ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ
ಮಂಗಳೂರು, ನ.7: ಪುತ್ತೂರು ಅರಿಯಡ್ಕ ಗ್ರಾಪಂ ಗ್ರಂಥಾಲಯದಲ್ಲಿ ಖಾಲಿ ಇರುವ ಮೇಲ್ವಿಚಾರಕರ ಹುದ್ದೆಯನ್ನು ಭರ್ತಿ ಮಾಡಲು ಅಭ್ಯರ್ಥಿ ಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಎಸೆಸೆಲ್ಸಿ ಪಾಸಾದ ಅದೇ ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸುವವರು ಅರ್ಜಿ ಸಲ್ಲಿಸಬಹುದು. ಮೇಲ್ವಿಚಾರಕರ ಸ್ಥಾನವು ಮಹಿಳಾ ಅಭ್ಯರ್ಥಿಗೆ ಮೀಸಲಾಗಿದ್ದು, ಭರ್ತಿ ಮಾಡಿದ ಅರ್ಜಿಯ ಜೊತೆ ಇನ್ನಿತರ ದೃಢೀಕೃತ ದಾಖಲೆಗಳನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಡಿ.7ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಗ್ರಾಪಂ ಅಥವಾ ಮಂಗಳೂರು ಜಿಲ್ಲಾ ಕೇಂದ್ರ ಗ್ರಂಥಾಲಯದ ದೂ.ಸಂ.: 0824-2441905ನ್ನು ಸಂಪರ್ಕಿಸುವಂತೆ ಮುಖ್ಯ ಗ್ರಂಥಾಲಯ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





