ಜ್ಯೋತಿ
ಬ್ರಹ್ಮಾವರ, ನ.7: ಬ್ರಹ್ಮಾವರ ಕ್ರಾಸ್ಲ್ಯಾಂಡ್ ಕಾಲೇಜಿನ ಹಿರಿಯ ಉಪನ್ಯಾಸಕಿ ಜ್ಯೋತಿ (56) ಶುಕ್ರವಾರ ಅನಾರೋಗ್ಯದಿಂದ ನಿಧನರಾದರು. ಇವರು ಪತಿ, ಪುತ್ರ ಹಾಗೂ ಅಪಾರ ಶಿಷ್ಯವೃಂದವನ್ನು ಅಗಲಿದ್ದಾರೆ.
ಮೂಡುಬೆಳ್ಳೆಯ ಸಂತ ಲಾರೆನ್ಸ್ ಪ್ರೌಢ ಶಾಲೆ, ಕ್ರಾಸ್ಲ್ಯಾಂಡ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ನಂತರ ಕ್ರಾಸ್ಲ್ಯಾಂಡ್ ಕಾಲೇಜಿನಲ್ಲಿ ಕಳೆದ 33 ವರ್ಷಗಳಿಗೂ ಅಧಿಕ ಕಾಲದಿಂದ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತಿದ್ದರು.
Next Story