Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು : ‘ಹುಂಡೈ ಐ20’ ಕಾರು...

ಮಂಗಳೂರು : ‘ಹುಂಡೈ ಐ20’ ಕಾರು ಮಾರುಕಟ್ಟೆಗೆ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ6 Nov 2020 9:08 PM IST
share
ಮಂಗಳೂರು : ‘ಹುಂಡೈ ಐ20’ ಕಾರು ಮಾರುಕಟ್ಟೆಗೆ ಬಿಡುಗಡೆ

ಮಂಗಳೂರು, ನ. 6: ವಿನೂತನ ಹಾಗೂ ಅತ್ಯಂತ ಹೆಚ್ಚು ಆಕರ್ಷಕ ಮಾದರಿಯ ಹುಂಡೈ ಐ 20 ಕಾರು ನಗರದ ಪಡೀಲ್‌ನ ಕಾಂಚನ ಹುಂಡೈ ಶೋರೂಂನಲ್ಲಿ ಶುಕ್ರವಾರ ಮಾರುಕಟ್ಟೆಗೆ ಬಿಡುಗಡೆಗೊಂಡಿತು.

ಐಸಿಎಐ ಮಂಗಳೂರು ಚೇರ್‌ಮೆನ್ ಸಿಎ ಎಸ್.ಎಸ್. ನಾಯಕ್ ನೂತನ ಹುಂಡೈ ಕಾರನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಕಾರುಗಳ ವಲಯದಲ್ಲಿ ಐ20 ಎನ್ನುವುದು ಐಕಾನ್ ಇದ್ದಂತೆ. ಅದೇ ಕಾರು ಇದೀಗ ಹೊಸತನಗಳೊಂದಿಗೆ ಮಾರುಕಟ್ಟೆಗೆ ಮತ್ತೆ ಪರಿಚಿತವಾಗುತ್ತಿರುವುದು ಸಂತೋಷದಾಯಕ. ಹುಂಡೈ ಬ್ರಾಂಡ್ ಹಾಗೂ ಪ್ರಸಾದ್‌ ರಾಜ್ ಕಾಂಚನ್ ಅವರ ನೇತೃತ್ವದ ಕಾಂಚನ ಸಂಸ್ಥೆ ಕರಾವಳಿಯ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ ಎಂದರು.

ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಐಸಾಕ್ ‌ವಾಜ್ ಮಾತನಾಡಿ, ಹುಂಡೈ ಐ 20 ಕಾರು ನಾವೀನ್ಯತೆಯೊಂದಿಗೆ ಮಾರುಕಟ್ಟೆಗೆ ಪರಿಚಿತಗೊಂಡಿರುವುದು ಶ್ಲಾಘನೀಯ. ಆಕರ್ಷಕ ವಿನ್ಯಾಸದೊಂದಿಗೆ ಬಂದಿರುವ ನೂತನ ಐ20ಯು ಕಾರು ಪ್ರಿಯರ ಮನಗೆಲ್ಲುವಲ್ಲಿ ಯಶಸ್ಸು ಕಾಣಲಿದೆ ಎಂದರು.

ಕಾಂಚನ ಹುಂಡೈ ಸಂಸ್ಥೆಯ ಆಡಳಿತ ನಿರ್ದೇಶಕ ಪ್ರಸಾದ್‌ರಾಜ್ ಕಾಂಚನ್ ಮಾತನಾಡಿ, ಮಂಗಳೂರು ಮಾರುಕಟ್ಟೆಯಲ್ಲಿ ಹುಂಡೈ ಐ20 ಕಾರು ಈಗಾಗಲೇ ಮಾರಾಟದಲ್ಲಿ ದಾಖಲೆಯನ್ನು ಕಂಡಿದೆ. ಗ್ರಾಹಕರ ಪ್ರೀತಿಗೆ ಪಾತ್ರವಾದ ಈ ಕಾರು 5000 ಕ್ಕೂ ಅಧಿಕ ಮಾರಾಟವಾಗಿದೆ. ಇದೀಗ ಕಾರು ಹೊಸತನದೊಂದಿಗೆ ಮಾರುಕಟ್ಟೆಗೆ ಪರಿಚಿತವಾಗಿದ್ದು, ಗ್ರಾಹಕರು ದಾಖಲೆಯ ಸಂಖ್ಯೆಯಲ್ಲಿ ಬುಕ್ಕಿಂಗ್ ಕೂಡ ಆರಂಭಿಸಿದ್ದಾರೆ ಎಂದರು.

ಕಾಂಚನ ಸಂಸ್ಥೆಯು ಕಳೆದ 15 ವರ್ಷಗಳಿಂದ ಗ್ರಾಹಕರ ಪ್ರೀತಿ ಗಳಿಸಿಕೊಂಡು ಬಂದಿದ್ದು, ಸಂಸ್ಥೆಯ ಕಾರು ಮಾರಾಟ ಪ್ರಮಾಣವೂ ಏರಿಕೆ ಯನ್ನು ದಾಖಲಿಸಿದೆ. ಕಳೆದ ತಿಂಗಳು ಸಂಸ್ಥೆಯು ದಾಖಲೆಯ 300 ಕಾರು ಮಾರಾಟ ಮಾಡಿದೆ. 1000 ಉದ್ಯೋಗಿಗಳೊಂದಿಗೆ ಸಂಸ್ಥೆಯು ಗ್ರಾಹಕರಿಗೆ ಅತ್ಯುತ್ತಮ ಸೇವೆ ಕಲ್ಪಿಸಿದೆ ಎಂದರು.

ನೂತನ ಕಾರು ಖರೀದಿ ಮಾಡಿದ ಮೊದಲ ಮೂವರು ಗ್ರಾಹಕರಿಗೆ ಕೀಲಿಕೈ ಹಸ್ತಾಂತರಿಸಲಾಯಿತು. ಉದ್ಯಮಿ ಯೋಗೀಶ್ ಪೈ, ಕಾಂಚನ ಹ್ಯುಂಡೈ ಸಂಸ್ಥೆಯ ಸೇಲ್ಸ್ ಮ್ಯಾನೇಜರ್ ಗಣಪತಿ, ಜನರಲ್ ಮ್ಯಾನೇಜರ್ ಪ್ರತೀಕ್ ಕಾಮತ್, ಪ್ರಮುಖರಾದ ಸುದರ್ಶನ್, ರಾಜೇಶ್ ಅಂಚನ್, ಫಾರ್‌ವಿಂಡ್ಸ್ ಮಾಸ್ ಕಮ್ಯುನಿಕೇಶನ್ ಸಂಸ್ಥೆಯ ನಿರ್ದೇಶಕ ಇ. ಫೆರ್ನಾಂಡೀಸ್ ಉಪಸ್ಥಿತರಿದ್ದರು. ವಿಲ್ಫ್ರೆಡ್ ಆಲ್ವರೀಸ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X