ಉಡುಪಿ ಸಿಎಫ್‌ಐ ಸಂಸ್ಥಾಪನಾ ದಿನಾಚರಣೆ
ಉಡುಪಿ, ನ.7: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಇದರ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಇಂದು ಸಿಎಫ್‌ಐ ಉಡುಪಿ ಜಿಲ್ಲಾ ವತಿಯಿಂದ ಧ್ವಜಾರೋಹಣ ಸಮಾರಂಭ ನಡೆಯಿತು.
ಧ್ವಜಾರೋಹಣ ನೆರವೇರಿಸಿದ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾಧ್ಯಕ್ಷ ನವಾಝ್ ಶೇಖ್, ಕಳೆದ 11 ವರ್ಷಗಳಲ್ಲಿ ಸಂಘಟನೆ ಮಾಡಿದ ಸಾಧನೆಗಳು ಮತ್ತು ಮುಂದಿನ ಗುರಿಯ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಿದರು.
ಜಿಲ್ಲಾ ಉಪಾಧ್ಯಕ್ಷೆ ಝಂಝಂ ಕಪ್ತಿ ಮಾತನಾಡಿದರು. ಉಡುಪಿ ಜಿಲ್ಲಾ ಸಮಿತಿ ಸದಸ್ಯರಾದ ಅಸೇಲ್, ತೌಹೀದ್, ಶಾಹಿದ್, ಫರಾಝ್ ಮತ್ತು ಮೊದಲಾದವರು ಉಪಸ್ಥಿತರಿದ್ದರು. ಉಡುಪಿ ನಗರ ವಲಯ ಅಧ್ಯಕ್ಷ ಅರ್ಫಾಝ್ ಕಾರ್ಯಕ್ರಮ ನಿರೂಪಿಸಿದರು.
Next Story