Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುಪ್ರೀಂಕೋರ್ಟ್ ಒಪ್ಪಿದರೆ ಹೊಸದಾಗಿ...

ಸುಪ್ರೀಂಕೋರ್ಟ್ ಒಪ್ಪಿದರೆ ಹೊಸದಾಗಿ ಎನ್‌ಆರ್‌ಸಿ ಆರಂಭ: ಅಸ್ಸಾಂ ಸಚಿವ

ವಾರ್ತಾಭಾರತಿವಾರ್ತಾಭಾರತಿ6 Nov 2020 11:38 PM IST
share
ಸುಪ್ರೀಂಕೋರ್ಟ್ ಒಪ್ಪಿದರೆ ಹೊಸದಾಗಿ ಎನ್‌ಆರ್‌ಸಿ ಆರಂಭ: ಅಸ್ಸಾಂ ಸಚಿವ

ಗುವಾಹಟಿ, ನ.6: ಕಳೆದ ವರ್ಷದ ಆಗಸ್ಟ್‌ನಲ್ಲಿ ಬಿಡುಗಡೆಯಾಗಿರುವ ನ್ಯಾಷನಲ್ ರಿಜಿಸ್ಟರ್ ಆಫ್ ಸಿಟಿಜನ್(ಎನ್‌ಆರ್‌ಸಿ) ಮೂಲತಃ ತಪ್ಪಾಗಿದ್ದು, ಸುಪ್ರೀಂಕೋರ್ಟ್ ಅನುಮತಿ ನೀಡಿದರೆ ವಿಧಾನಸಭೆ ಚುನಾವಣೆಯ ಬಳಿಕ ಹೊಸ ಉಪಕ್ರಮ ನಡೆಸಲಾಗುವುದು ಎಂದು ಅಸ್ಸಾಂ ಸಚಿವ ಹಿಮಂತ ಬಿಸ್ವ ಶರ್ಮ ಹೇಳಿರುವುದಾಗಿ ಸುದ್ಧಿಸಂಸ್ಥೆ ವರದಿ ಮಾಡಿದೆ.

‘ಆಧುನಿಕ ಮುಘಲರು’ ಅಸ್ಸಾಂನೆಲ್ಲೆಡೆ ಪ್ರವೇಶಿಸಿದ್ದಾರೆ. ಇದನ್ನು ತಡೆಯಲು ಸುದೀರ್ಘ ರಾಜಕೀಯ ಹೋರಾಟದ ಅಗತ್ಯವಿದೆ. ಅಸ್ಸಾಂನಿಂದ ಆಧುನಿಕ ಮುಘಲರನ್ನು ಹೊರ ಹಾಕಲು ಕನಿಷ್ಠ 5 ವರ್ಷದ ರಾಜಕೀಯ ಹೋರಾಟ ನಡೆಸಬೇಕಾಗಿದೆ . ಎನ್‌ಆರ್‌ಸಿಯ ಮಾಜಿ ರಾಜ್ಯ ಸಂಯೋಜಕ ಪ್ರತೀಕ್ ಹಜೇಲ ಎನ್‌ಆರ್‌ಸಿಯಲ್ಲಿ ತಪ್ಪು ನುಸುಳಲು ಮೂಲ ಕಾರಣ. ಎನ್‌ಆರ್‌ಸಿಯ ಶೇ 15ರಷ್ಟು ಪರಿಷ್ಕರಣೆಗೆ ನ್ಯಾಯಾಲಯದ ಅನುಮತಿ ಕೋರುತ್ತೇವೆ ಎಂದವರು ಹೇಳಿದ್ದಾರೆ.

ಹಜೇಲ ಸಿದ್ಧಪಡಿಸಿರುವ ಎನ್‌ಆರ್‌ಸಿಯಲ್ಲಿ ಆರ್ಥಿಕ ಅಸಂಗತತೆಯ ಬಗ್ಗೆ ಲೆಕ್ಕ ಪರಿಶೋಧಕರು ಆಕ್ಷೇಪ ಎತ್ತಿದ್ದಾರೆ. ಅವರ ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸಲಾಗುವುದು. ಧುಬ್ರಿ, ಬರ್ಪೇಟ ಮುಂತಾದ ಕೆಲವು ಜಿಲ್ಲೆಗಳಲ್ಲಿ ಜನರು ತಮ್ಮದೇ ಆದ ಎನ್‌ಆರ್‌ಸಿ ರಚಿಸಿಕೊಂಡಿರುವುದರಿಂದ ದತ್ತಸಂಚಯದಲ್ಲೇ ತಪ್ಪಾಗಿದೆ. ಸುಪ್ರೀಂಕೋರ್ಟ್‌ನ ಮೇಲ್ವಿಚಾರಣೆಯಲ್ಲಿ ಎನ್‌ಆರ್‌ಸಿ ಪ್ರಕ್ರಿಯೆ ನಡೆದಿದ್ದರೂ ಹಜೇಲ ಇದರ ಕೆಲವು ಅಂಶಗಳನ್ನು ತಿರುಚಿದ್ದು ಈಗ ಕಳ್ಳರು ಪೊಲೀಸ್ ಆದಂತಾಗಿದೆ ಎಂದು ಹಿಮಂತ ಬಿಸ್ವ ಶರ್ಮ ಹೇಳಿರುವುದಾಗಿ ವರದಿ ತಿಳಿಸಿದೆ.

ಕಳೆದ ವರ್ಷದ ಆಗಸ್ಟ್ 31ರಂದು ಪ್ರಕಟವಾದ ಎನ್‌ಆರ್‌ಸಿ ಅಂತಿಮ ಪಟ್ಟಿಯಿಂದ 19 ಲಕ್ಷಕ್ಕೂ ಅಧಿಕ ಜನರ ಹೆಸರನ್ನು ಕೈಬಿಡಲಾಗಿದೆ. ಇದನ್ನು ಪ್ರಶ್ನಿಸಿ ಹಲವು ಮಂದಿ ಮೇಲ್ಮನವಿ ಸಲ್ಲಿಸಿದ್ದಾರೆ. ಎನ್‌ಆರ್‌ಸಿಯಲ್ಲಿ ಅಕ್ರಮವಾಗಿ ಸೇರ್ಪಡೆಯಾಗಿರುವ ಹೆಸರನ್ನು ಅಳಿಸಿ ಹಾಕುವಂತೆ ಕಳೆದ ತಿಂಗಳು ಅಸ್ಸಾಂ ಎನ್‌ಆರ್‌ಸಿ ಸಂಯೋಜಕರು ಎಲ್ಲಾ ಜಿಲ್ಲಾಧಿಕಾರಿಗಳಿಗೂ ಸೂಚಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X