Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆನ್-ಲೈನ್ ಶಿಕ್ಷಣ ದೂರು: ಕಟ್ಟುನಿಟ್ಟಿನ...

ಆನ್-ಲೈನ್ ಶಿಕ್ಷಣ ದೂರು: ಕಟ್ಟುನಿಟ್ಟಿನ ಅನುಪಾಲನೆಗೆ ಸುರೇಶ್ ಕುಮಾರ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ6 Nov 2020 11:54 PM IST
share
ಆನ್-ಲೈನ್ ಶಿಕ್ಷಣ ದೂರು: ಕಟ್ಟುನಿಟ್ಟಿನ ಅನುಪಾಲನೆಗೆ ಸುರೇಶ್ ಕುಮಾರ್ ಸೂಚನೆ

ಬೆಂಗಳೂರು, ನ.6: ಆನ್-ಲೈನ್ ಶಿಕ್ಷಣ ನಿರ್ವಹಣೆಗೆ ಸಂಬಂಧಿಸಿದಂತೆ ಪೋಷಕರ-ಸಾರ್ವಜನಿಕರ ಯಾವುದೇ ದೂರುಗಳಿದ್ದರೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣವಾಣಿ- ಸಾರ್ವಜನಿಕ ಸಹಾಯವಾಣಿಗೆ ಫೋನ್ ಕರೆ ಮೂಲಕ ದಾಖಲಿಸಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಶುಕ್ರವಾರ ನಗರದಲ್ಲಿನ ಸಮಗ್ರ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಆನ್-ಲೈನ್ ಶಿಕ್ಷಣ ಕುರಿತಂತೆ ಹೊರಡಿಸಲಾದ ಸೂಚನೆಗಳನ್ವಯ ಸೂಕ್ತ ಅನುಪಾಲನಾ ವ್ಯವಸ್ಥೆ ಜಾರಿಯಲ್ಲಿಡುವ ಕುರಿತು ಮತ್ತು ಈ ಸುತ್ತೋಲೆಗಳ ಅನುಷ್ಠಾನದಲ್ಲಿ ಇಲಾಖೆ ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಿ ಅವರು ಮಾತನಾಡಿದರು.

ಸಾರ್ವಜನಿಕರು ಆನ್‍ಲೈನ್ ಕುರಿತ ದೂರುಗಳನ್ನು ಶಿಕ್ಷಣವಾಣಿ-ಸಹಾಯವಾಣಿಗೆ (18004257302) ಇಲ್ಲವೇ ಸಹಾಯವಾಣಿ ವಾಟ್ಸ್-ಆಪ್ ಸಂಖ್ಯೆ-9483045130) ಸಲ್ಲಿಸಿ ಇಲಾಖೆಯ ಗಮನಕ್ಕೆ ತರುವ ಮೂಲಕ ಸಹಾಯವಾಣಿಯ ಉಪಯೋಗ ಪಡೆದುಕೊಳ್ಳಬೇಕೆಂದು ಅವರು ಹೇಳಿದರು.

ಇಂತಹ ದೂರುಗಳನ್ನು ನಿರ್ವಹಿಸಲು ಕೂಡಲೇ ಆಯುಕ್ತರ ಕಚೇರಿ ಮತ್ತು ಜಿಲ್ಲಾ ಮಟ್ಟದಲ್ಲಿ ಉಪನಿರ್ದೇಶಕರ ಹಂತದಲ್ಲಿ ಒಬ್ಬೊಬ್ಬ ನೋಡಲ್ ಅಧಿಕಾರಿಯನ್ನು ನೇಮಿಸಬೇಕು. ಬೆಂಗಳೂರು, ಕಲ್ಬುರ್ಗಿ, ಬೆಳಗಾವಿ, ಮಂಗಳೂರು, ಹುಬ್ಬಳ್ಳಿ_ಧಾರವಾಡ ಸೇರಿದಂತೆ ಹಲವು ನಗರ ಕೇಂದ್ರಿತ ಪ್ರದೇಶಗಳಲ್ಲಿ ಇಂತಹ ದೂರುಗಳು ಹೆಚ್ಚಾಗಿರುವುದರಿಂದ ಅಧಿಕಾರಿಗಳು ಆನ್-ಲೈನ್ ಶಿಕ್ಷಣದಲ್ಲಿನ ಸಮಸ್ಯೆಗಳನ್ನು ಮತ್ತು ದೂರುಗಳನ್ನು ಪರಿಶೀಲಿಸಿ ಸಾರ್ವಜನಿಕರಿಗೆ ಪರಿಹಾರ ಸೂಚಿಸುವ ನಿಟ್ಟಿನಲ್ಲಿ ಶನಿವಾರ ನಗರಗಳ ಅಧಿಕಾರಿಗಳ ಸಭೆ ನಡೆಸಿ ಅಗತ್ಯ ಸಲಹೆ-ಸೂಚನೆಗಳನ್ನು ನೀಡಬೇಕೆಂದು ಇಲಾಖೆಯ ಆಯುಕ್ತರಿಗೆ ಸುರೇಶ್ ಕುಮಾರ್ ಸೂಚಿಸಿದರು.

ಯಾವುದೇ ಶಾಲೆಗಳಿರಲಿ ಆನ್-ಲೈನ್ ಶಿಕ್ಷಣವನ್ನು ತಜ್ಞರ ಸಮಿತಿ ಶಿಫಾರಸಿನನ್ವಯ ಇಲಾಖೆ ಹೊರಡಿಸಿರುವ ಸುತ್ತೋಲೆಗಳನ್ವಯ ವೈಜ್ಞಾನಿಕವಾಗಿಯೇ ನಿರ್ವಹಿಸುವ ಕುರಿತು ಅಗತ್ಯ ಅನುಪಾಲನಾ ವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ನಿರ್ವಹಿಸಬೇಕು. ಬಿಇಒಗಳು ಆನ್-ಲೈನ್ ತರಗತಿಗಳ ಪರಾಮರ್ಶೆ ಮಾಡುವದರೊಂದಿಗೆ ಕೇಂದ್ರ ಕಚೇರಿಯಲ್ಲಿ ಈ ಕುರಿತ ಮಾಹಿತಿ ಯಾವುದೇ ಸಂದರ್ಭದಲ್ಲಿಯೂ ದೊರೆಯವಂತಾಗಬೇಕು. ಈ ಬಗ್ಗೆ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಬೇಕೆಂದೂ ಅವರು ನಿರ್ದೇಶನ ನೀಡಿದರು.

ಆನ್-ಲೈನ್ ಶಾಲಾವಧಿ ನಿಗದಿಗೆ ಸೂಚನೆ: ಆನ್-ಲೈನ್ ಬೋಧನೆಯನ್ನು ಹಗಲು-ರಾತ್ರಿಯನ್ನದೇ ಯಾವುದೇ ಸಮಯದಲ್ಲೂ ಮಾಡಲಾಗುತ್ತಿದ್ದು, ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಉಂಟಾಗುತ್ತದೆ ಎನ್ನುವ ದೂರುಗಳ ಹಿನ್ನೆಲೆಯಲ್ಲಿ ಆನ್-ಲೈನ್ ಬೋಧನೆಗೆ ತರಗತಿಗಳ ಅವಧಿಯನ್ನು ನಿಗದಿಪಡಿಸಿದಂತೆ ಆನ್‍ಲೈನ್ ಬೋಧನಾ ಶಾಲಾವಧಿಯನ್ನು ನಿಗದಿಪಡಿಸಿ ಮಕ್ಕಳ ಆರೋಗ್ಯದ ಮೇಲೆ ಪರಿಣಾಮವಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಸುರೇಶ್ ಕುಮಾರ್ ಸೂಚಿಸಿದರು.

ಈ ಕುರಿತಂತೆ ಜಿಲ್ಲೆ, ತಾಲೂಕು, ಬಿಆರ್‍ಸಿ, ಸಿಆರ್‍ಪಿ ಮಟ್ಟದಲ್ಲಿ ಶಾಲಾವಧಿಯನ್ನು ಗಮನಿಸಲು ಅಗತ್ಯ ಕ್ರಮ ವಹಿಸಬೇಕು. ಹಾಗೆಯೇ ಈ ಕುರಿತ ಸಮಸ್ಯೆಗಳಿದ್ದಲ್ಲಿ ಶಿಕ್ಷಣವಾಣಿ ಸಹಾಯವಾಣಿಗೆ ದೂರುಗಳನ್ನು ಸಲ್ಲಿಸುವ ವ್ಯವಸ್ಥೆ ಮಾಡಬೇಕೆಂದು ಸುರೇಶ್ ಕುಮಾರ್ ಹೇಳಿದರು.

ಯಾವುದೇ ಶಾಲೆಗಳಿರಲಿ ತಮಗೆ ತೋಚಿದ ಅವಧಿಯಲ್ಲಿ ತಮಗೆ ತಿಳಿದಷ್ಟು ಸಮಯ ಆನ್-ಲೈನ್ ಪಾಠ ಮಾಡಲು ಅವಕಾಶ ನೀಡಲಾಗದು. ತಜ್ಞರ ಸಮಿತಿ ನಿಗದಿಪಡಿಸಿರುವ ಸಮಯದಷ್ಟೇ ಅವಧಿಯಲ್ಲಿ ನಿರ್ವಹಿಸಬೇಕು. ಹಾಗೆಯೇ ಆನ್‍ಲೈನ್ ಶಾಲಾವಧಿಯನ್ನು ನಿಗದಿಪಡಿಸಿ ಸುತ್ತೋಲೆ ಹೊರಡಿಸಿ ಈ ಕುರಿತು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಬೇಕೆಂದು ಆಯುಕ್ತರಿಗೆ ಅವರು ನಿರ್ದೇಶನ ನೀಡಿದರು.

ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ ತಜ್ಞರ ವರದಿ ಸಲ್ಲಿಕೆ: ಕೇಂದ್ರದ ನೂತನ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸುವಲ್ಲಿ ಕರ್ನಾಟಕ ಇಡೀ ರಾಷ್ಟ್ರದಲ್ಲಿ ಮೊದಲನೇ ರಾಜ್ಯವಾಗಲಿದ್ದು, ರಾಜ್ಯದಲ್ಲಿ ನೂತನ ಶಿಕ್ಷಣ ನೀತಿಯ ಅಳವಡಿಕೆಗೆ ಸಂಬಂಧಿಸಿದಂತೆ ನೇಮಿಸಲಾದ ತಜ್ಞರ ಸಮಿತಿ ನ.7ರಂದು ಸರಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಪರಾಹ್ನ 3 ಗಂಟೆಗೆ ನಡೆಯಲಿರುವ ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಸಮಿತಿಯ ವರದಿ ಸ್ವೀಕರಿಸಲಿದ್ದಾರೆ ಎಂದು ಅವರು ತಿಳಿಸಿದರು.

ಈ ತಜ್ಞರ ವರದಿಯ ಶಿಫಾರಸುಗಳನ್ನು ನೂತನ ಶಿಕ್ಷಣ ನೀತಿಯನ್ವಯ ಶೈಕ್ಷಣಿಕ ಕ್ಷೇತ್ರದಲ್ಲಿ ತೆಗೆದುಕೊಳ್ಳಬಹುದಾದ ನಿರ್ಣಯಗಳಲ್ಲಿ ಅಳವಡಿಸಿಕೊಳ್ಳಲಾಗುವುದು ಇದು ರಾಜ್ಯದ ಶಿಕ್ಷಣದಲ್ಲಿ ಹೊಸ ದಿಕ್ಕನ್ನು ಕಲ್ಪಿಸಲಿದೆ ಎಂದು ಸುರೇಶ್ ಕುಮಾರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X