ಕ್ರಿಕೆಟ್ ಬೆಟ್ಟಿಂಗ್ ಆರೋಪ: ಇಬ್ಬರ ಬಂಧನ, 2 ಲಕ್ಷ ರೂ. ನಗದು ವಶ

ಬೆಂಗಳೂರು, ನ.6: ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ 2 ಲಕ್ಷ ರೂ. ನಗದು ವಶಪಡಿಸಿಕೊಂಡಿದ್ದಾರೆ.
ಬಸವನಗುಡಿಯ ದುಂಗರ್ ಚಂದ್ ಜೈನ್(49), ನಗರತ್ ಪೇಟೆಯ ಕಿರಣ್ ಜೈನ್(24) ಬಂಧಿತ ಆರೋಪಿಗಳು.
ಐಪಿಎಲ್ ಕ್ರಿಕೆಟ್ ಪಂದ್ಯಾವಳಿಗೆ ಸಂಬಂಧಿಸಿದಂತೆ ಗುರುವಾರ ನಡೆದ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವೆ ನಡೆದ ಪಂದ್ಯದ ಗೆಲುವು, ಸೋಲಿನ ಬಗ್ಗೆ ಸಾರ್ವಜನಿಕರಿಂದ ಮೊಬೈಲ್ ಆಪ್ ಮೂಲಕ ಹಣ ಕಟ್ಟಿಸಿಕೊಂಡು ಜೂಜಾಟ ಆಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ಆರೋಪಿಗಳು ಜೂಜಾಡುತ್ತಿದ್ದ ವೇಳೆ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರಿಂದ 2 ಲಕ್ಷ ರೂ. ನಗದು, 2 ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





