ಮೈಸೂರು: ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು ಹಾನಿಗೊಳಿಸಿದ ಕಿಡಿಗೇಡಿಗಳು

ಮೈಸೂರು,ನ.6: ನಗರದ ಸುಬ್ಬರಾಯನಕೆರೆಯ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಯನ್ನು ಕಿಡಿಗೇಡಿಗಳು ಭಗ್ನಗೊಳಿಸಿರುವ ಘಟನೆ ನಡೆದಿದೆ.
ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನದಲ್ಲಿ ದಂಡಿಯಾತ್ರೆ ಪ್ರತಿಮೆಯಲ್ಲಿರುವ ಗಾಂಧೀಜಿ ಕೈಯಲ್ಲಿ ಹಿಡಿದಿರುವ ಕೋಲು ಮತ್ತು ಎಡಗೈಯನ್ನು ಕಿಡಿಗೇಡಿಗಳು ಭಗ್ನಗೊಳಸಿದ್ದಾರೆ. ಮಾದಕ ವ್ಯಸನಿಗಳಿಂದ ಈ ಕೃತ್ಯ ನಡೆದಿರುವ ಬಗ್ಗೆ ಸ್ಥಳೀಯರು ಆರೋಪಿಸಿದ್ದು, ಘಟನೆಯನ್ನು ಖಂಡಿಸಿ ಸ್ಥಳೀಯರು ಗಾಂಧಿ ಪ್ರತಿಮೆ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿದರು.
Next Story





