ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಮಂಗಳೂರು, ನ.7:ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ಬಂಟ ಸಮಾಜದ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆಗೆ ಅರ್ಜಿ ಆಹ್ವಾನಿಸಲಾಗಿದೆ.
2019-20ರ ಸಾಲಿನ ಎಸೆಸೆಲ್ಸಿ ಮತ್ತು ಪಿಯುಸಿ ಪಾಸಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಶೇ.80ಕ್ಕೂ ಅಧಿಕ ಅಂಕಗಳಿಸಿದ ಬಿಪಿಎಲ್ ಕಾರ್ಡ್ ಕುಟುಂಬದ ವಿದ್ಯಾರ್ಥಿಗಳಿಗೆ ಮತ್ತು ಶೇ.95ಕ್ಕೂ ಅಧಿಕ ಅಂಕ ಗಳಿಸಿದ ಇನ್ನಿತರ ಕುಟುಂಬದ ವಿದ್ಯಾರ್ಥಿಗಳು ಅರ್ಜಿಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟ, ಬಂಟ್ಸ್ ಹಾಸ್ಟೆಲ್ ಮಂಗಳೂರು ಇಲ್ಲಿಗೆ ನ.20ರೊಳಗೆ ಕಳುಹಿಸಬಹುದಾಗಿದೆ ಎಂದು ಒಕ್ಕೂಟದ ಗೌರವ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ.
Next Story





