Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನ.10ರಂದು ಶಿರಾ ಉಪಚುನಾವಣೆ ಮತ ಎಣಿಕೆ:...

ನ.10ರಂದು ಶಿರಾ ಉಪಚುನಾವಣೆ ಮತ ಎಣಿಕೆ: ತಾಲೂಕಿನಾದ್ಯಂತ ನಿಷೇಧಾಜ್ಞೆ ಜಾರಿ

ವಾರ್ತಾಭಾರತಿವಾರ್ತಾಭಾರತಿ7 Nov 2020 10:33 PM IST
share
ನ.10ರಂದು ಶಿರಾ ಉಪಚುನಾವಣೆ ಮತ ಎಣಿಕೆ: ತಾಲೂಕಿನಾದ್ಯಂತ ನಿಷೇಧಾಜ್ಞೆ ಜಾರಿ

ತುಮಕೂರು, ನ.7: ಶಿರಾ ವಿಧಾನಸಭಾ ಉಪ ಚುನಾವಣೆಗೆ ಸಂಬಂಧಿಸಿದಂತೆ ನವೆಂಬರ್ 10ರಂದು ತುಮಕೂರು ನಗರದ ಸರಕಾರಿ ಪಾಲಿಟೆಕ್ನಿಕ್‍ನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮತ ಎಣಿಕಾ ಕೇಂದ್ರದ ಸುತ್ತಮುತ್ತಲಿನ 5 ಕಿ.ಮೀ. ವ್ಯಾಪ್ತಿ ಹಾಗೂ ಶಿರಾ ತಾಲೂಕಿನಾದ್ಯಂತ ನವೆಂಬರ್ 10ರ ಬೆಳಗ್ಗೆ 6 ರಿಂದ ನವೆಂಬರ್ 11ರ ಬೆಳಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ. 

ಚುನಾವಣೆಯಲ್ಲಿ ಜಯಗಳಿಸಿದ ಅಭ್ಯರ್ಥಿಗಳು ವಿಜಯೋತ್ಸವ ಆಚರಿಸಲು ಮೆರವಣಿಗೆ ಮೂಲಕ ಘೋಷಣೆಗಳನ್ನು ಕೂಗುವ ಹಾಗೂ ಪರಾಭವಗೊಂಡ ಅಭ್ಯರ್ಥಿಗಳ ಬೆಂಬಲಿಗರು ಮತ್ತು ಜಯಗಳಿಸಿದ ಅಭ್ಯರ್ಥಿಗಳ ಬೆಂಬಲಿಗರ ಮಧ್ಯೆ ಗಲಾಟೆ ಆಗುವ ಸಾಧ್ಯತೆಗಳು ಇರುವುದರಿಂದ ಈ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. 

ನಿಷೇಧಾಜ್ಞೆ ಅವಧಿಯಲ್ಲಿ ಐದು ಜನರ ಮೇಲ್ಪಟ್ಟು ಗುಂಪುಗಾರಿಕೆ ಮಾಡುವುದಾಗಲಿ ಇತರೆ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುವಂತಿಲ್ಲ. ಮೆರವಣಿಗೆ, ಅಕ್ರಮ ಗುಂಪು ಸೇರುವಿಕೆ, ಪಟಾಕಿ ಸಿಡಿಸುವಂತಿಲ್ಲ. ಯಾವುದೇ ರೀತಿಯ ಮತೀಯ ಭಾವನೆಗಳನ್ನು ಕೆರಳಿಸುವಂತಹ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದು, ಘೋಷಣೆ ಕೂಗುವುದು ಹಾಗೂ ಭಿತ್ತಿ ಪತ್ರಗಳನ್ನು ಪ್ರಕಟಿಸುವುದು ಮಾಡತಕ್ಕದ್ದಲ್ಲ. ಶಾಂತಿ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಭಂಗವುಂಟು ಮಾಡುವ ಸುಳ್ಳು ವದಂತಿಗಳನ್ನು ಹಬ್ಬಿಸಬಾರದು, ಸಾರ್ವಜನಿಕ ಪ್ರಾಣ ಮತ್ತು ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿ ಉಂಟಾಗುವ ರೀತಿಯಲ್ಲಿ ವರ್ತಿಸತಕ್ಕದ್ದಲ್ಲ. ನಿಷೇದಾಜ್ಞೆ ಅವಧಿಯಲ್ಲಿ ಶವಸಂಸ್ಕಾರ, ಮದುವೆ ಮತ್ತು ಧಾರ್ಮಿಕ ಕಾರ್ಯ ಹೊರತುಪಡಿಸಿ ಯಾವುದೇ ಸಭೆ ಸಮಾರಂಭ ಮತ್ತು ಮೆರವಣಿಗೆ ಮಾಡುವಂತಿಲ್ಲ. ನಿಷೇಧಾಜ್ಞೆಯನ್ನು ಉಲ್ಲಂಘಿಸಿದ ವ್ಯಕ್ತಿಗಳನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸಲು ಪೊಲೀಸ್ ಇಲಾಖೆಗೆ ಆದೇಶಿಸಲಾಗಿದೆ. 

ಮೇಲ್ಕಂಡ ಷರತ್ತು ಗೊಳಪಡಿಸಿ ರಾಜಕೀಯ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ವಿಜಯೋತ್ಸವ ಸಂಭ್ರಮಾಚರಣೆ, ಮೆರವಣಿಗೆಗಳಿಗೆ ಮಾತ್ರ ಸೀಮಿತಗೊಳಿಸಿ ಈ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X