Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಸ್ಕಿ ವಿಧಾನಸಭಾ ಕ್ಷೇತ್ರ ಉಪಚುನಾವಣೆಗೆ...

ಮಸ್ಕಿ ವಿಧಾನಸಭಾ ಕ್ಷೇತ್ರ ಉಪಚುನಾವಣೆಗೆ ಕಾಂಗ್ರೆಸ್ ಸಿದ್ಧತೆ

ಬಿಜೆಪಿ ಮುಖಂಡ ಬಸನಗೌಡ ತುರುವೀಹಾಳ್ ಸೆಳೆಯಲು ಯತ್ನ

ವಾರ್ತಾಭಾರತಿವಾರ್ತಾಭಾರತಿ7 Nov 2020 7:39 PM IST
share
ಮಸ್ಕಿ ವಿಧಾನಸಭಾ ಕ್ಷೇತ್ರ ಉಪಚುನಾವಣೆಗೆ ಕಾಂಗ್ರೆಸ್ ಸಿದ್ಧತೆ

ಬೆಂಗಳೂರು, ನ.7: ಮೈತ್ರಿ ಸರಕಾರದ ಪತನಕ್ಕೆ ಕಾರಣಕರ್ತ ಶಾಸಕರ ಪೈಕಿ ಒಬ್ಬರಾಗಿದ್ದ ಪ್ರತಾಪ್‍ಗೌಡ ಪಾಟೀಲ್ ಅನರ್ಹತೆಯಿಂದ ತೆರವಾಗಿರುವ ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಆಯೋಗವು ಇನ್ನೂ ಉಪ ಚುನಾವಣೆ ಘೋಷಿಸಿಲ್ಲ. ಆದರೂ, ವಿಪಕ್ಷ ಕಾಂಗ್ರೆಸ್ ಈಗಿನಿಂದಲೆ ಸಿದ್ಧತೆಗಳನ್ನು ಆರಂಭಿಸಿದೆ.

ಉಪ ಚುನಾವಣೆ ಹಿನ್ನೆಲೆಯಲ್ಲಿ ಸಮರ್ಥ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿರುವ ಕಾಂಗ್ರೆಸ್, ಬಿಜೆಪಿ ಮುಖಂಡ ಬಸನಗೌಡ ತುರುವೀಹಾಳ್‍ರನ್ನು ಸೆಳೆಯಲು ಕಸರತ್ತು ನಡೆಸಿದ್ದು, ಈ ಸಂಬಂಧ ರಾಯಚೂರು ಜಿಲ್ಲಾ ಕಾಂಗ್ರೆಸ್ ಮುಖಂಡರ ನಿಯೋಗವು ವಿಪಕ್ಷ ನಾಯಕ ಸಿದ್ದರಾಮಯ್ಯ ಜೊತೆ ಇಂದು ಬೆಂಗಳೂರಿನಲ್ಲಿರುವ ಅವರ ನಿವಾಸದಲ್ಲಿ ಚರ್ಚೆ ನಡೆಸಿದೆ ಎಂದು ತಿಳಿದು ಬಂದಿದೆ.

ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾದಲ್ಲಿ ಬಿಜೆಪಿಯಿಂದ ಪ್ರತಾಪ್ ಗೌಡ ಪಾಟೀಲ್‍ಗೆ ಟಿಕೆಟ್ ಸಿಗುವ ಸಾಧ್ಯತೆಗಳು ಹೆಚ್ಚಿರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಪಕ್ಷವು ಬಿಜೆಪಿ ಮುಖಂಡನಿಗೆ ಬಲೆ ಬೀಸಿದೆ. ಸಿದ್ದರಾಮಯ್ಯ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿರುವ ರಾಯಚೂರು ಜಿಲ್ಲೆಯ ಮುಖಂಡರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆ ಚರ್ಚೆ ನಡೆಸಿದ ಬಳಿಕ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ.

ಸಿದ್ದರಾಮಯ್ಯರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಯಚೂರು ಜಿಲ್ಲ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಂಸದ ಬಿ.ವಿ.ನಾಯಕ್, ಬಸನಗೌಡ ತುರುವೀಹಾಳ್ ರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತರುವ ಸಂಬಂಧ ಚರ್ಚೆ ಆಗುತ್ತಿದೆ. ಉಪಚುನಾವಣೆ ಆಗಿರುವುದರಿಂದ ಸಮರ್ಥ ಅಭ್ಯರ್ಥಿಗಾಗಿ ಹುಡುಕಾಟ ಮಾಡುತ್ತಿದ್ದೇವೆ ಎಂದರು.

ಕಾಂಗ್ರೆಸ್ ಸೇರ್ಪಡೆ ಸಂಬಂಧ ತುರುವೀಹಾಳ್ ಬಳಿ ನೇರವಾಗಿ ನಾವು ಮಾತನಾಡಿಲ್ಲ. ಕಾಂಗ್ರೆಸ್ ಸೇರ್ಪಡೆ ಕುರಿತು ಅವರ ಕಾರ್ಯಕರ್ತರ ಬಳಿ ತುರುವೀಹಾಳ್ ಮಾತನಾಡಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ನಮಗೆ ಸಿಕ್ಕಿದೆ. ಅವರು ಕಾಂಗ್ರೆಸ್ ಪಕ್ಷಕ್ಕೆ ಬರುವುದಾದರೆ ಸ್ವಾಗತ ಎಂದು ಅವರು ಹೇಳಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೊಸದಿಲ್ಲಿಯಲ್ಲಿದ್ದಾರೆ. ಅವರು ಬೆಂಗಳೂರಿಗೆ ಹಿಂದಿರುಗಿದ ಬಳಿಕ ಅವರನ್ನು ಭೇಟಿ ಮಾಡುತ್ತೇವೆ. ನಮ್ಮ ಕುಟುಂಬದ ಯಾವ ಸದಸ್ಯರು ಈ ಉಪ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಜಿಲ್ಲಾ ಮುಖಂಡರ ಅಭಿಪ್ರಾಯ ಪಡೆದು ನಂತರ ಚರ್ಚೆ ಮಾಡುತ್ತೇವೆ ಎಂದು ಬಿ.ವಿ.ನಾಯಕ್ ಹೇಳಿದರು.

ಶಾಸಕ ಡಿ.ಎಸ್.ಹುಲಗೇರಿ ಮಾತನಾಡಿ, ರಾಜ್ಯ ಸರಕಾರದಲ್ಲಿ ಯಾವ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಶಾಸಕರಿಗೆ ಸರಿಯಾದ ಅನುದಾನವನ್ನು ಕೊಡುತ್ತಿಲ್ಲ. ಈ ವಿಚಾರದ ಬಗ್ಗೆ ಚರ್ಚೆ ನಡೆಸಲು ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದೇವೆ. ರಾಜ್ಯ ಸರಕಾರದ ಮಲತಾಯಿ ಧೋರಣೆ ಕುರಿತು ಅವರ ಗಮನ ಸೆಳೆದಿದ್ದೇವೆ ಎಂದರು.

ಬಿಜೆಪಿ ಮುಖಂಡ ಬಸನಗೌಡ ತುರುವೀಹಾಳ್‍ ಕಾಂಗ್ರೆಸ್ ಸೇರ್ಪಡೆ ವಿಚಾರದ ಬಗ್ಗೆ ಇವತ್ತು ಯಾವುದೆ ಚರ್ಚೆಯಾಗಿಲ್ಲ. ನಮ್ಮ ಜಿಲ್ಲೆಯ ಮುಖಂಡರು ಈ ಬಗ್ಗೆ ಚರ್ಚೆ ಮಾಡುತ್ತಾರೆ ಎಂದು ಅವರು ಹೇಳಿದರು.

ಸಿದ್ದರಾಮಯ್ಯ ನಿವಾಸದಲ್ಲಿ ನಡೆದ ಚರ್ಚೆಯಲ್ಲಿ ಶಾಸಕರಾದ ಬಸನಗೌಡ ದದ್ದಲ್, ಅಮರೇಗೌಡ ಬಯ್ಯಾಪೂರ, ವಿಧಾನಪರಿಷತ್ ಮಾಜಿ ಸದಸ್ಯ ಬೋಸರಾಜು ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X