Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಶಿವಾನಂದ ಉಕ್ಕಿನ ಸೇತುವೆ ಕಾಮಗಾರಿ ಶೀಘ್ರ...

ಶಿವಾನಂದ ಉಕ್ಕಿನ ಸೇತುವೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಆಗ್ರಹಿಸಿ ಧರಣಿ

ವಾರ್ತಾಭಾರತಿವಾರ್ತಾಭಾರತಿ6 Nov 2020 10:13 PM IST
share
ಶಿವಾನಂದ ಉಕ್ಕಿನ ಸೇತುವೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಆಗ್ರಹಿಸಿ ಧರಣಿ

ಬೆಂಗಳೂರು, ನ.6: ನಗರದ ಶಿವಾನಂದ ವೃತ್ತ ಉಕ್ಕಿನ ಸೇತುವೆ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿ ಆಮ್‍ಆದ್ಮಿ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಶಿವಾನಂದ ವೃತ್ತದ ಬಳಿ ಪ್ರತಿಭಟನೆ ನಡೆಸಿದ ನೂರಾರು ಕಾರ್ಯಕರ್ತರು, ಯೋಜನೆ ಕಾರ್ಯಾರಂಭ ಮಾಡಿ ಅದನ್ನು ಕಾಲಾವಧಿಯೊಳಗೆ ಮುಗಿಸದೇ ಪ್ರತಿ ವರ್ಷ ಯೋಜನಾ ವೆಚ್ಚವನ್ನು ಹೆಚ್ಚಳ ಮಾಡಿಕೊಂಡು, ಜನರ ತೆರಿಗೆ ಹಣ ನುಂಗುವುದನ್ನೇ ಅಭ್ಯಾಸ ಮಾಡಿಕೊಂಡಿರುವುದಕ್ಕೆ ತಾಜಾ ಉದಾಹರಣೆ ಈ ಯೋಜನೆಯಾಗಿದೆ ಎಂದು ಪ್ರತಿಭಟನಾಕಾರರು ಆಪಾದಿಸಿದರು.

ಈ ವೇಳೆ ಮಾತನಾಡಿದ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ, ಸುಮಾರು 3 ವರ್ಷಗಳ ಹಿಂದೆ ಕಾರ್ಯಾದೇಶವಾದಾಗಿನಿಂದ ಕೇವಲ ಶೇ 40 ರಷ್ಟು ಕಾಮಗಾರಿ ಪೂರ್ಣಗೊಂಡಿರುವುದನ್ನು ನೋಡಿದರೆ ಬಿಬಿಎಂಪಿಯ ಆಡಳಿತ ವೈಖರಿಗೆ ಕನ್ನಡಿಯಾಗಿದೆ ಎಂದರು.

ಈ ಕಾಮಗಾರಿಯ ಅವಧಿ 18 ತಿಂಗಳಲ್ಲಿ ಮುಗಿಸಬೇಕಿತ್ತು, ಈಗಾಗಲೇ 27 ತಿಂಗಳುಗಳು ಕಳೆದಿವೆ. 2020 ಮುಗಿಯುತ್ತಾ ಬಂದರೂ ಅದರ ಸುಳಿವಿಲ್ಲ. ಈ ಉಕ್ಕಿನ ಸೇತುವೆಯನ್ನು ಪ್ರಾರಂಭಿಸುವಾಗ ಅಂದಾಜು ಮಾಡಿದ್ದ ಯೋಜನಾ ವೆಚ್ಚ 19 ಕೋಟಿ. ಈಗಾಗಲೇ ಎರಡು ಬಾರಿ ಯೋಜನಾ ವೆಚ್ಚವನ್ನು ಹೆಚ್ಚಳ ಮಾಡಿದ್ದು 60 ಕೋಟಿಗೆ ಮುಟ್ಟಿದೆ. ಇದೇ ರೀತಿ ಎಲ್ಲಾ ಕಾಮಗಾರಿಗಳನ್ನು ಕಾಲಾವಧಿಯಲ್ಲಿ ಮುಗಿಸದೆ ಯೋಜನಾ ವೆಚ್ಚವನ್ನು ಹೆಚ್ಚಳ ಮಾಡಿ ಕೊಳ್ಳೆ ಹೊಡೆಯಲಾಗುತ್ತಿದೆ ಎಂದು ಆರೋಪಿಸಿದರು.

ಮೊದಲು ಮೇಲ್ಸೇತುವೆ ಉದ್ದವನ್ನು 326 ಮೀ.ಗೆ ನಿಗದಿ ಮಾಡಲಾಗಿತ್ತು. ಕಾಮಗಾರಿ ಆರಂಭವಾಗಿ ಒಂದೂವರೆ ವರ್ಷದ ನಂತರ ರೇಸ್‍ಕೋರ್ಸ್ ರಸ್ತೆ ದಿಕ್ಕಿಗೆ ಮೇಲ್ಸೇತುವೆ ಉದ್ದವನ್ನು 493 ಮೀ.ಗೆ ಏರಿಕೆ ಮಾಡಿದ್ದು ಎಂಬುದು ಏಕೆ ಎಂದು ಅಧಿಕಾರಿಗಳು ಉತ್ತರಿಸಬೇಕು ಎಂದು ಆಗ್ರಹಿಸಿದರು.

ಸಂಚಾರ ದಟ್ಟಣೆಯಿಂದ ಕಿರಿಕಿರಿ ಅನುಭವಿಸುತ್ತಿರುವ ಜನರಿಗೆ ಉತ್ತಮ ಸೌಕರ್ಯ ಒದಗಿಸುತ್ತೇವೆ ಎಂದು ಆರಂಭಿಸುವ ಕಾಮಗಾರಿಗಳನ್ನು ಗುತ್ತಿಗೆದಾರರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಮುಂದೂಡಿ ಯೋಜನಾ ವೆಚ್ಚವನ್ನು ಹೆಚ್ಚಳ ಮಾಡಿ, ಹಣ ನುಂಗುವ ಹುನ್ನಾರವಾಗಿದೆ. ಈ ಕೂಡಲೇ ಈ ಕಾಮಗಾರಿಯನ್ನು ಶೀಘ್ರವಾಗಿ ಮುಗಿಸಬೇಕು ಎಂದು ಒತ್ತಾಯಿಸಿದರು.

ಪ್ರಸ್ತುತ ಮುಗಿದಿರುವ ಕಾಮಗಾರಿಯ ಗುಣಮಟ್ಟ ಸಹ ಕಳಪೆ ಆಗಿದ್ದು ಈಗಾಗಲೇ ಹಾಕಿರುವ ಉಕ್ಕಿನ ಕಂಬಗಳ ಸಾಮರ್ಥ್ಯವೂ ಸಹ ಅನುಮಾನಸ್ಪದವಾಗಿದ್ದು ಅರ್ಧ ಕಾಮಗಾರಿ ಮುಗಿಸಿ ನಿಲ್ಲಿಸಿರುವ ಕಂಬಗಳು ತುಕ್ಕು ಹಿಡಿದಿವೆ. ಬಿಬಿಎಂಪಿ ಹಾಗೂ ರಾಜ್ಯ ಸರಕಾರ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಬಾಕಿ ಉಳಿಸಿಕೊಂಡಿರುವ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸದಿದ್ದರೆ ಎಲ್ಲಾ ಅಪೂರ್ಣ ಕಾಮಗಾರಿಗಳ ಎದುರು ಸರಣಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X