ಅರ್ನಬ್ ಬಂಧನ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಶಾಸಕ, ಇತರ ಮೂವರ ಬಂಧನ

ಮುಂಬೈ: ಅಧಿಕಾರಿಗಳಿಂದ ಯಾವುದೇ ಅನುಮತಿ ಪಡೆಯದೇ ದಕ್ಷಿಣ ಮುಂಬೈನಲ್ಲಿರುವ ರಾಜ್ಯ ಸಚಿವಾಲಯದ (ಮಂತ್ರಾಲಯ) ಹೊರಗೆ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಬಂಧನ ಖಂಡಿಸಿ ಶುಕ್ರವಾರ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಶಾಸಕ ರಾಮ್ ಕದಮ್ ಹಾಗೂ ಇತರ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
“ಅನುಮತಿ ಇಲ್ಲದೆ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಶಾಸಕ ರಾಮ್ ಕದಮ್ ಹಾಗೂ ಇತರ ಮೂವರನ್ನು ಬಂಧಿಸಲಾಗಿದೆ. ಬಂಧನದ ಬಳಿಕ ನಾಲ್ವರನ್ನು ಮರಿನ್ ಡ್ರೈವ್ ಪೊಲೀಸ್ ಠಾಣೆಗೆ ಕರೆ ತರಲಾಯಿತು. ನಂತರ ಬಿಡುಗಡೆ ಮಾಡಲಾಗಿದೆ ಎಂದು ವಲಯ-1ರ ಉಪಪೊಲೀಸ್ ಆಯುಕ್ತ ಶಶಿಕುಮಾರ್ ಮೀನಾ ಹೇಳಿದ್ದಾರೆ.
47ರ ವಯಸ್ಸಿನ ಟಿವಿ ಪತ್ರಕರ್ತನನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು. ಇದೀಗ ಗೋಸ್ವಾಮಿ ನವೆಂಬರ್ 18ರ ತನಕ ನ್ಯಾಯಾಂಗ ಕಸ್ಟಡಿಯಲ್ಲಿದ್ದಾರೆ.
Next Story





