Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚೆಕ್‍ ಬೌನ್ಸ್ ಪ್ರಕರಣ: ಕಾಫಿ ಡೇ...

ಚೆಕ್‍ ಬೌನ್ಸ್ ಪ್ರಕರಣ: ಕಾಫಿ ಡೇ ಸಿದ್ದಾರ್ಥ ಪತ್ನಿ ಮಾಳವಿಕಾಗೆ ಜಾಮೀನು ಮಂಜೂರು

ವಾರ್ತಾಭಾರತಿವಾರ್ತಾಭಾರತಿ7 Nov 2020 7:32 PM IST
share
ಚೆಕ್‍ ಬೌನ್ಸ್ ಪ್ರಕರಣ: ಕಾಫಿ ಡೇ ಸಿದ್ದಾರ್ಥ ಪತ್ನಿ ಮಾಳವಿಕಾಗೆ ಜಾಮೀನು ಮಂಜೂರು

ಚಿಕ್ಕಮಗಳೂರು, ನ.7: ಚೆಕ್‍ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿಯಲ್ಲಿದ್ದ ಕಾಫಿ ಡೇ ಮಾಲಕ ದಿ.ಸಿದ್ದಾರ್ಥ ಹೆಗಡೆ ಅವರ ಪತ್ನಿ ಹಾಗೂ ಎಬಿಸಿ ಸಂಸ್ಥೆಯ ನಿರ್ದೇಶಕಿ ಮಾಳವಿಕ ಹೆಗ್ಡೆಯವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಶನಿವಾರ ಮೂಡಿಗೆರೆ ಜೆಎಂಎಫ್‍ಸಿ ನ್ಯಾಯಾಲಯ ಮಾಳವಿಕ ಸೇರಿದಂತೆ 8 ಮಂದಿಗೆ ಜಾಮೀನು ಮಂಜೂರು ಮಾಡಿದೆ.

ಎಬಿಸಿ, ಕಾಫಿ ಡೇ ಸಂಸ್ಥೆಗಳ ಮಾಲಕ ಸಿದ್ದಾರ್ಥ ಹೆಗಡೆ ಕಳೆದ ವರ್ಷ ಆತ್ಮಹತ್ಯೆಗೆ ಶರಣಾಗಿದ್ದು, ನಂತರ ಅವರ ಪತ್ನಿ ಮಾಳವಿಕರವರು ಸಂಸ್ಥೆಯ ನಿದೇಶಕಿಯಾಗಿ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು. ಈ ಹಿಂದೆ ಜಿಲ್ಲೆಯ ನೂರಾರು ಕಾಫಿ ಬೆಳೆಗಾರರು ಕಾಫಿ ಡೇ ಕಂಪೆನಿಗೆ ಮಾರಾಟ ಮಾಡಿದ್ದ ಕಾಫಿಗೆ ಕಂಪೆನಿಯುವ ಬೆಳೆಗಾರರಿಗೆ ಚೆಕ್ ನೀಡಿದ್ದು, ಈ ಚೆಕ್‍ಗಳು ಅಮಾನ್ಯಗೊಂಡಿದ್ದವು. ಇದರಿಂದ ಕಾಫಿ ಬೆಳೆಗಾರರು ಮೂಡಿಗೆರೆ ಜೆಎಂಎಫ್‍ಸಿ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಅನೇಕ ಬಾರೀ ನೋಟಿಸ್ ನೀಡಿದರೂ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ನ್ಯಾಯಾಲಯ ಮಾಳವಿಕ ಸೇರಿದಂತೆ ಕಂಪೆನಿಯ 8 ಮಂದಿಯ ವಿರುದ್ಧ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಲಾಗಿತ್ತು. ಶನಿವಾರ ಮಾಳವಿಕ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದುಕೊಂಡಿದ್ದು, ಇದರಿಂದ ಬಂಧನ ಭೀತಿಯಲ್ಲಿದ್ದ ಅವರಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ.

ಘಟನೆ ವಿವರ: ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದ ಕಾಫಿ ಬೆಳೆಗಾರ ಕೆ.ನಂದೀಶ್ ಎಂಬವರು ಎಬಿಸಿ ಕಂಪೆನಿಗೆ ತಮ್ಮ ಕಾಫಿಯನ್ನು ಮಾರಾಟ ಮಾಡಿದ್ದರು. ಕಾಫಿ ಮಾರಾಟ ಮಾಡಿದ್ದ ಸುಮಾರು 45 ಲಕ್ಷ ರೂ. ಪೈಕಿ 4 ಲಕ್ಷ ರೂ. ಹಣವನ್ನು ಕಂಪೆನಿ ನಂದೀಶ್‍ಗೆ ನೀಡಿತ್ತು. ಬಾಕಿ ಹಣಕ್ಕೆ ಕಂಪೆನಿಯು ಚೆಕ್‍ಗಳನ್ನು ನೀಡಿದ್ದು, ಈ ಚೆಕ್‍ಗಳು ಬೌನ್ಸ್ ಆಗಿವೆ ಎಂದು ಆರೋಪಿಸಿ ಎಬಿಸಿ ಹಾಗೂ ಕಾಫಿ ಡೇ ಸಂಸ್ಥೆಗಳ ನಿರ್ದೇಶಕಿಯಾಗಿರುವ ಸಿದ್ದಾರ್ಥ ಹೆಗಡೆ ಪತ್ನಿ ಹಾಗೂ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಮಗಳಾಗಿರುವ ಮಾಳವಿಕ ಸೇರಿದಂತೆ ಸಂಸ್ಥೆಯ 8 ಮಂದಿ ವಿರುದ್ಧ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಮೂಡಿಗೆರೆ ಜೆಎಂಎಫ್‍ಸಿ ನ್ಯಾಯಾಲಯ ಸಿದ್ದಾರ್ಥ ಹೆಗಡೆ ಪತ್ನಿ ಹಾಗೂ ಸದ್ಯ ಕಾಫಿ ಡೇ ಗ್ಲೋಬಲ್ ಲಿಮಿಟೆಡ್ ಕಂಪೆನಿಯ ಸಿಇಒ ಆಗಿರುವ ಮಾಳವಿಕ, ನಿರ್ದೇಶಕ ಜಯರಾಜ್ ಸಿ.ಹುಬ್ಳಿ, ಸೆಕ್ರೆಟರಿ ಸದಾನಂದ ಪೂಜಾರಿ ಹಾಗೂ ಕಂಪೆನಿ ಮುಖ್ಯಸ್ಥರಾದ ನಿತಿನ್ ಬಾಗಮನೆ, ಕಿಟೀಟಿ ಸಾವಂತ್, ಜಾವಿದ್ ಫರ್ವೇಜ್ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಹೊರಡಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X