Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮುಂಬೈ ಕನ್ನಡ ಆಕಾಶವಾಣಿ ಕಾರ್ಯಕ್ರಮ...

ಮುಂಬೈ ಕನ್ನಡ ಆಕಾಶವಾಣಿ ಕಾರ್ಯಕ್ರಮ ಪುನಾರಂಭಿಸಲು ಸಚಿವ ಸಿ.ಟಿ. ರವಿ ಮನವಿ

ವಾರ್ತಾಭಾರತಿವಾರ್ತಾಭಾರತಿ7 Nov 2020 6:13 PM IST
share
ಮುಂಬೈ ಕನ್ನಡ ಆಕಾಶವಾಣಿ ಕಾರ್ಯಕ್ರಮ ಪುನಾರಂಭಿಸಲು ಸಚಿವ ಸಿ.ಟಿ. ರವಿ ಮನವಿ

ಬೆಂಗಳೂರು, ನ. 7: ಕಾರಣಾಂತರಗಳಿಂದ ಸ್ಥಗಿತಗೊಂಡಿರುವ ಮುಂಬೈನ ಆಕಾಶವಾಣಿಯಲ್ಲಿ ಪ್ರಸಾರವಾಗುತ್ತಿದ್ದ ಕನ್ನಡ ಕಾರ್ಯಕ್ರಮಗಳನ್ನು ತಕ್ಷಣವೇ ಪುನರಾರಂಭಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಅವರು ಮನವಿ ಮಾಡಿದ್ದಾರೆ.

ಶನಿವಾರ ಈ ಸಂಬಂಧ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್ ಹಾಗೂ ಪ್ರಸಾರ ಭಾರತಿ ಅಧ್ಯಕ್ಷರಾದ ಡಾ.ಎ.ಸೂರ್ಯ ಪ್ರಕಾಶ್ ಅವರಿಗೆ ಪ್ರತ್ಯೇಕವಾಗಿ ಪತ್ರ ಬರೆದಿರುವ ಸಚಿವ ಸಿ.ಟಿ.ರವಿ ಅವರು, ಕನ್ನಡಿಗರ ಒತ್ತಾಸೆಯಂತೆ ಮುಂಬೈನ ಆಕಾಶವಾಣಿಯಲ್ಲಿ ಕಾರ್ಯಕ್ರಮಗಳನ್ನು ಮರುಪ್ರಸಾರ ಮಾಡಬೇಕೆಂದು ಇಂದಿಲ್ಲಿ ಆಗ್ರಹಿಸಿದ್ದಾರೆ.

ಏಳು ದಶಕಗಳಿಂದ ಮುಂಬೈ ಆಕಾಶವಾಣಿಯಲ್ಲಿ ಕನ್ನಡ ಕಾರ್ಯಕ್ರಮಗಳು ಪ್ರಸಾರವಾಗುತ್ತಿದ್ದು ಸರಿಸುಮಾರು 25 ಲಕ್ಷಕ್ಕೂ ಹೆಚ್ಚು ಮಂದಿ ಕಾರ್ಯಕ್ರಮ ಆಲಿಸುತ್ತಿದ್ದರು. ಏಕಾಏಕಿ ಕಾರ್ಯಕ್ರಮವನ್ನು ರದ್ದುಪಡಿಸಿರುವುದರಿಂದ ಹಲವರಿಗೆ ಬೇಸರ ತಂದಿದೆ ಎಂದು ಸಚಿವರ ಗಮನಕ್ಕೆ ತಂದಿದ್ದಾರೆ. ದೇಶದ ಪ್ರತಿಯೊಂದು ಭಾಗದಲ್ಲಿ ಸ್ಥಳೀಯ ಜನತೆ ತಮ್ಮ ಭಾಷೆಯಲ್ಲಿ ಆಲಿಸಲು ಸಂವಿಧಾನವೇ ಅವಕಾಶ ಮಾಡಿಕೊಟ್ಟಿದ್ದು, ಇದರಿಂದ ರಾಷ್ಟ್ರದ ಏಕಾಗ್ರತೆಗೆ ಅನುಕೂಲವಾಗಲಿದೆ ಎಂದು ಹೇಳಿದೆ.

ಏಕಾಏಕಿ ಕಾರ್ಯಕ್ರಮ ಸ್ಥಗಿತವಾಗಿರುವುದರಿಂದ ಕನ್ನಡದ ಸಾಹಿತಿಗಳಾದ ಬರಗೂರು ರಾಮಚಂದ್ರಪ್ಪ ಮತ್ತಿತರರು ನನ್ನ ಗಮನಕ್ಕೆ ತಂದಿದ್ದಾರೆ. ಆಕಾಶವಾಣಿ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿರುವುದಕ್ಕೆ ಆಕ್ಷೇಪಿಸಿ ಸರಕಾರ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ ಸ್ಥಗಿತವಾಗಿರುವ ಕಾರ್ಯಕ್ರಮವನ್ನು ಪುನಾರಾರಂಭಿಸಿ ಕನ್ನಡಿಗರ ಮನವಿಯನ್ನು ಸಕಾರಾತ್ಮಕವಾಗಿ ಪರಿಗಣಿಸಬೇಕೆಂದು ಮನವಿ ಮಾಡಿದ್ದಾರೆ.

ಶೀಘ್ರದಲ್ಲೇ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಮತ್ತು ಪ್ರಸಾರ ಭಾರತಿ ಅಧ್ಯಕ್ಷ ಡಾ.ಎ.ಸೂರ್ಯಪ್ರಕಾಶ್ ಅವರನ್ನು ಭೇಟಿಯಾಗಿ ವಸ್ತುಸ್ಥಿತಿ ಮನವರಿಕೆ ಮಾಡಿ ಸ್ಥಗಿತಗೊಂಡ ಕಾರ್ಯಕ್ರಮವನ್ನು ಆರಂಭಿಸಲು ಪ್ರಯತ್ನ ಮಾಡುವ ಆಶ್ವಾಸನೆ ನೀಡಿದ್ದಾರೆ. ಹಲವಾರು ದಶಕಗಳಿಂದ ಮುಂಬೈನ ಆಕಾಶವಾಣಿಯಲ್ಲಿ ಪ್ರತಿದಿನ ಕನ್ನಡದ ಕಾರ್ಯಕ್ರಮಗಳು ಪ್ರಸಾರ ಆಗುತ್ತಿದ್ದವು. ಅಲ್ಲದೆ ಕೆಲವು ದಿನಗಳ ಹಿಂದೆ ಏಕಾಏಕಿ ಇದನ್ನು ಸ್ಥಗಿತಗೊಳಿಸಿತ್ತು. ಇದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿತ್ತು. ಇದೀಗ ಪತ್ರ ಬರೆದು ಕನ್ನಡಿಗರ ಭಾವನೆಯನ್ನು ಕೇಂದ್ರ ಸಚಿವರ ಗಮನಕ್ಕೆ ತಂದಿರುವ ಹಿನ್ನೆಲೆಯಲ್ಲಿ ಮತ್ತೆ ಕಾರ್ಯಕ್ರಮ ಪುನಾರಾರಂಭವಾಗುವ ಮುನ್ಸೂಚನೆ ಸಿಕ್ಕಿದೆ ಎಂದು ಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X