ಬಿ.ಸಿ.ರೋಡ್: ನೇತ್ರಾವತಿ ನದಿಗೆ ಹಾರಿದ ಅಪರಿಚಿತ

ಬಂಟ್ವಾಳ, ನ.8: ಅಪರಿಚಿತ ವ್ಯಕ್ತಿಯೊಬ್ಬ ನೇತ್ರಾವತಿ ನದಿಗೆ ಹಾರಿದ ಘಟನೆ ರವಿವಾರ ಬೆಳಗ್ಗೆ ಬಿ.ಸಿ.ರೋಡಿನಲ್ಲಿ ನಡೆದಿದೆ.
ಬಿ.ಸಿ.ರೋಡಿನ ಹೊಸ ನೇತ್ರಾವತಿ ಸೇತುವೆಯಿಂದ ವ್ಯಕ್ತಿಯೊಬ್ಬ ನದಿಗೆ ಹಾರಿದ್ದಾನೆ ಎನ್ನಲಾಗಿದೆ.
ಬ್ಯಾಗ್ ಹಾಕಿಕೊಂಡು ನಡೆದುಕೊಂಡು ಬರುತ್ತಿದ್ದ ವ್ಯಕ್ತಿ ಬ್ಯಾಗ್ ಸೇತುವೆಯಲ್ಲಿ ಬಿಟ್ಟು ನೇತ್ರಾವತಿ ನದಿಗೆ ಹಾರಿದ್ದಾನೆ ಎಂದು ಹೇಳಲಾಗುತ್ತಿದೆ
ವ್ಯಕ್ತಿ ನದಿಗೆ ಹಾರುತ್ತಿರುವುದನ್ನು ಬೆಂಗಳೂರು ಕಡೆಗೆ ಪ್ರಯಾಣ ಮಾಡುತ್ತಿದ್ದ ಕಾರಿನಲ್ಲಿದ್ದ ಪ್ರಯಾಣಿಕರು ನೋಡಿ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.
Next Story





