Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭೀಮ ಆರ್ಮಿ ಏಕತಾ ಮಿಷನ್ ಸಂಘಟನೆ ಹೆಸರು...

ಭೀಮ ಆರ್ಮಿ ಏಕತಾ ಮಿಷನ್ ಸಂಘಟನೆ ಹೆಸರು ದುರುಪಯೋಗ ಆರೋಪ: ಯಶಪಾಲ ಬೋರೆ ವಿರುದ್ಧ ದೂರು

ವಾರ್ತಾಭಾರತಿವಾರ್ತಾಭಾರತಿ7 Nov 2020 9:49 PM IST
share

ಬೆಂಗಳೂರು, ನ.7: ಭೀಮ ಆರ್ಮಿ ಭಾರತ ಏಕತಾ ಮಿಷನ್ ಸಂಘಟನೆಯ ಹೆಸರನ್ನು ಅನಧಿಕೃತವಾಗಿ ಬಳಸಿಕೊಂಡು ಸಂಘದ ಸ್ವಯಂ ಘೋಷಿತ ಅಧ್ಯಕ್ಷನಾಗಿ ಚಟುವಟಿಕೆಗಳನ್ನು ನಡೆಸುತ್ತಿದ್ದರೆಂದು ಆರೋಪಿಸಿ ಯಶಪಾಲ ಬೋರೆ ಅವರ ವಿರುದ್ಧ ಸಂಘಟನೆ ರಾಜ್ಯಾಧ್ಯಕ್ಷ ಎಸ್.ಎಸ್. ತಾವಡೆ ನಗರದ ಗಾಂಧಿನಗರ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಯಶಪಾಲ ಬೋರೆ ಎಂಬುವ ವ್ಯಕ್ತಿ ಸ್ವಯಂ ಘೋಷಿತವಾಗಿ ಭೀಮ ಆರ್ಮಿ ರಾಜ್ಯಾಧ್ಯಕ್ಷನೆಂದು ಹೇಳಿಕೊಂಡು ಸಂಘದ ಹೆಸರು ಹಾಗೂ ಲಾಂಛನವನ್ನು ದುರುಪಯೋಗ ಪಡಿಸಿಕೊಂಡು ಸಂಘದ ಘಟಕಗಳಿಗೆ ಅಧ್ಯಕ್ಷರನ್ನು ನೇಮಕಮಾಡಿ ನವೆಂಬರ್ 8 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಪದಾಧಿಕಾರಿಗಳ ಪದಗ್ರಹಣ ರಾಜ್ಯಮಟ್ಟದ ಬೃಹತ್ ಸಮಾವೇಶವನ್ನು ಆಯೋಜಿಸಿದ್ದರು.

ಈ ಕಾರ್ಯಕ್ರಮ ಅನಧಿಕೃತವಾಗಿದ್ದು ಸಂಘಟನೆಗೆ ಸಂಬಂಧಿಸಿಲ್ಲದ ವ್ಯಕ್ತಿಗಳು ಭೀಮ ಆರ್ಮಿಯ ಹೆಸರಿನಲ್ಲಿ ಸಮಾವೇಶ ನಡೆಸುತ್ತಿದ್ದಾರೆ. ಇದನ್ನು ಕೂಡಲೆ ರದ್ದುಪಡಿಸಬೇಕೆಂದು ಸಂಘಟನೆ ರಾಜ್ಯಾಧ್ಯಕ್ಷ ಎಸ್.ಎಸ್. ತಾವಡೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು ಇದರ ಅನ್ವಯ ಉಪಾರಪೇಟೆ ಪೊಲೀಸರು ಫ್ರೀಡಂ ಪಾರ್ಕ್ ಸಮಾವೇಶವನ್ನು ರದ್ದುಪಡಿಸಿದ್ದಾರೆ.

ಸಂಸ್ಥಾಪಕ ಅಧ್ಯಕ್ಷರಾದ ವಿಜಯಕುಮಾರ್ ಅಜಾದ್ ಕಳೆದ ಜನವರಿಯಲ್ಲಿ ಕಲಬುರಗಿಯಲ್ಲಿ ನಡೆದ ರಾಜ್ಯ ಮಟ್ಟದ ಕಾರ್ಯಕಾರಿಣಿ ಸಭೆಯಲ್ಲಿ ಎಲ್ಲಾ ಪದಾಧಿಕಾರಿಗಳನ್ನು ನೇಮಕ ಮಾಡಿ ಹಿಂದೆ ಇದ್ದ ರಾಜ್ಯ ಸಮಿತಿಯನ್ನು ವಿಸರ್ಜನೆಮಾಡಿ ಎಸ್.ಎಸ್. ತಾವಡೆ ಅವರನ್ನು ಕರ್ನಾಟಕ ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಅಧಿಕೃತ ಆದೇಶ ಪತ್ರವನ್ನು ನೀಡಿದ್ದರು.

ಭೀಮ ಆರ್ಮಿ ಸಂಘಟನೆ ಅಂತರ್‍ರಾಷ್ಟ್ರೀಯ ಮಟ್ಟದಲ್ಲಿ ಬೃಹತ್ ಪ್ರಮಾಣದಲ್ಲಿ ಬೆಳೆದು ನಿಂತಿದೆ. ಉತ್ತಮ ಹೆಸರನ್ನು ಪಡೆದಿರುವ ಸಂಘಟನೆ ಅನೇಕ ಸಮಾಜಮುಖಿ ಕಾರ್ಯಕ್ರಮ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ಇದರ ಹೆಸರನ್ನು ಮತ್ತು ಲಾಂಛನವನ್ನು ಯಾರಾದರು ದುರಪಯೋಗ ಪಡಿಸಿಕೊಂಡರೆ ಅಂಥವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯಾಧ್ಯಕ್ಷ ಎಸ್.ಎಸ್. ತಾವಡೆ ಎಚ್ಚರಿಕೆ ನೀಡಿದ್ದಾರೆ.

ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಸ್ ಆರ್ ಹುಗ್ಗೆ, ರಾಜ್ಯ ಸಂಘಟನಾ ಕಾರ್ಯದರ್ಶಿ ಸಂತೋಷ ಪಾಳಾ, ಚಿತ್ತಾಪುರ ತಾಲ್ಲೂಕು ಅಧ್ಯಕ್ಷ ನಾಗರಾಜ ಗಾಯಕವಾಡ ಮತ್ತಿತರರು ಸೇರಿ ದೂರು ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X