರು. ಸಚಿವ ಜಗದೀಶ್ ಶೆಟ್ಟರ್ ಮಾತನಾಡಿ, ನಂದಿಕೂರಿನ ಕೈಗಾರಿಕಾ ಪ್ರದೇಶದಲ್ಲಿ ಉದ್ದಿಮೆ ಆರಂಭಿ ಸಲು ಕೈಗಾರಿಕೆಗು ಪಡೆದಿರುವ ಭೂಮಿಯು ಸಂಪೂರ್ಣ ಬಳಕೆಯಾಗಿರುವ ಬಗ್ಗೆ ತಜ್ಞರ ತಂಡದಿಂದ ಪರಿಶೀಲಿಸಿ, ಅವರ ಮೂಲಕ ವರದಿ ಪಡೆಯ ಲಾಗುವುದು. ಕೈಗಾರಿಕೆ ಹೊರತು ಪಡಿಸಿ ಇತರ ಉದ್ದೇಶಕ್ಕೆ ಭೂಮಿಯನ್ನು ಬಳಕೆ ಮಾಡದೆ ವಾಪಾಸ್ಸು ಕೆಎಐಡಿಬಿಗೆ ನೀಡಬೇಕು. ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗ ವಕಾಶ ನೀಡಬೇಕು ಎಂದರು.







