ಬೈಂದೂರು ತಾಲೂಕು ಬಿಸಿಯೂಟ ನೌಕರರ ಸಮಾವೇಶ

ಬೈಂದೂರು, ನ.7: ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ (ಸಿಐಟಿಯು) ಬೈಂದೂರು ತಾಲೂಕು ಸಮಿತಿ ನೇತೃತ್ವದಲ್ಲಿ ಬಿಸಿಯೂಟ ನೌಕರರ ಸಮಾವೇಶವು ಇಂದು ಬೈಂದೂರು ಸಿಐಟಿಯು ಕಚೇರಿಯಲ್ಲಿ ಜರಗಿತು.
ಸಮಾವೇಶವನ್ನು ಉದ್ಘಾಟಿಸಿದ ಸಿಐಟಿಯು ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ್ ಮಾತನಾಡಿ, ಬಿಸಿಯೂಟ ನೌಕರರನ್ನು ಸರಕಾರಿ ನೌಕರರನ್ನಾಗಿ ಖಾಯಂ ಗೊಳಿಸುವುದಕ್ಕಾಗಿ ಕಾನೂನು ತಿದ್ದುಪಡಿ ಮಾಡಬೇಕು. ಸರಕಾರದ ಜನ ವಿರೋಧಿ ನೀತಿಗಳನ್ನು ವಿರೋಧಿಸಿ ನ.26 ರಂದು ಆಖಿಲ ಭಾರತ ಸಾರ್ವತ್ರಿಕ ಮುಷ್ಕರ ಜರಗಲಿದ್ದು, ಇದನ್ನು ಯಶಸ್ವಿ ಗೊಳಿಸಲು ನೌಕರರು ಸಕ್ರೀಯವಾಗಿ ಭಾಗವಹಿಸಬೇಕೆಂದು ಕರೆ ನೀಡಿದರು.
ಕಾರ್ಮಿಕ ಮುಖಂಡರಾದ ರೊನಾಲ್ಡ್ ರಾಜೇಶ್ ಕ್ವಾಡ್ರಸ್, ವೆಂಕಟೇಶ್ ಕೋಣಿ ಮಾತನಾಡಿದರು. ನ.9ರಂದು ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಜರಗುವ ಪ್ರತಿಭಟನೆಯನ್ನು ಯಶಸ್ವಿಗೊಳಿಸಲು ಸಭೆಯಲ್ಲಿ ತೀರ್ಮಾ ನಿಸಲಾಯಿತು. ಜಯಶ್ರೀ ಪಡುವರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಿಂಗಾರಿ ನಾವುಂದ ಉಪಸ್ಥಿತರಿದ್ದರು.
Next Story





