ಜನಪರ ಚಳವಳಿಗಳ ಒಕ್ಕೂಟದಿಂದ ನ.18-23ರವರೆಗೆ ವಾಹನ ಜಾಥಾ- ಬಹಿರಂಗ ಸಭೆ
ಮಂಗಳೂರು, ನ.7: ಕೇಂದ್ರ ಮತ್ತು ರಾಜ್ಯ ಸರಕಾರಗಳು ರೈತ, ದಲಿತ, ಕಾರ್ಮಿಕ ಹಾಗೂ ಜನವಿರೋಧಿ ಮಸೂದೆಗಳನ್ನು ಜಾರಿಗೊಳಿಸು ತ್ತಿದ್ದು, ಇದನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಜನಪರ ಚಳವಳಿಗಳ ಒಕ್ಕೂಟದಿಂದ ದ.ಕ. ಜಿಲ್ಲೆಯಾದ್ಯಂತ ವಾಹನ ಜಾಥಾ ಹಾಗೂ ಬಹಿರಂಗ ಸಭೆಗಳನ್ನು ಆಯೋಜಿಸಲಾಗಿದೆ.
ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಹಾಗೂ ರೈತ ದಲಿತ ಕಾರ್ಮಿಕ ಜನಪರ ಚಳವಳಿಗಳ ಒಕ್ಕೂಟದಿಂದ ನ. 18ರಿಂದ 23ರವರೆಗೆ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಸುಳ್ಯದ ಕಲ್ಲುಗುಂಡಿಯಲ್ಲಿ ಚಾಲನೆ ನೀಡಲಾಗುವುದು ಎಂದು ರೈತ ವುುಖಂಡ ರವಿಕಿರಣ ಪುಣಚ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿಂದು ಈ ಬಗ್ಗೆ ಮಾಹಿತಿ ನೀಡಿದ ಅವರು, ನ. 18ರಂದು ಬೆಳಗ್ಗೆ 10 ಗಂಟೆಗೆ ವಿಧಾನ ಪರಿಷತ್‌ನ ಮಾಜಿ ಸದಸ್ಯ ಅಣ್ಣಾ ವಿನಯ ಚಂದ್ರ ಕಲ್ಲುುಂಡಿಯಲ್ಲಿ ಉದ್ಘಾಟಿಸಲಿದ್ದಾರೆ ಎಂದರು.
ನ. 23ರಂದು ನಗರದ ಪುರಭವನದಲ್ಲಿ ಬೆಳಗ್ಗೆ 10 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಪ್ರಮುಖ ಭಾಷಣಕಾರರಾಗಿ ನಿವೃತ್ತ ನ್ಯಾಯಾಧೀಶ ಎಚ್.ಎನ್. ನಾಗಮೋಹನ್‌ದಾಸ್ ಭಾಗವಹಿಸಲಿದ್ದಾರೆ. ಇದಕ್ಕೂ ಮೊದಲು ನಗರದ ಅಂಬೇಡ್ಕರ್ ವೃತ್ತದಿಂದ ಪುರಭವನದ ವರೆಗೆ ಕಾಲ್ನಡಿಗೆ ಜಾಥಾ ನಡೆಯಲಿದೆ. ಯಾವುದೇ ಪಕ್ಷ ಅಥವಾ ಸಂಘಟನೆಗಳ ಪತಾಕೆಗಳಲ್ಲದೆ, ರಾಷ್ಟ್ರಧ್ವಜದಡಿ ಕಾರ್ಯಕ್ರಮ ನಡೆಯಲಿದೆ ಎಂದರು ಹೇಳಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಕರ್ನಾಟಕ ಪ್ರಾಂತ ರೈತ ಸಂಘ, ಸಿಐಟಿಯು, ಎಐಟಿಯುಸಿ, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ), ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ), ದಲಿತ ಸೇವಾ ಸಮಿತಿ, ದಲಿತ ಹಕ್ಕುಗಳ ಸಮಿತಿ ಸಹಭಾಗಿತ್ವ ದಲ್ಲಿ ಈ ವಾಹನ ಜಾಥಾವು ಜಿಲ್ಲೆಯ ವಿವಿಧ ಕಡೆಗಳಿಗೆ ಸಾಗಿ 23 ಕಡೆಗಳಲ್ಲಿ ಬಹಿರಂಗ ಸಭೆಗಳನ್ನು ಆಯೋಜಿಸಲಾಗಿದೆ ಎಂದು ಅವರು ಹೇಳಿದರು.
ಗೋಷ್ಠಿಯಲ್ಲಿ ವಿವಿಧ ರೈತ ಸಂಘಟನೆಗಳ ಮುಖಂಡರಾದ ಯಾದವ ಶೆಟ್ಟಿ, ಕೃಷ್ಣಪ್ಪ ಸಾಲ್ಯಾನ್, ಸುರೇಶ್ ಭಟ್, ಔಸ್ವಾಲ್ಡ್ ಫೆರ್ನಾಂಡಿಸ್, ರಾಮಣ್ಣ ಉಪಸ್ಥಿತರಿದ್ದರು







