Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ಲಾಸ್ಟಿಕ್ ಮರುಬಳಕೆಯಿಂದ ಮನೆ ನಿರ್ಮಾಣ

ಪ್ಲಾಸ್ಟಿಕ್ ಮರುಬಳಕೆಯಿಂದ ಮನೆ ನಿರ್ಮಾಣ

ಪ್ಲಾಸ್ಟಿಕ್ಸ್ ಫೋರ್ ಚೇಂಜ್ ಇಂಡಿಯಾ ಫೌಂಡೇಶನ್ ಯೋಜನೆ

ವಾರ್ತಾಭಾರತಿವಾರ್ತಾಭಾರತಿ8 Nov 2020 9:02 PM IST
share

ಮಂಗಳೂರು, ನ.8: ‘ಪ್ಲಾಸ್ಟಿಕ್ಸ್ ಫೋರ್ ಚೇಂಜ್ ಇಂಡಿಯಾ’ ಫೌಂಡೇಶನ್‌ನಿಂದ ಕರಾವಳಿ ತೀರದಲ್ಲಿ ಅನೌಪಚಾರಿಕ ತ್ಯಾಜ್ಯ ಸಂಗ್ರಹಕಾರರ ಜೀವನ ಮಟ್ಟ ಅಭಿವೃದ್ಧಿಪಡಿಸಲು ಮತ್ತು ಸುಧಾರಿಸಲು ಮುಂದೆ ಬಂದಿದೆ. ಪ್ಲಾಸ್ಟಿಕ್ ಮರುಬಳಕೆಯಿಂದ ಮನೆ ನಿರ್ಮಾಣ ಮಾಡಬಹುದಾದ ಯೋಜನೆಯನ್ನು ಫೌಂಡೇಶನ್ ಆರಂಭಿಸಿದೆ.

ಕರಾವಳಿ ತೀರದ ಪಚ್ಚನಾಡಿ ಮತ್ತು ಮಂಗಳೂರಿನ ಕುರಿಕಟ್ಟ ಪ್ರದೇಶಗಳಲ್ಲಿ ಯೋಜನೆ ರೂಪಿಸಲಾಗುತ್ತಿದೆ. ಸಮುದಾಯದ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳನ್ನು ಪ್ರಾರಂಭಿಸುತ್ತಿದೆ. ಪರಿಸರ ಸುಸ್ಥಿರತೆಯ ನಿಟ್ಟಿನಲ್ಲಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಬಳಸಿ ಕಡಿಮೆ-ವೆಚ್ಚದ ಆಶ್ರಯ ಧಾಮವನ್ನಾಗಿ ಪರಿವರ್ತಿಸುವ ಬೃಹತ್ ಯೋಜನೆಯಾಗಿದೆ.

ಮರುಬಳಕೆಯ ಪ್ಲಾಸ್ಟಿಕ್‌ನ ಬೇಡಿಕೆ ಕುಸಿತವಾಗಿದೆ. ಇದು ಭಾರತದಂತಹ ದೇಶಗಳಲ್ಲಿ ಮರುಬಳಕೆ ವ್ಯವಸ್ಥೆಗಳ ಬೆನ್ನೆಲುಬಾಗಿರುವ ಅನೌಪ ಚಾರಿಕ ತ್ಯಾಜ್ಯ ಸಂಗ್ರಹಕಾರರ ಆದಾಯದ ಅವಕಾಶಗಳ ಮೇಲೆ ಬಹಳಷ್ಟು ಪರಿಣಾಮ ಬೀರಿದೆ. ಪ್ರತಿಷ್ಠಾನವು ನವೀನ ಮತ್ತು ಪರಿಸರ ಸುಸ್ಥಿರತಾ ಯೋಜನೆಯನ್ನು ಪ್ರಾರಂಭಿಸಿದೆ. ಇದು ಪ್ಲಾಸ್ಟಿಕ್ ತ್ಯಾಜ್ಯವನ್ನು ಮರುಬಳಕೆ ಮಾಡುವ ಕಟ್ಟಡ ಸಾಮಗ್ರಿಗಳಾಗಿ ಪರಿವರ್ತಿಸುತ್ತದೆ. ಇದನ್ನು ಅನೌಪಚಾರಿಕ ತ್ಯಾಜ್ಯ ಸಂಗ್ರಹಕಾರರಿಗೆ ಕಡಿಮೆ-ವೆಚ್ಚದ ಆಶ್ರಯಧಾಮವನ್ನು ನಿರ್ಮಿಸಲು ಬಳಸಬಹುದು.

ಪಚ್ಚನಾಡಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯದಿಂದ ಮಾಡಿದ ಮೊದಲ ಮನೆ ಪೂರ್ಣಗೊಂಡ ನಂತರ ಯೋಜನೆಯ ಯಶಸ್ವಿಕೃತ ಮಾದರಿ/ಪೈಲಟ್ ತಯಾರಾಗಿರುತ್ತದೆ. ಪ್ಲಾಸ್ಟಿಕ್ ತ್ಯಾಜ್ಯವನ್ನು ಬಳಸಿಕೊಂಡು ಇಂತಹ ಅನೇಕ ಮನೆಗಳನ್ನು ನಿರ್ಮಿಸಲು ಈ ಯೋಜನೆಯನ್ನು ಉಳಿಸಿಕೊಳ್ಳಲು ಮತ್ತು ಬೆಳೆಸಲು ಫೌಂಡೇಶನ್ ಯೋಜಿಸಿದೆ. ಇದರಿಂದಾಗಿ ಈ ಸಮುದಾಯಗಳಿಗೆ ಆದಾಯದ ಅವಕಾಶಗಳನ್ನು ಸೃಷ್ಟಿಸುತ್ತದೆ. ಇದರಿಂದ ಪ್ಲಾಸ್ಟಿಕ್ ಮಾಲಿನ್ಯದ ಸಮಸ್ಯೆಯ ವಿರುದ್ಧ ಹೋರಾಡಿದಂತಾಗುತ್ತದೆ.

ಆರ್ಥಿಕ, ಸಾಮಾಜಿಕ, ಶಿಕ್ಷಣ, ಆರೋಗ್ಯ ರಕ್ಷಣೆ-ಪೋಷಣೆ, ತರಬೇತಿ ಮತ್ತು ಮಾಹಿತಿ ಕಾರ್ಯಾಗಾರ, ಮಹಿಳಾ ಸಶಕ್ತೀಕರಣ, ವಸ್ತುಗಳ ಮರುಬಳಕೆ ಮತ್ತು ತೀರಾ ಕಡಿಮೆ ವೆಚ್ಚದಲ್ಲಿ ಆಶ್ರಯದಾಮಗಳ ನಿರ್ಮಾಣಗಳು ಸಹಿತ ಹಲವು ಸೇವೆಗಳು ಈ ಯೋಜನೆಯ ಭಾಗವಾಗಿವೆ.

ತಂತ್ರಜ್ಞಾನವನ್ನು ಸಕಾರಾತ್ಮಕವಾಗಿ ಬಳಸಬಹುದು. ಕಡಿಮೆ ಮೌಲ್ಯದ ಪ್ಲಾಸ್ಟಿಕ್ ತ್ಯಾಜ್ಯವನ್ನು ಮನೆಗಳಾಗಿ ಪರಿವರ್ತಿಸಬಹುದು. ಮಂಗಳೂರಿನ ಸಮುದಾಯಗಳಿಗೆ ಆನ್‌ಲೈನ್ ಶಿಕ್ಷಣ ನೀಡಲು ಮುಂದಾಗಿದ್ದೇವೆ. ಹಲವು ಪರಿಹಾರಗಳನ್ನು ಸಕ್ರಿಯಗೊಳಿಸಲು ಸಂಸ್ಥೆ ಸನ್ನದ್ಧವಾಗಿದೆ ಎಂದು ಪ್ಲಾಸ್ಟಿಕ್ ಫಾರ್ ಚೇಂಜ್ ಇಂಡಿಯಾ ಫೌಂಡೇಶನ್‌ನ ಶಿಫ್ರಾ ಜೇಕಬ್ಸ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X