Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾಲದ ಸುಳಿಗೆ ಸಿಲುಕಿರುವ ರೈತರ...

ಸಾಲದ ಸುಳಿಗೆ ಸಿಲುಕಿರುವ ರೈತರ ಆತ್ಮಹತ್ಯೆ ತಡೆಗೆ ಸರಕಾರ ಮುಂದಾಗಬೇಕು: ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ7 Nov 2020 6:15 PM IST
share
ಸಾಲದ ಸುಳಿಗೆ ಸಿಲುಕಿರುವ ರೈತರ ಆತ್ಮಹತ್ಯೆ ತಡೆಗೆ ಸರಕಾರ ಮುಂದಾಗಬೇಕು: ಕುಮಾರಸ್ವಾಮಿ

ಬೆಂಗಳೂರು, ನ.7: ಸತತ ಎರಡು ವರ್ಷಗಳ ನೆರೆಹಾವಳಿಯಿಂದ ಕಂಗೆಟ್ಟಿರುವ ರಾಜ್ಯದ ರೈತ ಸಮುದಾಯ, ಬೆಳೆದ ಫಸಲು ಕೈಗೆಟುಕದೆ ಸಾಲದ ಸುಳಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗುತ್ತಿರುವ ಆಘಾತಕಾರಿ ಬೆಳವಣಿಗೆ ಹತ್ತಿಕ್ಕಲು ರಾಜ್ಯ ಸರಕಾರ ತಕ್ಷಣವೇ ಮುಂದಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್‍ಗಳನ್ನು ಮಾಡಿರುವ ಅವರು, ಅನ್ನದಾತರು ಆತ್ಮಹತ್ಯೆಯ ದಾರಿ ತುಳಿಯದಂತೆ ಆರಂಭದಲ್ಲೇ ಸರಕಾರ ಎಚ್ಚೆತ್ತು ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು, ರೈತರಿಗೆ ಆತ್ಮಸ್ಥೈರ್ಯ ತುಂಬಬೇಕು. ಇಲ್ಲದಿದ್ದರೆ ಪರಿಸ್ಥಿತಿ ಬಿಗಡಾಯಿಸುತ್ತದೆ, ರೈತರ ಹಿಡಿಶಾಪ ಸರಕಾರಕ್ಕೆ ತಟ್ಟುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕಳೆದ 48 ತಾಸುಗಳ ಅವಧಿಯಲ್ಲಿ ರಾಜ್ಯದಲ್ಲಿ ಸಾಲದ ಸುಳಿಗೆ ನಲುಗಿಹೋದ ನಾಲ್ವರು ರೈತರು(ಹಾವೇರಿ ಜಿಲ್ಲೆ 2, ಮಂಡ್ಯ, ದಾವಣಗೆರೆ ಜಿಲ್ಲೆ ತಲಾ ಒಂದು) ಆತ್ಮಹತ್ಯೆ ಮಾಡಿಕೊಂಡಿರುವ ವರದಿ ನನ್ನನ್ನು ಅಧೀರನನ್ನಾಗಿಸಿದೆ. ರೈತರ ಆತ್ಮಹತ್ಯೆ ಪ್ರಕರಣಗಳು 'ಸಮೂಹ ಸನ್ನಿ' ಆಗದಂತೆ ಆರಂಭದಲ್ಲೇ ಎಚ್ಚೆತ್ತುಕೊಂಡು, ಧೈರ್ಯ ತುಂಬುವ ಕೆಲಸ ಮಾಡಬೇಕಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಅತಿವೃಷ್ಟಿ ನಡುವೆ ಕಾಡುತ್ತಿರುವ ಕೊರೋನ ಸೋಂಕು ಸೃಷ್ಟಿಸಿದ ಅವಾಂತರದಲ್ಲಿ ಕೃಷಿಕ ಸಮುದಾಯದ ಬದುಕು ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ. ನೆರೆಹಾವಳಿಯ ಸಂತ್ರಸ್ತರಿಗೆ ಸರಕಾರ ನೀಡಿದ ಕಿಲುಬು ಕಾಸಿನ ಪರಿಹಾರದಿಂದ ರೈತರು ತೀವ್ರ ಹತಾಶರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಕೊರೋನ ಸೋಂಕು ವ್ಯಾಪಿಸಿದ ನಂತರ ದೇಶದಲ್ಲಿ ಎಲ್ಲ ವಲಯಗಳ ಜಿಡಿಪಿ ನೆಲಕಚ್ಚಿದರೂ ಕೃಷಿ ವಲಯದಿಂದ ಮಾತ್ರ ದೇಶದ ಆರ್ಥಿಕ ಬೆನ್ನೆಲುಬು ಅದಃಪತನವಾಗಿರಲಿಲ್ಲ ಎಂಬುದನ್ನು ಕೇಂದ್ರ, ರಾಜ್ಯ ಸರಕಾರಗಳು ಮನಗಾಣಬೇಕು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ರಾಜ್ಯದ ರೈತರು ಸಾಲಭಾದೆ ತಾಳಲಾರದೆ ಆತ್ಮಹತ್ಯೆಗೆ ಶರಣಾಗುವ ಮುನ್ಸೂಚನೆ ಸಿಗುತ್ತಿರುವ ಬೆನ್ನಲ್ಲೇ ಸರಕಾರ ಅನ್ನದಾತನ ಕೈಹಿಡಿಯಬೇಕು. ಸಿದ್ದರಾಮಯ್ಯ ಮುಖ್ಯ ಮಂತ್ರಿಯಾಗಿದ್ದಾಗ ರಾಜ್ಯದಲ್ಲಿ ನಡೆದ ರೈತರ ಸರಣಿ ಆತ್ಮಹತ್ಯೆ ಸಂಕೋಲೆ ಪುನರಾವರ್ತನೆ ಆಗುವುದಕ್ಕೆ ಬಿಡಬಾರದು ಎಂದು ಅವರು ತಿಳಿಸಿದ್ದಾರೆ.

ಆಗ ವಿರೋಧ ಪಕ್ಷದಲ್ಲಿದ್ದರೂ ನಾನು ರಾಜ್ಯದ ಸುಮಾರು 500 ಮಂದಿ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ತಲಾ 50 ಸಾವಿರ ರೂಪಾಯಿಗಳಿಂದ ಒಂದು ಲಕ್ಷ ರೂಪಾಯಿಗಳವರೆಗೆ ಆರ್ಥಿಕ ನೆರವು ನೀಡಿದ್ದೆ. ನಂತರ ನಾನು ಮುಖ್ಯಮಂತ್ರಿಯಾದಾಗ ನೀಡಿದ್ದ ವಾಗ್ದಾನದಂತೆ ರಾಜ್ಯದ ರೈತರ 25 ಸಾವಿರ ಕೋಟಿ ರೂಪಾಯಿಗಳ ಸಾಲ ಮನ್ನಾ ಮಾಡಿದೆ. ಬರೀ ಸಾಲಮನ್ನಾದಿಂದ ರೈತರ ಬದುಕು ಹಸನಾಗದು ಎಂಬುದನ್ನು ಅರಿತಿದ್ದೆ. ಆದರೆ, ಆರ್ಥಿಕ ಚೈತನ್ಯ ನೀಡುವ ಕಾರ್ಯಕ್ರಮ ರೂಪಿಸುವ ಕನಸು ಸಾಕಾರವಾಗಲಿಲ್ಲ ಎಂದು ಅವರು ತಿಳಿಸಿದ್ದಾರೆ.

ಬೆಳೆ ಹಾನಿ, ಆಸ್ತಿಪಾಸ್ತಿ ನಷ್ಟ, ಎರಡು ಹೊತ್ತು ಊಟಕ್ಕೂ ಪರದಾಡುವಂತಹ ಪರಿಸ್ಥಿತಿಗೆ ಬಂದಿರುವ ಅನ್ನದಾತರು ಆತ್ಮಹತ್ಯೆಗೆ ಶರಣಾಗದಂತೆ ಎಚ್ಚರ ವಹಿಸುವ ಮೂಲಕ ಸಂಭವನೀಯ ಸರಣಿ ಆತ್ಮಹತ್ಯೆಯ ಅನಾಹುತಕಾರಿ ಬೆಳವಣಿಗೆಯನ್ನು ಆರಂಭದಲ್ಲೇ ಚಿವುಟಿ ಹಾಕಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X